ಸ್ಮಾರ್ಟ್ಫೋನ್ ಯುಗದಲ್ಲಿ ಸಂಚಲನ ಮೂಡಿಸಿರುವ ಕಂಪೆನಿ ಒಂದಿದ್ದರೆ ಅದು ಆ್ಯಪಲ್ ಕಂಪೆನಿ (Apple Company). ಈ ಕಂಪೆನಿ ಮಾರುಕಟ್ಟೆಗೆ ಪ್ರೀಮಿಯಂ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಮೂಲಕ ಬಹಳಷ್ಟು ಜನಪ್ರಿಯತೆಯನ್ನು ಪಡೆದಿದೆ. ಪ್ರತಿಯೊಬ್ಬರು ಜೀವನದಲ್ಲಿ ಒಮ್ಮೆಯಾದರೂ ಐಫೋನ್ಗಳನ್ನು ಖರೀದಿ ಮಾಡಬೇಕೆಂದುಕೊಂಡಿರುತ್ತಾರೆ. ಆದರೆ ಕೆಲವರಿಗೆ ಇದರ ಬೆಲೆ ದುಬಾರಿಯಾಗಿರುವುದರಿಂದ ಖರೀದಿ ಮಾಡಲು ಸಾಧ್ಯವಾಗುವುದಿಲ್ಲ. ಇನ್ನು ನೀವೇನಾದರು ಹೊಸ ಮಾದರಿಯ ಐಫೋನ್ ಅನ್ನು ಖರೀದಿ ಮಾಡಬೇಕೆಂದು ಅಂದುಕೊಂಡಿದ್ದರೆ ಇಲ್ಲಿದೆ ಸೂಪರ್ ಆಫರ್ಸ್. ಜನಪ್ರಿಯ ಇಕಾಮರ್ಸ್ ವೆಬ್ಸೈಟ್ ಆಗಿರುವ ಇಮ್ಯಾಜಿನ್ ಸ್ಟೋರ್ ಪ್ರೇಮಿಗಳ ದಿನದ ಪ್ರಯುಕ್ತ ಐಫೋನ್ 14 (IPhone 14) ಮತ್ತು ಐಫೋನ್ 14 ಪ್ಲಸ್ (IPhone 14 Plus) ಸ್ಮಾರ್ಟ್ಫೋನ್ಗಳ ಮೇಲೆ ಬಿಗಗ ಆಫರ್ ಅನ್ನು ಘೋಷಿಸಿದೆ.
ಇಮ್ಯಾಜಿನ್ ಸ್ಟೋರ್ ಆ್ಯಪಲ್ ಕಂಪೆನಿಯ ಉತ್ಪನ್ನಗಳನ್ನು ಮಾರಾಟ ಮಾಡುವಲ್ಲಿ ಜನಪ್ರಿಯತೆ ಪಡೆದಿದೆ. ಸದ್ಯ ಪ್ರೇಮಿಗಳ ದಿನದ ಪ್ರಯುಕ್ತ ಐಫೋನ್ 14 ಮತ್ತು ಐಫೋನ್ 14 ಪ್ಲಸ್ ಸ್ಮಾರ್ಟ್ಫೋನ್ಗಳ ಮೇಲೆ ವಿಶೇಷ ಆಫರ್ ಅನ್ನು ಘೋಷಿಸಿದೆ. ಈ ಮೂಲಕ ಯಾರಿಗಾದರೂ ಐಫೋನ್ ಅನ್ನು ಗಿಫ್ಟ್ ನೀಡಬೇಕು ಎನ್ನುವವರಿಗೆ ಈ ಸಮಯ ಉತ್ತಮವಾಗಿದೆ.
ಏನೆಲ್ಲಾ ಆಫರ್ಸ್ ಲಭ್ಯವಿದೆ?
ಆ್ಯಪಲ್ ಉತ್ಪನ್ನಗಳ ಪ್ರಮುಖ ಮಾರಾಟಗಾರ ಎನಿಸಿರುವ ಇಮ್ಯಾಜಿನ್ ಸ್ಟೋರ್ ಪ್ರೇಮಿಗಳ ದಿನದ ಅಂಗವಾಗಿ ಐಫೋನ್ 14 ಫೋನಿಗೆ 6,000 ರೂಪಾಯಿ ಮತ್ತು ಐಫೋನ್ 14 ಪ್ಲಸ್ ಫೋನ್‌ಗೆ 7,000 ರೂಪಾಯಿಗಳ ದೊಡ್ಡ ಮಟ್ಟಿನ ರಿಯಾಯಿತಿಯನ್ನು ಘೋಷಿಸಿದೆ. ಇನ್ನು ಬ್ಯಾಂಕ್ ಆಫರ್ಸ್ ಸಹ ಇದರ ಮೇಲೆ ಲಭ್ಯವಿದೆ. ಈ ಮೂಲಕ ಹೆಚ್‌ಡಿಎಫ್‌ಸಿ ಬ್ಯಾಂಕ್ ಮೂಲಕ ಖರೀದಿಸಿದರೆ, 4,000 ರೂಪಾಯಿವರೆಗೆ ಕ್ಯಾಶ್‌ಬ್ಯಾಕ್ ಅನ್ನು ಪಡೆಯಬಹುದು.
ಇದನ್ನೂ ಓದಿ: ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ ಹೊಸ ಸ್ಮಾರ್ಟ್ಟಿವಿ! ಬೆಲೆ, ಫೀಚರ್ಸ್ ಬಗ್ಗೆ ಮಾಹಿತಿ ಇಲ್ಲಿದೆ
ಐಫೋನ್ 14 ಸೀರಿಸ್ ಸ್ಮಾರ್ಟ್ಫೋನ್ಗಳ ಫೀಚರ್ಸ್ ಹೇಗಿದೆ?
ಐಫೋನ್ 14 ಫೋನ್
ಐಫೋನ್ 14 ಫೋನ್ 6.1 ಇಂಚಿನ ಫುಲ್ ಹೆಚ್ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇಯು 1200ನಿಟ್ಸ್ ಬ್ರೈಟ್ನೆಸ್ ಅನ್ನು ನೀಡುತ್ತದೆ. ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾವು 12 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ 12 ಮೆಗಾಪಿಕ್ಸೆಲ್ನ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇನ್ನು ಈ ಸ್ಮಾರ್ಟ್ಫೋನ್ 128ಜಿಬಿ, 256ಜಿಬಿ ಮತ್ತು 512ಜಿಬಿ ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಐಫೋನ್ 14 ಫೋನ್ 5ಜಿ ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದು ಇ-ಸಿಮ್ ಆಯ್ಕೆಯನ್ನು ಸಹ ಒಳಗೊಂಡಿದೆ.
ಐಫೋನ್ 14 ಪ್ಲಸ್
ಐಫೋನ್ 14 ಪ್ಲಸ್ ಫೋನ್ 6.7 ಇಂಚಿನ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್ಪ್ಲೇಯು OLED ಡಿಸ್‌ಪ್ಲೇ ಜೊತೆಗೆ 1200 ನಿಟ್ಸ್ ಬ್ರೈಟ್ನೆಸ್ ಸಪೋರ್ಟ್ ಅನ್ನು ಪಡೆದಿದೆ. ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾವು 12 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ 12 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಇನ್ನು ಈ ಸ್ಮಾರ್ಟ್ಫೋನ್ 128ಜಿಬಿ, 256ಜಿಬಿ ಮತ್ತು 512ಜಿಬಿ ಸ್ಟೋರೇಜ್ ಸಾಮರ್ಥ್ಯದಲ್ಲಿ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿದೆ. ಐಫೋನ್ 14 ಸ್ಮಾರ್ಟ್ಫೋನ್ಗೆ ಹೋಲಿಸಿದರೆ, ಈ ಫೋನ್ ಉತ್ತಮ ಬ್ಯಾಟರಿ ಬ್ಯಾಕಪ್ ಸಾಮರ್ಥ್ಯವನ್ನು ಪಡೆದಿದೆ. ಐಫೋನ್ 14 ಪ್ಲಸ್ ಫೋನ್ ಸಹ 5ಜಿ ಕನೆಕ್ಟಿವಿಟಿ ಸೌಲಭ್ಯವನ್ನು ಪಡೆದಿದೆ. ಜೊತೆಗೆ ಇ-ಸಿಮ್ ಬೆಂಬಲವನ್ನು ಸಹ ನೀಡುತ್ತದೆ.
ಐಫೋನ್ 14 ಪ್ರೋ ಮ್ಯಾಕ್ಸ್ ಸ್ಮಾರ್ಟ್ಫೋನ್
ಐಫೋನ್ 14 ಪ್ರೋ ಫೋನ್ 6.1 ಇಂಚಿನ ಸೂಪರ್ ರೆಟಿನಾ ಎಕ್ಸ್‌ಡಿಆರ್ ಡಿಸ್‌ಪ್ಲೇ ಒಳಗೊಂಡಿದೆ. ಈ ಮೊಬೈಲ್ನಲ್ಲಿ ಮೊದಲ ಬಾರಿಗೆ ಆಲ್ವೇಸ್ ಆನ್ ಡಿಸ್‌ಪ್ಲೇ ಫೀಚರ್ ಅನ್ನು ನೀಡಲಾಗಿದೆ. ಅದೇ ರೀತಿ ಐಫೋನ್ 14 ಪ್ರೋ ಮ್ಯಾಕ್ಸ್ ಫೋನ್ 6.7 ಇಂಚಿನ ರೆಟಿನಾ ಎಕ್ಸ್‌ಡಿಆರ್ ಡಿಸ್‌ಪ್ಲೇ ಹೊಂದಿದ್ದು, ಇದು ಸಹ ಆಲ್ವೇಸ್ ಆನ್ ಫೀಚರ್ ಒಳಗೊಂಡಿದೆ.
ಹಿಂಬದಿಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಕ್ವಾಡ್ ಪಿಕ್ಸೆಲ್ ಕ್ಯಾಮೆರಾವನ್ನು 65 ಪ್ರತಿಶತ ದೊಡ್ಡ ಸಂವೇದಕವನ್ನು ಹೊಂದಿದೆ. 48 ಮೆಗಾ ಪಿಕ್ಸೆಲ್ ಕ್ಯಾಮೆರಾ 2x ಟೆಲಿಫೋಟೋ ವೀಕ್ಷಣೆಯನ್ನು ಸಹ ನೀಡುತ್ತದೆ. ಐಫೋನ್ 14 ಪ್ರೊ ಆಕ್ಷನ್ ಮೋಡ್ ಅನ್ನು ನೀಡುತ್ತದೆ, ಇದು ಆಟೋಫೋಕಸ್, ಕ್ರ್ಯಾಶ್ ಡಿಟೆಕ್ಷನ್ ಮತ್ತು Emergency SOS via satellite ಸಂಪರ್ಕವನ್ನು ಬಳಸಿಕೊಂಡು ಸುಧಾರಿತ ಮುಂಭಾಗದ ಕ್ಯಾಮೆರಾ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ