ಸ್ಯಾಮ್‌ಸಂಗ್ ಕಂಪೆನಿಯ (Samsung Company) ಸ್ಮಾರ್ಟ್ಫೋನ್ಗಳಿಗೆ ಮಾರುಕಟ್ಟೆಯಲ್ಲಿ ಬಹಳಷ್ಟು ಬೇಡಿಕೆಯಿದೆ. ಸ್ಯಾಮ್‌ಸಂಗ್ ಕಂಪೆನಿ ಇದುವರೆಗೆ ಬಹಳಷ್ಟು ಸ್ಮಾರ್ಟ್ಫೋನ್ಗಳನ್ನು ತನ್ನ ಗ್ರಾಹಕರಿಗಾಗಿ ಪರಿಚಯಿಸಿದೆ. ಇವೆಲ್ಲವೂ ಉತ್ತಮ ಗುಣಮಟ್ಟದಲ್ಲಿದ್ದು, ಗ್ರಾಹಕರನ್ನು ತನ್ನ ಫೀಚರ್ಸ್, ವಿನ್ಯಾಸದ ಮೂಲಕವೇ ಸೆಳೆಯುತ್ತದೆ. ಈ ಕಂಪೆನಿ M ಸೀರಿಸ್ನಲ್ಲಿ ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳನ್ನು (Smartphones) ಬಿಡುಗಡೆ ಮಾಡಿದೆ. ಇತ್ತೀಚೆಗೆ ಬಿಡುಗಡೆಯಾದ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್33 5ಜಿ (Samsung Galaxy M33 5G) ಸ್ಮಾರ್ಟ್‌ಫೋನ್ ಮೇಲೆ ಅಮೆಜಾನ್ ಇದೀಗ ಭರ್ಜರಿ ರಿಯಾಯಿತಿಯನ್ನು ನೀಡುತ್ತಿದೆ. ಹೊಸ ಸ್ಮಾರ್ಟ್‌ಫೋನ್ ಖರೀದಿಸುವ ಪ್ಲ್ಯಾನ್ನಲ್ಲಿದ್ದವರಿ ಈ ಆಯ್ಕೆ ಉತ್ತಮವಾಗಿದೆ.
ಸ್ಯಾಮ್‌ಸಂಗ್ ಕಂಪೆನಿ ಇತ್ತೀಚೆಗೆ ಗ್ಯಾಲಕ್ಸಿ ಎಮ್33 ಎಂಬ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿತ್ತು. ಈ ಸ್ಮಾರ್ಟ್‌ಫೋನ್ 5ಜಿ ಸಪೋರ್ಟ್ ಅನ್ನು ಪಡೆದಿದ್ದು, ಮಾರುಕಟ್ಟೆಯಲ್ಲಿ ಈಗಲೂ ಭಾರೀ ಬೇಡಿಕೆಯಿದೆ. ಈ ಮಧ್ಯೆ ಜನಪ್ರಿಯ ಇಕಾಮರ್ಸ್ ತಾಣವಾದ ಅಮೆಜಾನ್ ಈ ಸ್ಮಾರ್ಟ್‌ಫೋನ್ ಮೇಲೆ ಬಂಪರ್ ಆಫರ್ ಘೋಷಿಸಿದೆ.
ಏನೆಲ್ಲಾ ಆಫರ್ಸ್ ಲಭ್ಯವಿದೆ?
ಅಮೆಜಾನ್ ಫ್ಲಾಟ್ಫಾರ್ಮ್ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5ಜಿ ಫೋನ್ ಈಗ ಅಮೆಜಾನ್ ವೆಬ್ಸೈಟ್ನಲ್ಲಿ ಭರ್ಜರಿ ರಿಯಾಯಿತಿಯೊಂದಿಗೆ ಖರೀದಿಗೆ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ ಇದುವರೆಗೆ 24,999 ರೂಪಾಯಿ ಬೆಲೆಯಲ್ಲಿ ಮಾರಾಟಕ್ಕೆ ಲಭ್ಯವಿತ್ತು. ಆದರೆ ಈಗ 6ಜಿಬಿ ರ್‍ಯಾಮ್ ಮತ್ತು 128 ಜಿಬಿ ಸ್ಟೋರೇಜ್ ವೇರಿಯಂಟ್ ಬೆಲೆ ಇಳಿಕೆ ಮೂಲಕ 17,999 ರೂಪಾಯಿಗಳ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ನೋ ಕಾಸ್ಟ್ ಇಎಮ್‌ಐ ಸೌಲಭ್ಯದ ಆಯ್ಕೆ ಸಹ ಸಿಗಲಿದ್ದು, ಜೊತೆಗೆ ಎಕ್ಸ್‌ಚೇಂಜ್ ಕೊಡುಗೆಯು ಸಹ ದೊರೆಯುತ್ತದೆ.
ಇದನ್ನೂ ಓದಿ: ಭಾರತಕ್ಕೆ ಲಗ್ಗೆಯಿಟ್ಟಿದೆ ಟೆಕ್ನೋ ಪಾಪ್ 7 ಪ್ರೋ! ಕೇವಲ 6 ಸಾವಿರ ರೂಪಾಯಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್33 5ಜಿ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5ಜಿ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್ಡಿ+ ಇನ್ಫಿನಿಟಿ ವಿ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಸಹ ಒಳಗೊಂಡಿದೆ. ಈ ಡಿಸ್‌ಪ್ಲೇಯ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಅಳವಡಿಸಲಾಗಿದೆ.
ಕ್ಯಾಮೆರಾ ಫೀಚ ರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5ಜಿ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್ ಜೊತೆಗೆ 120-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಒಳಗೊಂಡಿದೆ. ಇನ್ನು 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಅಳವಡಿಸಲಾಗಿದೆ.
ಪ್ರೊಸೆಸರ್ ಸಾಮರ್ಥ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5ಜಿ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 5nm ಎಕ್ಸಿನೋಸ್ ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8ಜಿಬಿ ರ್‍ಯಾಮ್ ಮತ್ತು 128ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಸ್ಯಾಮ್‌ಸಂಗ್‌ನ ರ್‍ಯಾಮ್ ಪ್ಲಸ್ ಫೀಚರ್ಸ್ ಮೂಲಕ, ರ್‍ಯಾಮ್ ಅನ್ನು 16 ಜಿಬಿವರೆಗೆ ವಿಸ್ತರಿಸಬಹುದು.
ಬ್ಯಾಟರಿ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5ಜಿ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್ ಮತ್ತು ಜಿಪಿಎಸ್ ಒಳಗೊಂಡಿದೆ. ಇದಲ್ಲದೆ ಸೆಕ್ಯುರಿಟಿಗಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ.
ಸ್ಟೋರೇಜ್ ಮತ್ತು ಕಲರ್ ಆಯ್ಕೆ
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5ಜಿ ಸ್ಮಾರ್ಟ್‌ಫೋನ್ 6ಜಿಬಿ ರ್‍ಯಾಮ್ ಮತ್ತು 128ಜಿಬಿ ಸ್ಟೋರೇಜ್ ಹಾಗೂ 8ಜಿಬಿ ರ್‍ಯಾಮ್ ಮತ್ತು 128ಜಿಬಿ ಸ್ಟೋರೇಜ್ಗಳ ಆಯ್ಕೆಯನ್ನು ಪಡೆದಿದೆ. ಹಾಗೆಯೇ ಇದು ಓಶಿಯನ್ ಬ್ಲೂ, ಎಮರಾಲ್ಡ್ ಬ್ರೌನ್ ಹಾಗೂ ಗ್ರೀನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ