ಸ್ಮಾರ್ಟ್ಫೋನ್ಗಳು (Smartphones) ಪ್ರತಿಯೊಬ್ಬರಿಗೂ ಅತ್ಯಗತ್ಯ ಸಾಧನವಾಗಿದೆ. ಈ ಸಾಧನವನ್ನು ಬಳಕೆ ಮಾಡ್ಬೇಕಾದ್ರೆ ರೀಚಾರ್ಜ್ ಮಾಡುವುದು ಮುಖ್ಯವಾಗಿರುತ್ತದೆ. ಅದೇ ರೀತಿ ದೇಶದಲ್ಲಿ ಹಲವಾರು ಟೆಲಿಕಾಂ ಕಂಪೆನಿಗಳಿವೆ. ಆದರೆ ಜಿಯೋ (Jio), ಏರ್ಟೆಲ್ (Airtel), ವೊಡಫೋನ್ ಐಡಿಯಾ ಕಂಪೆನಿಗಳು ತಮ್ಮ ಗ್ರಾಹಕರನ್ನು ಆಕರ್ಷಿಸುವ ಕಾರಣಕ್ಕಾಗಿ ಹೊಸ ಹೊಸ ರೀಚಾರ್ಜ್ ಪ್ಲ್ಯಾನ್ಗಳನ್ನು ಬಿಡುಗಡೆ ಮಾಡುತ್ತಿರುತ್ತದೆ. ಇದರಲ್ಲಿ ಜಿಯೋ ದೇಶದ ಟೆಲಿಕಾಂ ಕಂಪೆನಿಗಳಲ್ಲಿ ನಂಬರ್ ಒನ್ ಕಂಪೆನಿಯೆಂದು ಗುರುತಿಸಿಕೊಂಡಿದ್ದರೆ, ಇದಕ್ಕೆ ಪ್ರಬಲ ಪೈಪೋಟಿ ನೀಡುವ ಉದ್ದೇಶದಿಂದ ಏರ್ಟೆಲ್, ವೊಡಫೋನ್ ಐಡಿಯಾ (Vodafone Idea) ಟೆಲಿಕಾಂ ಕಂಪೆನಿಗಳು ಕಡಿಮೆ ಬೆಲೆಯಲ್ಲಿ ಉತ್ತಮ ಪ್ರಯೋಜನಗಳನ್ನು ನೀಡುವ ರೀಚಾರ್ಜ್ ಪ್ಲ್ಯಾನ್ಗಳನ್ನು ಪರಿಚಯಿಸುತ್ತಿರುತ್ತದೆ.
ವೊಡಫೋನ್ ಮತ್ತು ಐಡಿಯಾ ವಿಲೀನವಾದ ಬಳಿಕ ತನ್ನ ಗ್ರಾಹಕರಿಗಾಗಿ ವಿಐ ಕಂಪೆನಿ ಉತ್ತಮ ಪ್ರಯೋಜನಗಳನ್ನು ಹೊಂದಿರುವ ರೀಚಾರ್ಜ್ ಪ್ಲ್ಯಾನ್ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ ಮತ್ತೆ ಹೊಸ ಯೋಜನೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಡೇಟಾ ಉಚಿತವಾಗಿ ಗ್ರಾಹಕರಿಗೆ ಲಭ್ಯವಾಗುತ್ತದೆ.
ವೊಡಫೋನ್ ಐಡಿಯಾದ 3099 ರೂಪಾಯಿ ಪ್ಲ್ಯಾನ್
ವೊಡಫೋನ್ ಐಡಿಯಾ ಟೆಲಿಕಾಂನ ಈ ಯೋಜನೆಯಲ್ಲಿ ಪ್ರತಿದಿನ 2ಜಿಬಿ ಡೇಟಾ ಸೌಲಭ್ಯವನ್ನು ಪಡೆಯಬಹುದು. ಇದರೊಂದಿಗೆ ಯಾವುದೇ ನೆಟ್ವರ್ಕ್ಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಮಾಡುವ ಪ್ರಯೋಜನ ಸಿಗಲಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಹೆಚ್ಚುವರಿಯಾಗಿ ಈ ಗ್ರಾಹಕರಿಗೆ 75ಜಿಬಿ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಒಂದು ವರ್ಷದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಉಚಿತ ಚಂದಾದಾರಿಕೆ ಸಹ ದೊರೆಯಲಿದ್ದು, ಇದರೊಂದಿಗೆ ವಿಐ ಆ್ಯಪ್ಸ್‌ಗಳು ಲಭ್ಯವಾಗಲಿವೆ.
ಇದನ್ನೂ ಓದಿ: 240W ವೇಗದ ಬ್ಯಾಟರಿ ಹೊಂದಿದ ಸ್ಮಾರ್ಟ್ಫೋನ್ ರಿಲೀಸ್ಗೆ ಡೇಟ್ ಫಿಕ್ಸ್! ಬೆಲೆ, ಫೀಚರ್ಸ್ ಬಗ್ಗೆ ಮಾಹಿತಿ ಇಲ್ಲಿದೆ
ವೊಡಫೋನ್ ಐಡಿಯಾದ 2899 ರೂಪಾಯಿ ಪ್ಲ್ಯಾನ್
ವೊಡಫೋನ್ ಐಡಿಯಾ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಯೋಜನೆ ಮೂಲಕ ಗ್ರಾಹಕರು ಪ್ರತಿದಿನ 1.5ಜಿಬಿ ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ.
ಇನ್ನು ವಿಐ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯ್ಸ್ ಕರೆಗಳ ಸೌಲಭ್ಯ, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 75ಜಿಬಿ ಡೇಟಾ ಪ್ರಯೋಜನ ಸಿಗಲಿದ್ದು, ಜೊತೆಗೆ ವೀಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯವಿದೆ.
ವೊಡಫೋನ್ ಐಡಿಯಾದ 1499 ರೂಪಾಯಿ ಪ್ಲ್ಯಾನ್
ವೊಡಫೋನ್ ಐಡಿಯಾ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನವನ್ನು 365 ದಿನಗಳವರೆಗೆ ಪಡೆಯಬಹುದಾಗಿದೆ. ಇನ್ನು ಈ ಯೋಜನೆಯಲ್ಲಿ ಪ್ರತಿದಿನ 1.5ಜಿಬಿ ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿಐ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯ್ಸ್ ಕರೆಗಳ ಸೌಲಭ್ಯ, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 7ಜಿಬಿ ಡೇಟಾ ಪ್ರಯೋಜನ ಸಿಗಲಿದ್ದು, ಜೊತೆಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.
ವೊಡಫೋನ್ ಐಡಿಯಾದ 601 ರೂಪಾಯಿ ಪ್ಲ್ಯಾನ್
ವಿಐ ಟೆಲಿಕಾಂನ 601 ರೂಪಾಯಿ ಪ್ರಿಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹಾಗೆಯೇ ಅನಿಯಮಿತ ಕರೆ, ದಿನನಿತ್ಯ 3ಜಿಬಿ ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್ ಪ್ರಯೋಜನ ನೀಡಲಿದೆ. ಇನ್ನು ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ 16ಜಿಬಿ ಡೇಟಾ ಸೌಲಭ್ಯ ಪಡೆದಿದೆ. ಜೊತೆಗೆ ವೊಡಫೋನ್ ಐಡಿಯಾ ಆ್ಯಪ್ಸ್ ಹಾಗೂ ಡೇಟಾ ರೋಲ್ ಓವರ್ ಸೌಲಭ್ಯ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್ ಪ್ಲಾನ್ ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ನೀಡಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ