ಮಾರುಕಟ್ಟೆಗೆ ಹೊಸ ಹೊಸ ಸ್ಮಾರ್ಟ್ಫೋನ್ಗಳು (Smartphones) ಇತ್ತೀಚೆಗೆ ಬಹಳಷ್ಟು ಬಿಡುಗಡೆಯಾಗುತ್ತಿದೆ. ಈ ಮೊನೈಲ್ಗಳು ಮಾನವರ ಜೀವನದ ಅತ್ಯವಶ್ಯಕ ಸಾಧನವಾಗಿ ಮಾರ್ಪಟ್ಟಿದೆ. ಯಾರೇ ಆಗಲಿ ಹೊಸ ಸ್ಮಾರ್ಟ್ಫೋನ್ಗಳನ್ನು ಖರೀದಿ ಮಾಡ್ಬೇಕಾದ್ರೆ ಅದರ ಫೀಚರ್ಸ್, ಬೆಲೆಯನ್ನು ನೋಡೇ ನೋಡುತ್ತಾರೆ. ಇದಕ್ಕಾಗಿ ಕಂಪೆನಿಗಳು ಇತ್ತೀಚೆಗೆ ಉತ್ತಮ ಫೀಚರ್ಸ್ ಜೊತೆಗೆ ಗ್ರಾಹಕರಿಗೆ ಕೈಗೆಟಕುವ ಬೆಲೆಯ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸುತ್ತಿದೆ. ಜನಪ್ರಿಯ ಸ್ಮಾರ್ಟ್‌ಫೋನ್ ಕಂಪೆನಿಗಳಲ್ಲಿ ಒಂದಾಗಿರುವ ಹಾನರ್ ಕಂಪೆನಿ (Honor Company)_ ತನ್ನ ಬ್ರಾಂಡ್ನ ಅಡಿಯಲ್ಲಿ ಬಜೆಟ್ ಬೆಲೆಯಲ್ಲಿ (Budget Price Smartphone) ಮೊಬೈಲ್ಗಳನ್ನು ಬಿಡುಗಡೆ ಮಾಡುವ ಮೂಲಕ ಜಾಗತಿಕವಾಗಿ ಬಹಳಷ್ಟು ಗ್ರಾಹಕರನ್ನು ಹೊಂದಿದೆ. ಇದೀಗ ಹಾನರ್ ಕಂಪೆನಿಯಿಂದ ಹೊಸ ಸ್ಮಾರ್ಟ್‌ಫೋನ್ ಲಾಂಚ್ ಆಗಿದೆ.
ಹೌದು, ಬಜೆಟ್ ಬೆಲೆಯಲ್ಲಿ ಸ್ಮಾರ್ಟ್ಫೋನ್ಗಳನ್ನು ಲಾಂಚ್ ಮಾಡುವ ಮೂಲಕ ಬಾರೀ ಜನಪ್ರಿಯತೆಯಲ್ಲಿರುವ ಹಾನರ್ ಕಂಪೆನಿ, ಇದೀಗ ಮಾರುಕಟ್ಟೆಗೆ ಹೊಸ ಸ್ಮಾರ್ಟ್‌ಫೋನ್ ಒಂದನ್ನು ಲಾಂಚ್ ಮಾಡಿದೆ. ಇದಕ್ಕೆ ಹಾನರ್ ಮ್ಯಾಜಿಕ್ 5 ಲೈಟ್ ಎಂದು ಹೆಸರಿಸಲಾಗಿದೆ. ಈ ಸ್ಮಾರ್ಟ್ಫೋನ್ನ ಬೆಲೆ, ಫೀಚರ್ಸ್ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಬೇಕಾದ್ರೆ ಈ ಲೇಖನವನ್ನು ಓದಿ.
ಹಾನರ್ ಮ್ಯಾಜಿಕ್ 5 ಲೈಟ್ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ವಿನ್ಯಾಸ
ಹಾನರ್ ಮ್ಯಾಜಿಕ್ 5 ಲೈಟ್ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಅಮೋಲ್ಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ 89.9% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.
ಇದನ್ನೂ ಓದಿ: ಇನ್ಮುಂದೆ ಮಾನವ ಮೂತ್ರದಿಂದಲೂ ಕೂಡ ಸ್ಮಾರ್ಟ್‌ಫೋನ್ ಚಾರ್ಜ್ ಮಾಡ್ಬೋದು!
ಕ್ಯಾಮೆರಾ ಸೆಟಪ್ ಹೇಗಿದೆ?
ಹಾನರ್ ಮ್ಯಾಜಿಕ್ 5 ಲೈಟ್ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ನಲ್ಲಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಕ್ಯಾಮೆರಾ ಬಳಸಿಕೊಂಡು ಫುಲ್ ಹೆಚ್‌ಡಿ ವಿಡಿಯೋ ರೆಕಾರ್ಡ್ ಮಾಡಬಹುದು ಎಂದು ಹಾನರ್ ಕಂಪೆನಿ ತಿಳಿಸಿದೆ.
ಪ್ರೊಸೆಸರ್ ಸಾಮರ್ಥ್ಯ
ಹಾನರ್ ಮ್ಯಾಜಿಕ್ 5 ಲೈಟ್ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಎಸ್ಓಸಿ ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಮ್ಯಾಜಿಕ್ UI 6.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6ಜಿಬಿ ರ್‍ಯಾಮ್ ಮತ್ತು 128ಜಿಬಿ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಸ್ಲಾಟ್ ಹೊಂದಿರುವುದಿಲ್ಲ.
ಬ್ಯಾಟರಿ ಫೀಚರ್ಸ್
ಹಾನರ್ ಮ್ಯಾಜಿಕ್ 5 ಲೈಟ್ ಸ್ಮಾರ್ಟ್‌ಫೋನ್ 5,100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 2 ದಿನಗಳವರೆಗಿನ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.1, ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ.
ಬೆಲೆ ಮತ್ತು ಲಭ್ಯತೆ
ಹಾನರ್ ಮ್ಯಾಜಿಕ್ 5 ಲೈಟ್ ಸ್ಮಾರ್ಟ್‌ಫೋನ್ 6ಜಿಬಿ ರ್‍ಯಾಮ್ ಮತ್ತು 128ಜಿಬಿ ಸ್ಟೋರೇಜ್ ಹೊಂದಿದ ಸ್ಮಾರ್ಟ್‌ಫೋನ್ ಸದ್ಯ ಯುರೋಪ್‌ನಲ್ಲಿ ಬಿಡುಗಡೆಯಾಗಿದ್ದು, ಇದಕ್ಕೆ EUR 379 ಅಂದರೆ ಭಾರತದಲ್ಲಿ ಸುಮಾರು 33,500ರೂಪಾಯಿ ಬೆಲೆಯನ್ನು ಹೊಂದಿದೆ. ಇದು ಎಮರಾಲ್ಡ್ ಗ್ರೀನ್, ಮಿಡ್‌ನೈಟ್ ಬ್ಲ್ಯಾಕ್ ಮತ್ತು ಟೈಟಾನಿಯಂ ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಇದೇ ಫೆಬ್ರವರಿ 20 ರಿಂದ ಯುರೋಪಿಯನ್ ಮಾರುಕಟ್ಟೆಯಲ್ಲಿ ಪ್ರೀ ಆರ್ಡರ್‌ಗೆ ಬರಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಯಾವಾಗದಿಂದ ಲಭ್ಯವಾಗುತ್ತದೆ ಎಂದು ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ