ಶಿಯೋಮಿ ಕಂಪನಿ (Xiaomi Company) ತನ್ನ ಬ್ರಾಂಡ್ನ ಅಡಿಯಲ್ಲಿ ಸಾಕಷ್ಟು ಸ್ಮಾರ್ಟ್ಫೋನ್ಗಳನ್ನು (Smartphones) ಬಿಡುಗಡೆ ಮಾಡಿದೆ. ಶಿಯೋಮಿ ಕಂಪನಿ ಮೊಬೈಲ್ ಮಾರುಕಟ್ಟೆಯಲ್ಲಿ ಬಹಳಷ್ಟು ಮುಂಚೂಣಿಯಲ್ಲಿದೆ. ಇದುವರೆಗೆ ಈ ಕಂಪನಿಯ ಅಡಿಯಲ್ಲಿ ಬಿಡುಗಡೆಗೊಂಡಂತಹ ಸ್ಮಾರ್ಟ್ಫೋನ್ಗಳ ಬಹಳಷ್ಟು ಬೇಡಿಕೆಯಲ್ಲಿವೆ. ಇದೀಗ ಶಿಯೋಮಿ ಕಂಪನಿ ಮುಂದಿನ ವರ್ಷದಲ್ಲಿ ಹಲವಾರು ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವುದಾಗಿ ಯೋಜಿಸಿದೆ. ರೆಡ್ಮಿ (Redmi) ಬಿಡುಗಡೆ ಮಾಡಿದ ಹೆಚ್ಚಿನ ಮೊಬೈಲ್ಗಳು 20 ಸಾವಿರಕ್ಕಿಂತ ಕಡಿಮೆ ಬೆಲೆಯದ್ದಾಗಿದೆ. ಈ ವರ್ಷ ಮತ್ತೆ ಬಜೆಟ್ ಬೆಲೆ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವುದಾಗಿ ನಿರ್ಧರಿಸಿದೆ. ಈ ಸ್ಮಾರ್ಟ್ಫೋನ್ಗಳು ಮಾರುಕಟ್ಟೆಯಲ್ಲಿ ವಿಶಿಷ್ಟ ಫೀಚರ್ಸ್ಗಳೊಂದಿಗೆ ಮಾರುಕಟ್ಟೆಗೆ ಕಾಲಿಡುತ್ತದೆ ಎಂದು ಕಂಪನಿ ಹೇಳಿದೆ.
ರೆಡ್ಮಿ ಕಂಪನಿಯು ಹೊಸ ವರ್ಷದಲ್ಲಿ ಸಾಕಷ್ಟು ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವುದಾಗಿ ಯೋಜಿಸಿದೆ. ಈ ಬಾರಿ ರೆಡ್ಮಿ ಕಂಪನಿಯಿಂದ ಅತ್ಯುತ್ತಮ ಫೀಚರ್ಸ್ ಹೊಂದಿದ ಸ್ಮಾರ್ಟ್ಫೋನ್ಗಳು ಮಾರುಕಟ್ಟೆಗೆ ಲಗ್ಗೆಯಿಡಲಿದೆ. ಹಾಗಿದ್ರೆ ಈ ಬಾರಿ ರೆಡ್ಮಿ ಕಂಪನಿಯಿಂದ 2023 ರಲ್ಲಿ ಬರಲಿರುವ ಸ್ಮಾರ್ಟ್ಫೋನ್ಗಳು ಯಾವುದೆಲ್ಲಾ ಎಂಬುದನ್ನು ಓದಿ.
ರೆಡ್ಮಿ ನೋಟ್ 12
ರೆಡ್ಮಿ ನೋಟ್ 12 ಸ್ಮಾರ್ಟ್ಫೋನ್ ಮುಂದಿನ ವರ್ಷದಲ್ಲಿ ಬಿಡುಗಡೆಯಾಗಲಿರುವಂತಹ ರೆಡ್ಮಿ ಕಂಪನಿಯ ಮೊದಲ ಸ್ಮಾರ್ಟ್ಫೋನ್ ಆಗಿದೆ. ಈ ಸ್ಮಾರ್ಟ್ಫೋನ್ 6.67 ಇಂಚಿನ ಫುಲ್ ಹೆಚ್ಡಿ ಪ್ಲಸ್ ಅಮೋಲ್ಡ್ ಡಿಸ್ಪ್ಲೇ ಹೊಂದಿರಲಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ರೇಟ್ ಸಾಮರ್ಥ್ಯವನ್ನು ಹೊಂದಿರುತ್ತದೆ.
ಇದನ್ನೂ ಓದಿ: ಫ್ಲಿಪ್ಕಾರ್ಟ್ನ ‘ಇಯರ್ ಎಂಡ್ ಸೇಲ್‘ ಆರಂಭ, ಈ ಸಾಧನಗಳ ಮೇಲೆ ಬಂಪರ್ ಆಫರ್!
ಜೊತೆಗೆ 1200 ಗರಿಷ್ಠ ಬ್ರೈಟ್ನೆಸ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಡಿಸ್ಪ್ಲೇ 85.0% ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದೆ. ಇದರ ರಚನೆಯ ಅನುಪಾತ 20:9 ರಷ್ಟಿದೆ ಎಂದು ಹೇಳಲಾಗಿದೆ. ರೆಡ್ಮಿ ನೋಟ್ 12 ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 4 Gen 1SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ.
ರೆಡ್ಮಿ ನೋಟ್ 12 5ಜಿ
ರೆಡ್ಮಿ ನೋಟ್ 12 5ಜಿ ಸ್ಮಾರ್ಟ್ಫೋನ್ 128ಜಿಬಿ, 256ಜಿಬಿ ಸ್ಟೋರೇಜ್ ಮತ್ತು 4ಜಿಬಿ, 6ಜಿಬಿ ಮತ್ತು 8ಜಿಬಿ ರ್ಯಾಮ್ ರೂಪಾಂತರಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಹಾಗೆಯೇ ಇದು 48 ಎಂಪಿ ಮತ್ತು 2 ಎಂಪಿ ಡ್ಯುಯಲ್ ಪ್ರಾಥಮಿಕ ಕ್ಯಾಮೆರಾ ಮತ್ತು 8 ಎಂಪಿ ಮುಂಭಾಗದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇನ್ನು ಈ ಫೋನಿನ ಡಿಸ್ಪ್ಲೇಯು 6.67 ಇಂಚುಗಳ 1080 x 2400 ಪಿಕ್ಸೆಲ್ಗಳಾಗಿದ್ದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 4 ಜನ್ 1 ಪ್ರೊಸೆಸರ್ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್ಫೋನ್ 5000 mAh ಬ್ಯಾಟರಿಯನ್ನು ಸಹ ಒಳಗೊಂಡಿದೆ.
ಶಿಯೋಮಿ ರೆಡ್ಮಿ ನೋಟ್ 13
ಶಿಯೋಮಿ ರೆಡ್ಮಿ ನೋಟ್ 13 ಬಜೆಟ್ ಬೆಲೆಯ ಸ್ಮಾರ್ಟ್ಫೋನ್ ಆಗಿದ್ದು, ಜನವರಿ 26, 2023 ರಂದು ಬಿಡುಗಡೆಯಾಗುವ ನಿರೀಕ್ಷೆಯಿದೆ. ಇನ್ನು ಈ ಸ್ಮಾರ್ಟ್ಫೋನ್ನ ಫೀಚರ್ಸ್ ಬಗ್ಗೆ ಹೇಳುವುದಾದರೆ ಇದು 6.52 ಇಂಚಿನ IPS LCD ಜೊತೆಗೆ 90Hz ರಿಫ್ರೆಶ್ ರೇಟ್ ಸಾಮರ್ಥ್ಯವನ್ನು ಹೊಂದಿರಲಿದೆ. ಇನ್ನು ಕ್ಯಾಮೆರಾ ಫೀಚರ್ಸ್ ಬಗ್ಗೆ ಹೇಳುವುದಾದರೆ ಇದರ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಜೊತೆಗೆ ಇದರಲ್ಲಿ ಮುಂಭಾಗದ ಕ್ಯಾಮೆರಾ 6 ಮೆಗಾಪಿಕ್ಸೆಲ್ ಆಗಿದೆ. ಇದು ಮೀಡಿಯಾ ಟೆಕ್ ಹಿಲಿಯೋ G88 ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 18W ವೇಗದ ಚಾರ್ಜಿಂಗ್ನೊಂದಿಗೆ 5000mAh ಬ್ಯಾಟರಿ ಬ್ಯಾಕಪ್ ಅನ್ನು ಹೊಂದಿದೆ.
ಶಿಯೋಮಿ ರೆಡ್ಮಿ ನೋಟ್ 13 ಪ್ರೋ ಮ್ಯಾಕ್ಸ್ 5ಜಿ
ಶಿಯೋಮಿ ರೆಡ್ಮಿ ನೋಟ್ 13 ಪ್ರೋ ಮ್ಯಾಕ್ಸ್ 5ಜಿ ಸ್ಮಾರ್ಟ್ಫೋನ್ 120Hz ರಿಫ್ರೆಶ್ ರೇಟ್ ಪಡೆದಿದ್ದು, ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 720G ಚಿಪ್ಸೆಟ್ ಪ್ರೊಸೆಸರ್ ಅನ್ನು ಒಳಗೊಂಡಿದೆ. ಈ ಫೋನ್ ವಿಶೇಷವಾಗಿ 108 ಮೆಗಾಪಿಕ್ಸೆಲ್ನಲ್ಲಿ ಹಿಂಬದಿಯ ಕ್ಯಾಮೆರಾವನ್ನು ಅಳವಡಿಸಿದ್ದಾರೆ. 32 ಎಂಪಿ ಮುಂಭಾಗದ ಕ್ಯಾಮೆರಾ ಒಳಗೊಂಡಿದೆ. ಹಾಗೆಯೇ ಇದು 67W ವೇಗದ ಚಾರ್ಜಿಂಗ್ ಮತ್ತು ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ