ಸ್ಯಾಮ್‌ಸಂಗ್ ಕಂಪೆನಿಯ (Samsung Company) ಸ್ಮಾರ್ಟ್ಫೋನ್ಗಳಿಗೆ ಮಾರುಕಟ್ಟೆಯಲ್ಲಿ ಎಲ್ಲಿಲ್ಲದ ಬೇಡಿಕೆ. ಉತ್ತಮ ಗುಣಮಟ್ಟದ ಫೀಚರ್ಸ್ಗಳನ್ನು ಒಳಗೊಂಡ ಸ್ಮಾರ್ಟ್ ಡಿವೈಸ್ಗಳನ್ನು ಬಿಡುಗಡೆ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನೇ ಸೃಷ್ಟಿ ಮಾಡಿದ ಕಂಪೆನಿಯಿದು. ಸ್ಯಾಮ್‌ಸಂಗ್ ಕಂಪೆನಿ ಈವರೆಗೆ ಸಾಕಷ್ಟು ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಅದೇ ರೀತಿ ಮುಂದೆಯೂ ಹಲವಾರು ಸ್ಮಾರ್ಟ್ಫೋನ್ಗಳು (Smartphones) ಬರಲಿವೆ. ಸ್ಯಾಮ್‌ಸಂಗ್ ಕಂಪೆನಿಯಿಂದ ಮುಂದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್23 ಸೀರಿಸ್ನಿಂದ ಸ್ಮಾರ್ಟ್ಫೋನ್ಗಳು ಮಾರುಕಟ್ಟೆಗೆ ಪ್ರವೇಶಿಸಲಿದ್ದು, ಇದೀಗ ಈ ಸಾಧನಗಳು ಬಿಡುಗಡೆಗೆ ಸಜ್ಜಾಗಿ ನಿಂತಿದೆ. ಈ ಮಧ್ಯೆ ಗ್ಯಾಲಕ್ಸಿ ಎಸ್22 ಸೀರಿಸ್ನ (Samsung Galaxy S22 Series) ಸ್ಮಾರ್ಟ್ಫೋನ್ಗಳ ಮೇಲೆ ಆಫರ್ ನೀಡಲಾಗಿದ್ದು, ಭಾರೀ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದೆ.
ಸ್ಯಾಮ್‌ಸಂಗ್ ಕಂಪೆನಿಯಿಂದ ಈ ಹಿಂದೆ ಬಿಡುಗಡಯಾಗಿದ್ದಂತಹ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್22 ಸ್ಮಾರ್ಟ್ಫೋನ್ಗಳ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಈ ಸ್ಮಾರ್ಟ್‌ಫೋನ್ ಅನ್ನು ಖರೀದಿಸುವವರಿಗೆ ಕಂಪೆನಿ ಆಫರ್ಸ್ಗಳನ್ನು ನೀಡುತ್ತಿದೆ.
ಏನೆಲ್ಲಾ ಆಫರ್ಸ್ ಲಭ್ಯವಿದೆ?
ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್23 ಫೋನ್ ಸರಣಿ ಇದೇ ಫೆಬ್ರವರಿಯಲ್ಲಿ ಬಿಡುಗಡೆ ಆಗಲಿದೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್23 ಸೀರಿಸ್ನ ಸ್ಮಾರ್ಟ್ಫೋನ್ಗಳು ಮೂರು ವೇರಿಯಂಟ್ ಆಯ್ಕೆಯಲ್ಲಿ ಬಿಡುಗಡೆಯಾಗಿದೆ. ಇದೀಗ ಕಂಪೆನಿ ಸ್ಮಾರ್ಟ್‌ಫೋನ್ ಪ್ರಿಯರಿಗೆ ಗುಡ್ ನ್ಯೂಸ್ ಅನ್ನು ನೀಡಿದ್ದು, ಈ ಮೂಲಕ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್22 ಸ್ಮಾರ್ಟ್‌ಫೋನ್ ಬರೋಬ್ಬರಿ 10,000 ರೂ. ಗಳ ಇಳಿಕೆ ದರದಲ್ಲಿ ಖರೀದಿ ಮಾಡಬಹುದಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್22 ಸ್ಮಾರ್ಟ್‌ಫೋನ್‌ನ 128 ಜಿಬಿ ಸ್ಟೋರೇಜ್ ವೇರಿಯಂಟ್ ಬೆಲೆಯು 62,999 ರಪಾಯಿಗಳ ಒಳಗೆ ಲಭ್ಯವಾಗಲಿದೆ. ಇನ್ನು 256 ಜಿಬಿ ಸ್ಟೋರೇಜ್ ಹೊಂದಿದ ಸ್ಮಾರ್ಟ್‌ಫೋನ್ ಸಹ ಇದೇ ರೀತಿಯ ಆಕರ್ಷಕ ಬೆಲೆಯಲ್ಲಿ ಲಭ್ಯವಿದೆ. ಇದರೊಂದಿಗೆ ಬ್ಯಾಂಕ್ ಆಫರ್ ಹಾಗೂ ಇತರೆ ಸೌಲಭ್ಯಗಳ ಮೂಲಕ ಭಾರೀ ಅಗ್ಗದ ಬೆಲೆಯಲ್ಲಿ ಖರೀದಿ ಮಾಡಬಹುದು.
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್22 ಸ್ಮಾರ್ಟ್‌ಫೋನ್ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್22 ಸ್ಮಾರ್ಟ್‌ಫೋನ್ 6.1 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡೈನಾಮಿಕ್ ಅಮೋಲ್ಡ್ 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಇದು 8 ಜಿಬಿ ರ್‍ಯಾಮ್ ಮತ್ತು 256 ಜಿಬಿ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಿಸ್ಟಮ್ನಲ್ಲಿ ಈ ಸ್ಮಾರ್ಟ್‌ಫೋನ್ ಕಾರ್ಯನಿರ್ವಹಿಸುತ್ತದೆ.
ಕ್ಯಾಮೆರಾ ಮತ್ತು ಬ್ಯಾಟರಿ ಫೀಚರ್ಸ್
ಹಾಗೆಯೇ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 3,700mAh ಬ್ಯಾಟರಿ ಬ್ಯಾಕಪ್ ಅನ್ನು ಪಡೆದಿದ್ದು, ಈ ಬ್ಯಾಟರಿಯು 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ.
ಇದನ್ನೂ ಓದಿ: ಉದ್ದೇಶಪೂರ್ವಕವಾಗಿ ಬ್ಯಾಟರಿ ಖಾಲಿ ಮಾಡುತ್ತಾ ಫೇಸ್ಬುಕ್? ಶಾಕಿಂಗ್ ರಹಸ್ಯ ಬಿಚ್ಚಿಟ್ಟ ಮಾಜಿ ಉದ್ಯೋಗಿ!
ಕನೆಕ್ಟಿವಿಟಿ ಫೀಚರ್ಸ್
ಇನ್ನು ಈ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5ಜಿ, 4ಜಿ ಎಲ್ಟಿಇ, ವೈ ಫೈ 6, ಬ್ಲೂಟೂತ್ v5.2, ಜಿಪಿಎಸ್/ A ಜಿಪಿಎಸ್, ಎನ್ಎಫ್ಸಿ ಮತ್ತು ಯುಎಸ್ಬಿ ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ