ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ (Smartphone Market) ಹೊಸದಾಗಿ ಬಿಡುಗಡೆಯಾಗಿ ಸ್ವಲ್ಪ ಸಮಯದಲ್ಲೇ ಯಶಸ್ಸು ಕಂಡಂತಹ ಕಂಪೆನಿಯೆಂದರೆ ಅದು ಒನ್ಪ್ಲಸ್ ಕಂಪೆನಿ (Oneplus Company). ಮಾರುಕಟ್ಟೆಯಲ್ಲಿ ಒನ್ಪ್ಲಸ್ ಕಂಪೆನಿಗಳಿಗೆ ಈಗಲೂ ಭಾರೀ ಬೇಡಿಕೆಯಿದೆ. ಈ ಕಂಪೆನಿ ಮಾರುಕಟ್ಟೆಯಲ್ಲಿ ಹೊಸ ಮಾದರಿಯಲ್ಲಿ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಮೂಲಕ ಎಲ್ಲರ ಗಮನಸೆಳೆದಿದೆ ಅಂತಾನೇ ಹೇಳ್ಬಹುದು. ಒನ್ಪ್ಲಸ್ ಸ್ಮಾರ್ಟ್ಫೋನ್ಗಳು ಬಜೆಟ್ಬೆಲೆಯಿಂದ ಹಿಡಿದು ದೊಡ್ಡ ಮಟ್ಟಿನ ಬೆಲೆಯವರೆಗೂ ಮಾರುಕಟ್ಟೆಯಲ್ಲಿ ಲಭ್ಯವಿದೆ. ಇದೀಗ ಒನ್ಪ್ಲಸ್ ಸ್ಮಾರ್ಟ್ಫೋನ್ಗಳ ಮೇಲೆ ಮಾರುಕಟ್ಟೆಯಲ್ಲಿ ಭರ್ಜರಿ ಆಫರ್ನೊಂದಿಗೆ ಲಭ್ಯವಿದೆ. ಅದ್ರಲ್ಲೂ ಒನ್ಪ್ಲಸ್ 10 ಪ್ರೋ 5ಜಿ ಸ್ಮಾರ್ಟ್ಫೋನ್ (Oneplus 10 Pro 5G Smartphone) ಅನ್ನು ಭಾರೀ ಅಗ್ಗದಲ್ಲಿ ಖರೀದಿಸಬಹುದಾಗಿದೆ.
ಹೌದು, ಇದೀಗ ಒನ್ಪ್ಲಸ್ 10 ಪ್ರೋ 5ಜಿ ಸ್ಮಾರ್ಟ್ಫೋನ್ ಅನ್ನು ಜನಪ್ರಿಯ ಇಕಾಮರ್ಸ್ ವೆಬ್ಸೈಟ್ನಲ್ಲಿ ಭಾರೀ ಅಗ್ಗದಲ್ಲಿ ಖರೀದಿಸಬಹುದಾಗಿದೆ. ಹಾಗಿದ್ರೆ ಈ ಸ್ಮಾರ್ಟ್ಫೋನ್ನ ಮೇಲೆ ಏನೆಲ್ಲಾ ಅಫರ್ಸ್ಗಳು ಲಭ್ಯ ಇದೆ. ಫೀಚರ್ಸ್ ಹೇಗೆ ಇದೆ ಎಂಬುದನ್ನು ಈ ಲೇಖನದ ಮೂಲಕ ತಿಳಿಯಿರಿ.
ಒನ್ಪ್ಲಸ್ 10 ಪ್ರೋ 5ಜಿ ಸ್ಮಾರ್ಟ್ಫೋನ್ನ ಆಫರ್ಸ್ ಬೆಲೆ ಹೇಗಿದೆ?
ದೈತ್ಯ ಇ ಕಾಮರ್ಸ್ ವೆಬ್ಸೈಟ್ ಆಗಿರುವ ಅಮೆಜಾನ್ ಒನ್ಪ್ಲಸ್ 10 ಪ್ರೋ 5ಜಿ ಸ್ಮಾರ್ಟ್ಫೋನ್ಗೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. 8 ಜಿಬಿ ವೇರಿಯಂಟ್ ಬೆಲೆಯು 66,900 ರೂಪಾಯಿ ಆಗಿದ್ದು, ಆಫರ್ನಲ್ಲಿ ಈ ಸ್ಮಾರ್ಟ್ಫೊನ್ ಅನ್ನು 61,999 ರೂಪಾಯಿಗಳಿಗೆ ಖರೀದಿಸಬಹುದಾಗಿದೆ. ಅದೇ ರೀತಿ 12 ಜಿಬಿ ವೇರಿಯಂಟ್ನ ಸ್ಮಾರ್ಟ್ಫೋನ್ನ ಮೂಲ ಬೆಲೆ 71,900 ರೂಪಾಯಿ ಆಗಿದೆ. ಆದರೆ ಇದೀಗ ಅಮೆಜಾನ್ನ ಆಫರ್ನಲ್ಲಿ 66,999 ರೂಪಾಯಿಗಳಿಗೆ ಖರೀದಿಸಬಹುದಾಗಿದೆ. ಈ ಸ್ಮಾರ್ಟ್ಫೋನ್ ಅನ್ನು ಬ್ಲ್ಯಾಕ್ ಹಾಗೂ ಫಾರೆಸ್ಟ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಸಲು ಅವಕಾಶವಿದೆ.
ಇದನ್ನೂ ಓದಿ: ಸ್ಯಾಮ್ಸಂಗ್ ಕಂಪೆನಿಯ ಹೊಸ ಸ್ಮಾರ್ಟ್ಫೋನ್ನ ಫಸ್ಟ್ ಸೇಲ್ ಆರಂಭ! ಆಫರ್ಸ್ ಹೇಗಿದೆ?
ಒನ್ಪ್ಲಸ್ 10 ಪ್ರೋ 5ಜಿ ಸ್ಮಾರ್ಟ್ಫೋನ್ನ ಫೀಚರ್ಸ್
ಒನ್ಪ್ಲಸ್ 10 ಪ್ರೋ 5ಜಿ ಸ್ಮಾರ್ಟ್ಫೋನ್ 1,440 x 3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಓಎಲ್ಇಡಿ ಅಮೋಲ್ಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಎರಡನೇ ಲೋ-ಟೆಂಪರೇಚರ್ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) ಟೆಕ್ನಾಲಜಿಯನ್ನು ಒಳಗೊಂಡಿದೆ. ಇದು 1Hz ಮತ್ತು 120Hz ನಡುವೆ ಡೈನಾಮಿಕ್ ರಿಫ್ರೆಶ್ ರೇಟ್ ನೀಡಲಿದೆ. ಈ ಡಿಸ್ಪ್ಲೇನ ರಕ್ಷಣೆಗಾಗಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ಅನ್ನು ಅಳವಡಿಸಲಾಗಿದೆ.
ಕ್ಯಾಮೆರಾ ಫೀಚರ್ಸ್
ಒನ್ಪ್ಲಸ್ 10 ಪ್ರೋ 5ಜಿ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX789 ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್ಸಂಗ್ ISOCELL JN1 ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಾಗಿ ಮತ್ತು ವಿಡಿಯೋ ಕಾಲ್ಗಾಗಿ 32 ಮೆಗಾಪಿಕ್ಸೆಲ್ನಷ್ಟು ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಿದ್ದಾರೆ.
ಪ್ರೊಸೆಸರ್ ಸಾಮರ್ಥ್ಯ
ಒನ್ಪ್ಲಸ್ 10 ಪ್ರೋ ಸ್ಮಾರ್ಟ್ಫೋನ್ ಆಕ್ಟಾ ಕೋರ್ ಸ್ನಾಪ್ಡ್ರಾಗನ್ 8 ಜೆನ್ 1 ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯದೊಂದಿಗೆ ಬಿಡುಗಡೆಯಾಗಿದೆ. ಇನ್ನು ಈ ಸ್ಮಾರ್ಟ್ಫೋನ್ ಆಂಡ್ರಾಯ್ಡ್ 12 ನಲ್ಲಿ ಆಕ್ಸಿಜನ್ ಆಪರೇಟಿಂಗ್ ಸಿಸ್ಟಮ್ 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12 ಜಿಬಿ ರ್ಯಾಮ್ ಮತ್ತು 256 ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.
ಬ್ಯಾಟರಿ ಫೀಚರ್ಸ್
ಒನ್ಪ್ಲಸ್ 10 ಪ್ರೋ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಹೊಂದಿದೆ. ಇದು 80W ಸೂಪರ್ವೂಕ್ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್ವೂಕ್ ವೈರ್ಲೆಸ್ ಚಾರ್ಜಿಂಗ್ ಫೀಚರ್ ಅನ್ನು ಒಳಗೊಂಡಿದೆ.
ಇತರೆ ಫೀಚರ್ಸ್
ಇನ್ನು ಈ ಸ್ಮಾರ್ಟ್ಫೊನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ, 4ಜಿ ಎಲ್ಟಿಇ, ವೈಫೈ 6, ಬ್ಲೂಟೂತ್ v5.2, ಜಿಪಿಎಸ್/ A-GPS, NFC, ಮತ್ತು ಯುಎಸ್ಬಿ ಟೈಪ್ ಸಿ ಪೋರ್ಟ್ ಅನ್ನು ಆಧರಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ