ಸ್ಮಾರ್ಟ್ಫೋನ್ಗಳು (Smartphones) ಈಗಿನ ಕಾಲದಲ್ಲಿ ಅಗತ್ಯ ಸಾಧನವಾಗಿ ಬದಲಾವಣೆಯಾಗಿದೆ. ಯಾವುದೇ ಕೆಲಸವಾಗಬೇಕಾದರು ಸ್ಮಾರ್ಟ್‌ಫೋನ್ ಮೂಲಕ ಕ್ಷಣಮಾತ್ರದಲ್ಲಿ ಮಾಡಿ ಮುಗಿಸಬಹುದಾಗಿದೆ. ಯಾವುದೇ ಗೇಮ್ (Games) ಅನ್ನು ಆಡಲು, ಡಾಕ್ಯುಮೆಂಟ್ ಅನ್ನು ಶೇರ್ ಮಾಡಲು, ಸಿನೆಮಾ ನೋಡಲು ಮತ್ತು ಶೇರ್ ಮಾಡಲು ಇವೆಲ್ಲದಕ್ಕೂ ಮೊಬೈಲ್ ಒಂದಿದ್ದರೆ ಸಾಕು. ಆದರೆ ಇವೆಲ್ಲವುಗಳನ್ನು ಬಳಕೆ ಮಾಡಬೇಕಾದರೆ ಉತ್ತಮ ಗುಣಮಟ್ಟದ ಪ್ರೊಸೆಸರ್ (Processor), ಆಪರೇಟಿಂಗ್ ಸಿಸ್ಟಮ್ಗಳು ಅಗತ್ಯವಾಗಿರುತ್ತದೆ. ಹೀಗಿದ್ದರೆ ಮಾತ್ರ ಮೊಬೈಲ್ ಅನ್ನು ಯಾವುದೇ ಸಮಸ್ಯೆ ಇಲ್ಲದೆ ಬಳಕೆ ಮಾಡಬಹುದು. ಅದಕ್ಕಾಗಿ ಪ್ರೊಸೆಸರ್ ಸಾಮರ್ಥ್ಯ ಗುಣಮಟ್ಟದಲ್ಲಿರಬೇಕು.
ಸ್ಮಾರ್ಟ್ಫೋನ್ಗಳನ್ನು ಖರೀದಿಸುವಾಗ ಅದರ ಫೀಚರ್ಸ್ಗಳನ್ನು ನೋಡಿಕೊಂಡು ಖರೀದಿಸುವುದು ಮುಖ್ಯವಾಗಿರುತ್ತದೆ. ಏಕೆಂದರೆ ಫೀಚರ್ಸ್ ಗುಣಮಟ್ಟದಲ್ಲಿದ್ದರೆ ಬಳಕೆ ಮಾಡುವಾಗ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ. ಆದರೆ ಇಲ್ಲಿ ನಿಮಗೆ ನಾವು ಎಷ್ಟು ಬಳಕೆ ಮಾಡಿದ್ರೂ ಹ್ಯಾಂಗ್ ಆಗದೇ ಇರುವಂತಹ ಸ್ಮಾರ್ಟ್ಫೋನ್ಗಳು ಯಾವುದೆಲ್ಲಾ ಎಂಬುದರ ಮಾಹಿತಿಯನ್ನು ನೀಡ್ತೇವೆ.
ಒನ್‌ಪ್ಲಸ್ 10 ಪ್ರೋ ಸ್ಮಾರ್ಟ್‌ಫೋನ್
ಒನ್‌ಪ್ಲಸ್ 10 ಪ್ರೋ ಸ್ಮಾರ್ಟ್‌ಫೋನ್ 1,440 x 3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಕ್ಯೂ ಹೆಚ್‌ಡಿ+ ಲಿಕ್ವಿಡ್ ಅಮೋಲ್ಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 ಜೆನ್ 1 ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯದೊಂದಿಗೆ ಬಿಡುಗಡೆಯಾಗಿದೆ.
ಇನ್ನು ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 12 ನಲ್ಲಿ ಆಕ್ಸಿಜನ್ ಓಎಸ್ 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಒನ್‌ಪ್ಲಸ್ 10 ಪ್ರೋ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX789 ಸೆನ್ಸಾರ್ ಹೊಂದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಒಳಗೊಂಡಿದೆ.
ರೆಡ್ಮಿ ನೋಟ್ 11 ಪ್ರೋ ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 11 ಪ್ರೋ ಸ್ಮಾರ್ಟ್‌ಫೋನ್ ಮುಖ್ಯವಾಗಿ 6.67 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ನೊಂದಿಗೆ ರಕ್ಷಿಸಲಾಗಿದೆ. ಹಾಗೆಯೇ ಈ ಡಿಸ್‌ಪ್ಲೇ 1080x2400 ಪಿಕ್ಸೆಲ್ ರೆಸಲ್ಯೂಶನ್ ನೀಡಲಿದ್ದು, ಇದು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ.
ಇನ್ನು ಈ ಫೋನ್‌ನಲ್ಲಿ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ಅಳವಡಿಸಲಾಗಿದ್ದು, ಉತ್ತಮ ಕಾರ್ಯಕ್ಷಮತೆ ಇರಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾವಿದೆ. ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಹೊಂದಿದ್ದು, ಇದರಲ್ಲಿ 67W ವೇಗದ ಚಾರ್ಜಿಂಗ್ ಸಾಮರ್ಥ್ಯವಿದೆ.
ಅಸುಸ್ ಆರ್ಓಜಿ ಫೋನ್ 5 ಸ್ಮಾರ್ಟ್‌ಫೋನ್
ಅಸುಸ್ ಆರ್ಓಜಿ ಫೋನ್ 5 ಸ್ಮಾರ್ಟ್‌ಫೋನ್ 1,080 x 2,448 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ.
ಈ ಸ್ಮಾರ್ಟ್‌ಫೋನ್ ಸಹ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್22 ಅಲ್ಟ್ರಾ ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್22 ಅಲ್ಟ್ರಾ ಸ್ಮಾರ್ಟ್‌ಫೋನ್ 6.8 ಇಂಚಿನ ಎಡ್ಜ್ ಕ್ಯೂಹೆಚ್ಡಿ ಡೈನಾಮಿಕ್ ಅಮೋಲ್ಡ್ 2X ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್ ಆಕ್ಟಾ ಕೋರ್ 4nm ಎಸ್ಓಸಿ ಪ್ರೊಸೆಸರ್ ಬೆಂಬಲ ಹೊಂದಿದ್ದು, 12 ಜಿಬಿ ರ್‍ಯಾಮ್ ವೇರಿಯಂಟ್ ಆಯ್ಜೆಯನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 12 ಓಎಸ್ ನೊಂದಿಗೆ ಕಾರ್ಯನಿರ್ವಹಿಸುತ್ತದೆ.
ಇದನ್ನೂ ಓದಿ: ಇನ್ಸ್ಟಾಗ್ರಾಮ್ನಲ್ಲಿ ರೀಲ್ಸ್ ಮಾಡಿ ಲಕ್ಷಗಟ್ಟಲೆ ಹಣ ಸಂಪಾದಿಸಿ! ಸೂಪರ್ ಐಡಿಯಾ ಇಲ್ಲಿದೆ
ಹಾಗೆಯೇ ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಪಡೆದಿದ್ದು, 45W ಫಾಸ್ಟ್ ಚಾರ್ಜಿಂಗ್ ಬೆಂಬಲ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ