ಸ್ಮಾರ್ಟ್ಫೋನ್ (Smartphone) ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಅದ್ರಲ್ಲೂ ಹೊಸ ಹೊಸ ಮೊಬೈಲ್ಗಳು ಮಾರುಕಟ್ಟೆಗೆ ಬಂದಾಗ, ಖರೀದಿಸಬೇಕೆಂದು ಕಾತರದಿಂದ ಕಾಯುತ್ತಿರುತ್ತಾರೆ. ಅದಕ್ಕೆ ತಕ್ಕಂತೆ ಈ ಇಕಾಮರ್ಸ್ ಕಂಪನಿಗಳು (E-Commerse) ಕೂಡ ಜನರನ್ನು ಆಕರ್ಷಿಸುವ ಸಲುವಾಗಿ ವಿಶೇಷ ಆಫರ್ಸ್ಗಳನ್ನು ನೀಡುತ್ತಿರುತ್ತವೆ. ಇದೀಗ ಜನಪ್ರಿಯ ಇಕಾಮರ್ಸ್ ಕಂಪನಿಯಾಗಿರುವ ಫ್ಲಿಪ್ಕಾರ್ಟ್ ಇಯರ್ ಎಂಡ್ ಸೇಲ್ ಅನ್ನು ಆರಂಭಿಸಿದೆ. ಈ ಸೇಲ್ನಲ್ಲಿ ಫ್ಲಿಪ್ಕಾರ್ಟ್ (Flipkart) ಗ್ಯಾಜೆಟ್ಗಳನ್ನು, ಮೊಬೈಲ್ಗಳನ್ನು, ಫ್ಯಾಶನ್ ಐಟಮ್ಗಳನ್ನು ಭಾರೀ ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿದೆ. ಅದ್ರಲ್ಲೂ ಸ್ಮಾರ್ಟ್ಫೋನ್ಗಳ ಮೇಲೆ ಭರ್ಜರಿ ಆಫರ್ಸ್ ಅನ್ನು ಘೋಷಿಸಿದೆ.
ಫ್ಲಿಪ್ಕಾರ್ಟ್ ಇಯರ್ ಎಂಡ್ ಸೇಲ್ ಅನ್ನು ಆರಂಭಿಸಿದ್ದು, ಇದರಲ್ಲಿ ಸ್ಮಾರ್ಟ್ಫೋನ್ಗಳನ್ನು ಭಾರೀ ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿದೆ. ಅದ್ರಲ್ಲೂ ಸ್ಯಾಮ್ಸಂಗ್, ಆ್ಯಪಲ್, ಮೊಟೊರೊಲಾ, ಗೂಗಲ್ ಪಿಕ್ಸೆಲ್ ಕಂಪನಿಯ ಸ್ಮಾರ್ಟ್ಫೋನ್ಗಳನ್ನು ಅಗ್ಗದ ಬೆಲೆಯಲ್ಲಿ ಖರೀದಿಸಬಹುದಾಗಿದೆ.
ಐಫೋನ್ 13 ಸ್ಮಾರ್ಟ್ಫೋನ್
ಫ್ಲಿಪ್ಕಾರ್ಟ್ನ ಇಯರ್ ಎಂಡ್ ಸೇಲ್ನಲ್ಲಿ ಐಫೋನ್ 13 5ಜಿ ಸ್ಮಾರ್ಟ್ಫೋನ್ ಅನ್ನು ಬಿಗ್ ಆಫರ್ನಲ್ಲಿ ನೀಡುತ್ತಿದೆ. ಇದರಲ್ಲಿ 128ಜಿಬಿ ಸ್ಟೋರೇಜ್ ಹೊಂದಿದ ಸ್ಮಾರ್ಟ್ಫೋನ್ ಮೇಲೆ 7,991ರೂ. ರಿಯಾಯಿತಿ ಘೋಷಿಸಲಾಗಿದೆ. ಈ ರಿಯಾಯಿತಿಯಿಂದ ಇದನ್ನು ನೀವು ಕೇವಲ 61,999 ರೂ.ಗಳ ಆರಂಭಿಕ ಬೆಲೆಯಲ್ಲಿ ಖರೀದಿಸಬಹುದಾಗಿದೆ.
ಇದನ್ನೂ ಓದಿ: 2023 ರಲ್ಲಿ ಶಿಯೋಮಿ ಕಂಪನಿಯಿಂದ ಬರಲಿರುವ ಸ್ಮಾರ್ಟ್ಫೋನ್ಗಳ ಪಟ್ಟಿ ಇಲ್ಲಿದೆ
ಇನ್ನು ಐಫೋನ್ 13 ಸ್ಮಾರ್ಟ್ಫೋನ್ 6.1 ಇಂಚಿನ ಡಿಸ್ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸೆಲ್ ರೆಸಲ್ಯೂಶನ್ ಪಡೆದಿದೆ. ಈ ಡಿಸ್ಪ್ಲೇ 60Hz ರಿಫ್ರೆಶ್ ರೇಟ್ ಹೊಂದಿದ್ದು, 1200 ನಿಟ್ಸ್ ಬ್ರೈಟ್ನೆಸ್ ಅನ್ನು ಹೊಂದಿದೆ. ಇದು A15 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ನೊಂದಿಗೆ ಕಾರ್ಯನಿರ್ವಹಿಸಲಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್23 5ಜಿ ಸ್ಮಾರ್ಟ್ಫೋನ್
ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್23 5ಜಿ ಸ್ಮಾರ್ಟ್ಫೋನ್ ಪ್ಲಿಪ್ಕಾರ್ಟ್ನಲ್ಲಿ 14,999ರೂ.ಗಳಿಗೆ ಮಾರಾಟ ಮಾಡಲಾಗುತ್ತಿದೆ. ಆದರೆ ಇದನ್ನು ಆಫರ್ಸ್ ಮೂಲಕ ಭಾರೀ ರಿಯಾಯಿತಿಯಲ್ಲಿ ಪಡೆಯಬಹುದು. ಈ ಸ್ಮಾರ್ಟ್ಫೋನ್ ಅನ್ನು ಫೆಡರಲ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಕೆದಾರರು ಕೇವಲ 13,499ರೂ. ಬೆಲೆಯಲ್ಲಿ ಖರೀದಿಸಬಹುದು. ಈ ಸ್ಮಾರ್ಟ್ಫೋನ್ 6.6 ಇಂಚಿನ ಫುಲ್ ಹೆಚ್ಡಿ + ಇನ್ಫಿನಿಟಿ ಡಿಸ್ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 750G SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಫೋನ್ ಆಂಡ್ರಾಯ್ಡ್ 12 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುತ್ತದೆ.
ಮೊಟೊ ಎಡ್ಜ್ 30 ಸ್ಮಾರ್ಟ್ಫೋನ್
ಮೊಟೊ ಎಡ್ಜ್ 30 ಸ್ಮಾರ್ಟ್ಫೋನ್ ಫ್ಲಿಪ್ಕಾರ್ಟ್ನಲ್ಲಿ ಕೇವಲ 22,999ರೂ. ಬೆಲೆಯಲ್ಲಿ ಸ್ಮಾರ್ಟ್ಫೋನ್ ಪ್ರಿಯರು ಖರೀದಿಸಬಹುದು. ಈ ಸ್ಮಾರ್ಟ್ಫೋನ್ 6.7-ಇಂಚಿನ ಫುಲ್ ಹೆಚ್ಡಿ ಪ್ಲಸ್ ಪೋಲ್ಡ್ 10-ಬಿಟ್ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 144Hz ರಿಫ್ರೆಶ್ ರೇಟ್ಅನ್ನು ಬೆಂಬಲಿಸಲಿದೆ. ಇದು 360Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್ಫೋನ್ ಸ್ನಾಪ್ಡ್ರಾಗನ್ 778G+ SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಜೊತೆಗೆ ಆಂಡ್ರಾಯ್ಡ್ 12 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್22 ಪ್ಲಸ್
ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್22 ಪ್ಲಸ್ ಸ್ಮಾರ್ಟ್ಫೋನ್ ಫ್ಲಿಪ್ಕಾರ್ಟ್ನಲ್ಲಿ 69,999 ರೂ.ಗಳ ಆರಂಭಿಕ ಬೆಲೆಯಲ್ಲಿ ಪಡೆಯಬಹುದು. ಇನ್ನು ಈ ಸ್ಮಾರ್ಟ್ಫೋನ್ ಅನ್ನು ಫೆಡರಲ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ಗಳ ಮೂಲಕ ಖರೀದಿಸುವುದಾದರೆ 10 % ಡಿಸ್ಕೌಂಟ್ ಪಡೆಯಬಹುದಾಗಿದೆ. ಇನ್ನು ಈ ಸ್ಮಾರ್ಟ್ಫೋನ್ 6.6 ಇಂಚಿನ ಪೂರ್ಣ ಹೆಚ್ಡಿ ಪ್ಲಸ್ ಡೈನಾಮಿಕ್ ಅಮೋಲ್ಡ್ 2X ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್ ಬೆಂಬಲ ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ನಲ್ಲಿ ಈ ಸ್ಮಾರ್ಟ್ಫೋನ್ ಕಾರ್ಯನಿರ್ವಹಿಸುತ್ತದೆ.
ಗೂಗಲ್ ಪಿಕ್ಸೆಲ್ 6ಎ
ಗೂಗಲ್ ಪಿಕ್ಸೆಲ್ 6ಎ ಸ್ಮಾರ್ಟ್ಫೋನ್ ಫ್ಲಿಪ್ಕಾರ್ಟ್ ಸೇಲ್ನಲ್ಲಿ ಭರ್ಜರಿ ಡಿಸ್ಕೌನೊಂದಿಗೆ ಪಡೆಯಬಹುದು. ಈ ಸ್ಮಾರ್ಟ್ಫೋನ್ ಇದೀಗ ನಿಮಗೆ ಕೇವಲ 29,999ರೂ. ಬೆಲೆಯಲ್ಲಿ ದೊರೆಯಲಿದೆ. ಇನ್ನು ಈ ಸ್ಮಾರ್ಟ್ಫೋನ್ 6.1 ಇಂಚಿನ ಫುಲ್ ಹೆಚ್ಡಿ ಪ್ಲಸ್ OLED ಡಿಸ್ಪ್ಲೇ ಹೊಂದಿದೆ. ಈ ಡಿಸ್ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಗೂಗಲ್ ಟೆನ್ಸರ್ SoC ಮತ್ತು ಟೈಟಾನ್ ಎಮ್2 ಸೆಕ್ಯುರಿಟಿ ಕೋಪ್ರೊಸೆಸರ್ ಅನ್ನು ಒಳಗೊಂಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ