ಟೆಲಿಕಾಂ ಕಂಪೆನಿಗಳಲ್ಲಿ (Telecom Company) ಮುಂಚೂಣಿಯಲ್ಲಿರುವ ಕಂಪೆನಿಯೆಂದರೆ ಅದು ಜಿಯೋ. ಈ ಕಂಪೆನಿ ತನ್ನ ಗ್ರಾಹಕರಿಗಾಗಿ ಹೊಸ ಹೊಸ ರೀಚಾರ್ಜ್ ಪ್ಲ್ಯಾನ್ಗಳನ್ನು ಬಿಡುಗಡೆ ಮಾಡುತ್ತಿರುತ್ತದೆ. ಜಿಯೋ ಕಂಪೆನಿಗೆ ಪ್ರಬಲ ಪೈಪೋಟಿ ನೀಡುತ್ತಿರುವ ಕಂಪೆನಿಗಳೆಂದರೆ ಏರ್ಟೆಲ್ (Airtel), ಬಿಎಸ್ಎನ್ಎಲ್, ವೊಡಫೋನ್ ಕಂಪೆನಿಗಳು. ಇಷ್ಟೆಲ್ಲಾ ಕಂಪೆನಿಗಳು ಜಿಯೋವನ್ನು ಹಿಂದಿಕ್ಕಿಲು ಎಷ್ಟೇ ಹೊ ಪ್ಲ್ಯಾನ್ಗಳನ್ನು ಪರಿಚಯಿಸಿದರೂ ಜಿಯೋ ಮಾತ್ರ ತನ್ನ ಸ್ಥಾನವನ್ನು ಬಿಟ್ಟುಕೊಟ್ಟಿಲ್ಲ. ಇದಲ್ಲದೆ ಜಿಯೋ (Jio) ಸದ್ಯ ದೇಶದೆಲ್ಲೆಡೆ 5ಜಿ ಸೇವೆಯನ್ನು ಸ್ಥಾಪಿಸುವ ಮೂಲಕ ಭಾರೀ ಸದ್ದು ಮಾಡುತ್ತಿದೆ. ಈ ಮಧ್ಯೆ ಜಿಯೋ ಮತ್ತೆ ಹೊಸ ಪ್ರೀಪೇಯ್ಡ್ ಮತ್ತು ಪೋಸ್ಟ್‌ಪೇಯ್ಡ್ ಪ್ಲ್ಯಾನ್ಗಳನ್ನು ಪರಿಚಯಿಸಿದೆ.
ಜಿಯೋ ತನ್ನ ಗ್ರಾಹಕರಿಗಾಗಿ 399 ರೂ, 599 ರೂ, 799 ರೂ, 999 ರೂಪಾಯಿ ಯೋಜನೆಗಳನ್ನು ಪರಿಚಯಿಸಿದೆ. ಈ ಯೋಜನೆಗಳಲ್ಲಿ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ನಂತಹ ಜನಪ್ರಿ ಓಟಿಟಿ ಪ್ಲಾಟ್ಫಾರ್ಮ್ಗಳ ಉಚಿತ ಚಂದಾದಾರಿಕೆಯನ್ನು ಪಡೆಯಬಹುದು.
ಜಿಯೋನ 399 ರೂಪಾಯಿ ರೀಚಾರ್ಜ್ ಪ್ಲ್ಯಾನ್
ಜಿಯೋ 399 ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 75 ಜಿಬಿ ಡೇಟಾದೊಂದಿಗೆ ಅನ್ಲಿಮಿಟೆಡ್ ವಾಯ್ಸ್ ಕಾಲ್ ಮಾಡುವ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಈ ಪೋಸ್ಟ್‌ಪೇಯ್ಡ್ ಪ್ಲ್ಯಾನ್ನಲ್ಲಿ 200ಜಿಬಿ ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ ಮತ್ತು ಪ್ರತಿದಿನ 100 ಎಸ್‌ಎಮ್‌ಎಸ್ ಅನ್ನು ಉಚಿತವಾಗಿ ಮಾಡಬಹುದಾಗಿದೆ.
ಇದನ್ನೂ ಓದಿ: ನಿಮ್ಮ ಸ್ಮಾರ್ಟ್ಫೋನ್ ಕಳೆದು ಹೋಗಿದ್ಯಾ? ತಕ್ಷಣ ಈ ಟ್ರಿಕ್ಸ್ ಬಳಸಿ
ಹಾಗೆಯೇ ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್, ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಿಗಲಿದೆ. ಇದಲ್ಲದೆ, ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸವಾನ್ ಹಾಗೂ ಅನ್ಲಿಮಿಟೆಡ್ ಕಾಲರ್ ಟ್ಯೂನ್ ಸೌಲಭ್ಯಗಳು ಲಭ್ಯವಾಗಲಿವೆ.
ಜಿಯೋನ 599 ರೂಪಾಯಿ ಪೋಸ್ಟ್ಪೇಯ್ಸ್ ಯೋಜನೆ
ಜಿಯೋ 599 ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 100 ಜಿಬಿ ಸೌಲಭ್ಯ ದೊರೆಯುತ್ತದೆ. ಇನ್ನು ಈ ಯೋಜನೆಯ ಮೂಲಕ ಯಾವುದೇ ನೆಟ್ವರ್ಕ್ಗೂ ಅನ್ಲಿಮಿಟೆಡ್ ಕಾಲ್ ಅನ್ನು ಉಚಿತವಾಗಿ ಮಾಡಬಹುದು. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಕಳುಹಿಸುವ ಅವಕಾಶವು ಸಿಗಲಿದೆ.
ಹಾಗೆಯೇ ಈ ಪ್ಲ್ಯಾನಿನಲ್ಲಿ 200ಜಿಬಿ ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ ಮತ್ತು ಹೆಚ್ಚುವರಿ ಒಂದು ಸಿಮ್ ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇನ್ನುಳಿದಂತೆ ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್ ಚಂದಾದಾರಿಕೆ, ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಿಗಲಿದೆ.
ಜಿಯೋನ 799 ರೂಪಾಯಿ ರೀಚಾರ್ಜ್ ಪ್ಲ್ಯಾನ್
ಜಿಯೋ ಬಿಡುಗಡೆ ಮಾಡಿರುವಂತಹ 799 ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 150 ಜಿಬಿ ಡೇಟಾ ದೊರೆಯುತ್ತದೆ. ಇನ್ನು ಇದರಲ್ಲಿ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಗ್ರಾಹಕರಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಅನ್ನು ಉಚಿತವಾಗಿ ಮಾಡಬಹುದು. ಹಾಗೆಯೇ ಈ ಪ್ಲ್ಯಾನಿನಲ್ಲಿ 200 ಜಿಬಿ ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ ಮತ್ತು ಹೆಚ್ಚುವರಿ ಎರಡು ಸಿಮ್ ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದರೊಂದಿಗೆ ಈ ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಹೆಚ್ಚುವರಿಯಾಗಿ ಗ್ರಾಹಕರಿಗೆ ನೆಟ್‌ಫ್ಲಿಕ್ಸ್ ಚಂದಾದಾರಿಕೆ, ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಿಗಲಿದೆ.
ಜಿಯೋನ 999 ರೂಪಾಯಿ ರೀಚಾರ್ಜ್ ಪ್ಲ್ಯಾನ್
ಜಿಯೋ 999ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 200 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಗ್ರಾಹಕರಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಕಳುಹಿಸುವ ಅವಕಾಶವು ಸಿಗಲಿದೆ.ಹಾಗೆಯೇ ಈ ಪ್ಲ್ಯಾನಿನಲ್ಲಿ 500 GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ ಮತ್ತು ಹೆಚ್ಚುವರಿ ಎರಡು ಸಿಮ್ ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದರೊಂದಿಗೆ ಈ ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಹೆಚ್ಚುವರಿಯಾಗಿ ಗ್ರಾಹಕರಿಗೆ ನೆಟ್‌ಫ್ಲಿಕ್ಸ್ ಚಂದಾದಾರಿಕೆ, ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಹ ಪಡೆಯಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ