ಸ್ಮಾರ್ಟ್ಫೋನ್ಗಳಲ್ಲಿ ಸ್ಯಾಮ್ಸಂಗ್ ಕಂಪೆನಿ (Samsung Company) ಭಾರೀ ಹಿಂದಿನಿಂದಲೂ ಬಹಳಷ್ಟು ಜನಪ್ರಿಯತೆಯನ್ನು ಪಡೆದುಕೊಂಡು ಬಂದಿದೆ. ಸ್ಯಾಮ್ಸಂಗ್ ಕಂಪೆನಿ ವಿಶೇಷ ಫೀಚರ್ಸ್ ಅನ್ನು ಒಳಗೊಂಡ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಸ್ಯಾಮ್ಸಂಗ್ ಈ ಬಾರಿ ಬಿಡುಗಡೆ ಮಾಡಿದ ಎಲ್ಲಾ ಸ್ಮಾರ್ಟ್ಫೋನ್ಗಳು 5ಜಿ ನೆಟ್ವರ್ಕ್ ಫೀಚರ್ಸ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್ಫೋನ್ಗಳಲ್ಲಿ ಒಂದಾದ ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್23 5ಜಿ (Samsung Galaxy F23 5G) ಸ್ಮಾರ್ಟ್ಫೋನ್ ಮೇಲೆ ಜನಪ್ರಿಯ ಇಕಾಮರ್ಸ್ ಕಂಪೆನಿಯಾಗಿರುವ ಫ್ಲಿಪ್ಕಾರ್ಟ್ (Flipkart) ಇದೀಗ ಬಂಪರ್ ಆಫರ್ ಅನ್ನು ಘೋಷಿಸಿದೆ. ಈ ಸ್ಮಾರ್ಟ್ಫೋನ್ ಅನ್ನು ಖರೀದಿಸುವ ಪ್ಲ್ಯಾನ್ನಲ್ಲಿರುವವರು ಶೇಕಡಾ 37% ರಿಯಾಯಿತಿಯನ್ನು ಪಡೆಯಬಹುದಾಗಿದೆ.
ಇತ್ತೀಚೆಗೆ ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್23 5ಜಿ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಕಾಲಿಟ್ಟಿತ್ತು. ಇದೀಗ ಈ ಸ್ಮಾರ್ಟ್ಫೋನ್ ಮೇಲೆ ಫ್ಲಿಪ್ಕಾರ್ಟ್ ಶೇಕಡಾ 37% ರಷ್ಟು ರಿಯಾಯಿತಿಯನ್ನು ಘೋಷಿಸಿದೆ. ಇದರ ಜೊತೆಗೆ ಇನ್ನೂ ಹಲವಾರು ಆಫರ್ಸ್ಗಳು ಈ ಸ್ಮಾರ್ಟ್ಫೋನ್ನಲ್ಲಿ ಲಭ್ಯವಿದ್ದು, ಅವಗಳನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.
ಏನೆಲ್ಲಾ ಆಫರ್ಸ್ ಲಭ್ಯವಿದೆ?
ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್23 5ಜಿ ಸ್ಮಾರ್ಟ್ಫೋನ್ ಫ್ಲಿಪ್ಕಾರ್ಟ್ ತಾಣದಲ್ಲಿ 6ಜಿಬಿ ರ್ಯಾಮ್ ಮತ್ತು 128ಜಿಬಿ ವೇರಿಯಂಟ್ನ ಮೂಲ ಬೆಲೆ 23,999 ರೂಪಾಯಿ ಆಗಿದೆ. ಆದರೆ ಈಗ ಆಫರ್ ಮೂಲಕ ಕೇವಲ 14,999 ರೂಪಾಯಿಯ ಪ್ರೈಸ್ ಟ್ಯಾಗ್ನಲ್ಲಿ ಖರೀದಿ ಮಾಡಬಹುದಾಗಿದೆ. ಇದಲ್ಲದೆ ಆಯ್ದ ಕೆಲವು ಬ್ಯಾಂಕ್ಗಳ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ, ಹೆಚ್ಚುವರಿ ರಿಯಾಯಿತಿ ಸಹ ಲಭ್ಯವಾಗಲಿದೆ. ಇದರೊಂದಿಗೆ ಆಕರ್ಷಕ ಎಕ್ಸ್ಚೇಂಜ್ ಕೊಡುಗೆಯೂ ಸಹ ಗ್ರಾಹಕರಿಗೆ ದೊರೆಯುತ್ತದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್23 5ಜಿ ಸ್ಮಾರ್ಟ್ಫೋನ್ ಫೀಚರ್ಸ್
ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್23 5ಜಿ ಸ್ಮಾರ್ಟ್ಫೋನ್ 6.6 ಇಂಚಿನ ಫುಲ್ ಹೆಚ್ಡಿ+ ಇನ್ಫಿನಿಟಿ ಯು ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 120Hz ರಿಫ್ರೆಶ್ ರೇಟ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಸಹ ಒಳಗೊಂಡಿದೆ.
ಕ್ಯಾಮೆರಾ ಫೀಚರ್ಸ್
ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್23 5ಜಿ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಈ ಸ್ಮಾರ್ಟ್ಫೋನ್ನಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್ಸಂಗ್ ISOCELL JN1 ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇನ್ನು ಸೆಲ್ಫಿಗಾಗಿ ಮತ್ತು ವಿಡಿಯೋ ಕಾಲ್ಗಳಿಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಿದ್ದಾರೆ.
ಬ್ಯಾಟರಿ ಫೀಚರ್ಸ್
ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್23 5ಜಿ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಒಳಗೊಂಡಿದೆ.ಈ ಬ್ಯಾಟರಿಯು 25W ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಬೆಂಬಲಿಸುತ್ತದೆ. ಜೊತೆಗೆ ಬ್ಯಾಟರಿ ಬ್ಯಾಕಪ್ ಅನ್ನು ಉಳಿಸುವ ನಿಟ್ಟಿನಲ್ಲಿ ಅಡಾಪ್ಟಿವ್ ಪವರ್ ಸೇವಿಂಗ್ ತಂತ್ರಜ್ಞಾನವನ್ನು ಸಹ ಅಳವಡಿಸಲಾಗಿದೆ.
ಇತರೆ ಫೀಚರ್ಸ್
ಇನ್ನು ಈ ಸ್ಮಾರ್ಟ್ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ, 4ಜಿ ಎಲ್ಟಿಇ, ವೈಫೈ, ಬ್ಲೂಟೂತ್, ಜಿಪಿಎಸ್, ಯುಎಸ್ಬಿ ಟೈಪ್ ಸಿ ಪೋರ್ಟ್ ಮತ್ತು 3.5mm ಹೆಡ್ಫೋನ್ ಜ್ಯಾಕ್ ಅನ್ನು ಸಹ ಬೆಂಬಲಿಸಲಿದೆ.
ಇದನ್ನೂ ಓದಿ: ಏರ್ಟೆಲ್ನಿಂದ 200 ರೂಪಾಯಿ ಒಳಗಿನ ರೀಚಾರ್ಜ್ ಪ್ಲ್ಯಾನ್ಸ್ ಬಿಡುಗಡೆ!
ಸ್ಟೋರೇಜ್ ಸಾಮರ್ಥ್ಯ
ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್23 5ಜಿ ಸ್ಮಾರ್ಟ್ಫೋನ್ 3 ಸ್ಟೋರೇಜ್ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದೆ. ಇದರಲ್ಲಿ 4 ಜಿಬಿ ರ್ಯಾಮ್ ಮತ್ತು 128 ಜಿಬಿ, 6 ಜಿಬಿ ರ್ಯಾಮ್ ಮತ್ತು 128 ಜಿಬಿ ಮತ್ತು 4 ಜಿಬಿ ರ್ಯಾಮ್ ಮತ್ತು 64 ಜಿಬಿ ಸ್ಟೋರೇಜ್ ಆಯ್ಕೆಗಳಲ್ಲಿ ಲಭ್ಯವಿದೆ. ಇನ್ನು ಮೈಕ್ರೋ ಎಸ್ಡಿ ಕಾರ್ಡ್ ಮೂಲಕ ಇದನ್ನು 1 ಟಿಬಿವರೆಗೆ ಸ್ಟೋರೇಜ್ ಅನ್ನು ವಿಸ್ತರಿಸುವ ಅವಕಾಶವಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ