ಭಾರತೀಯ ಟೆಕ್ ವಲಯದಲ್ಲಿ ಟೆಲಿಕಾಂ ಕಂಪೆನಿಗಳು (Telecom Companies) ವ್ಯಾಪಕವಾಗಿ ಬೆಳವಣಿಗೆಯಾಗುತ್ತಿದೆ. ಈ ಮಧ್ಯೆ ಜಿಯೋ, ಏರ್ಟೆಲ್ ಮತ್ತು ವೊಡಫೋನ್ ಐಡಿಯಾ (Vodafone Idea) ಕಂಪೆನಿಗಳು ಒಂದಕ್ಕೊಂದು ಪ್ರಬಲ ಪೈಪೋಟಿಯನ್ನು ನೀಡುತ್ತಲೇ ಇದೆ. ಜಿಯೋ ಭಾರೀ ಅಗ್ಗದ ರೀಚಾರ್ಜ್ ಯೋಜನೆಗಳನ್ನು ಬಿಡುಗಡೆ ಮಾಡುವ ಮೂಲಕ ಅತೀ ಹೆಚ್ಚು ಗ್ರಾಹಕರನ್ನು ಹೊಂದಿಕೊಂಡು ಟೆಲಿಕಾಂ ವಲಯದಲ್ಲಿ ಅಗ್ರಸ್ಥಾನದಲ್ಲಿದೆ.ಇನ್ನು ಇದಕ್ಕೆ ಏರ್ಟೆಲ್ ಮತ್ತು ವೊಡಫೋನ್ ಐಡಿಯಾ ಕಂಪೆನಿಗಳು ಹೊಸ ಹೊಸ ರೀಚಾರ್ಜ್ ಯೋಜನೆಗಳನ್ನು (Recharge Plans) ಪರಿಚಯಿಸುವ ಮೂಲಕ ನಿರಂತರವಾಗಿ ಸ್ಪರ್ಧೆಯನ್ನು ನೀಡುತ್ತಾ ಬರಿತ್ತಿದೆ. ಅದ್ರಲ್ಲೂ ವೊಡಫೋನ್ ಮತ್ತು ಐಡಿಯಾ ವಿಲೀನವಾದ ಮೇಲೆ ವಿಐ ಕಂಪೆನಿಯಿಂದ ಬಹಳಷ್ಟು ಪ್ರೀಪೇಯ್ಡ್ ಪ್ಲ್ಯಾನ್ಗಳು ಬಿಡುಗಡೆಯಾಗಿದೆ ಮತ್ತು ಸಾಕಷ್ಟು ಪ್ರಯೋಜನಗಳು ಸಹ ಲಭ್ಯವಿದೆ.
ಹೌದು, ವೊಡಫೋನ್ ಐಡಿಯಾ ಹಲವಾರು ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳನ್ನು ಒಳಗೊಂಡಿದ್ದು, ಇದರಲ್ಲಿ ಕೆಲವು ಯೋಜನೆಗಳು ಡೇಟಾ ಸೌಲಭ್ಯದ ಜೊತೆಗೆ ಓಟಿಟಿ ಪ್ಲಾಟ್ಫಾರ್ಮ್ಗಳ ಚಂದಾದಾರಿಕೆ ಸಹ ಉಚಿತವಾಗಿ ಪಡೆಯಬಹುದಾಗಿದೆ. ಹಾಗಿದ್ರೆ ಆ ಯೋಜನೆಗಳು ಯಾವುದೆಂದು ತಿಳಿಬೇಕಾದ್ರೆ ಈ ಲೇಖನವನ್ನು ಓದಿ.
ವೊಡಫೋನ್ ಐಡಿಯಾದ 901 ರೂಪಾಯಿ ಪ್ಲ್ಯಾನ್
ವೊಡಫೋನ್ ಐಡಿಯಾ ಟೆಲಿಕಾಂನ 901 ರೂಪಾಯಿ ಪ್ರಿಪೇಯ್ಡ್ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ ಗ್ರಾಹಕರು ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಓಟಿಟಿ ಪ್ಲಾಟ್ಫಾರ್ಮ್ನ ಉಚಿತ ಚಂದಾದಾರಿಕೆ ಸೌಲಭ್ಯ ದೊರೆಯುತ್ತದೆ. ಇನ್ನು ಈ ಯೋಜನೆಯಲ್ಲಿ ಅನಿಯಮಿತ ಕರೆ, ದಿನನಿತ್ಯ 3 ಜಿಬಿ ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್ ಮಾಡುವ ಪ್ರಯೋಜನ ಸಿಗುತ್ತದೆ. ಇನ್ನು ಈ ಪ್ರಿಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಹೊಂದಿದ್ದು, ಹೆಚ್ಚುವರಿಯಾಗಿ 48ಜಿಬಿ ಡೇಟಾ ಸೌಲಭ್ಯ ನೀಡುತ್ತದೆ. ಜೊತೆಗೆ ವಿಐ ಆ್ಯಪ್ಸ್ ಹಾಗೂ ಡೇಟಾ ರೋಲ್ ಓವರ್ ಸೌಲಭ್ಯ ಸಹ ಸಿಗಲಿದೆ.
ಇದನ್ನೂ ಓದಿ: ಒನ್ಪ್ಲಸ್ ಕಂಪೆನಿಯ ಬಹುನಿರೀಕ್ಷಿತ ಸ್ಮಾರ್ಟ್ಫೋನ್ನ ಪ್ರೀಬುಕಿಂಗ್ ಆರಂಭ! ಫೀಚರ್ಸ್ ನೋಡಿದ್ರೆ ಖರೀದಿಸೋದು ಗ್ಯಾರಂಟಿ
ವೊಡಫೋನ್ ಐಡಿಯಾದ 601 ರೂಪಾಯಿ ಪ್ಲ್ಯಾನ್
ವೊಡಫೋನ್ ಐಡಿಯಾ ಟೆಲಿಕಾಂನ 601 ರೂಪಾಯಿ ಪ್ರಿಪೇಯ್ಡ್ ಪ್ಲ್ಯಾನ್ನಲ್ಲಿ ಗ್ರಾಹಕರು ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ಪಡೆಯುತ್ತಾರೆ. ಇದಲ್ಲದೆ ಈ ಯೋಜನೆಯಲ್ಲಿ ಅನ್ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ, ದೈನಂದಿನ 3 ಜಿಬಿ ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್ ಮಾಡುವ ಪ್ರಯೋಜನ ಸಿಗಲಿದೆ.
ಇನ್ನು ಈ ಪ್ರಿಪೇಯ್ಡ್ ಪ್ಲ್ಯಾನ್ ಕೇವಲ 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದ್ದು, ಒಟ್ಟು ವ್ಯಾಲಿಡಿಟಿ ಅವಧಿ ಮುಗಿಯುವ ಹೊತ್ತಿಗೆ 84ಜಿಬಿ ಡೇಟಾವನ್ನು ಬಳಕೆ ಮಾಡಬಹುದು. ಇದರೊಂದಿಗೆ ಹೆಚ್ಚುವರಿಯಾಗಿ 16ಜಿಬಿ ಡೇಟಾ ಸೌಲಭ್ಯ ಸಹ ಸಿಗಲಿದೆ. ಜೊತೆಗೆ ವಿಐ ಆ್ಯಪ್ಸ್ ಹಾಗೂ ಡೇಟಾ ರೋಲ್ ಓವರ್ ಯೋಜನೆ ಲಭ್ಯವಿದೆ.
ವೊಡಫೋನ್ ಐಡಿಯಾದ 2899 ರೂಪಾಯಿಯ ವಾರ್ಷಿಕ ಯೋಜನೆ
ವಿಐ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯಲ್ಲಿ ಪ್ರತಿದಿನ 1.5 ಜಿಬಿ ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವೊಡಫೋನ್ ಐಡಿಯಾ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯ್ಸ್ ಕರೆಗಳ ಸೌಲಭ್ಯ, ಪ್ರತಿದಿನ 100 ಉಚಿತ ಎಸ್ಎಮ್ಎಸ್- ಮಾಡುವ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 75 ಜಿಬಿ ಡೇಟಾ ಪ್ರಯೋಜನ ಸಿಗಲಿದ್ದು, ಜೊತೆಗೆ ವೀಕೆಂಡ್ ಡೇಟಾ ರೋಲ್ ಓವರ್ ಪ್ಲ್ಯಾನ್ ಲಭ್ಯವಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ