ಇಂದಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳು (Smartphones) ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುತ್ತಿದೆ. ಎಲ್ಲಿ ನೋಡಿದರೂ ಸ್ಮಾರ್ಟ್ಫೋನ್ಗಳದ್ದೇ ಹಾವಳಿ. ಕಳೆದ ವರ್ಷ ಕೆಲವೊಂದು ಕಂಪೆನಿಗಳು 2023ರಲ್ಲಿ ಹೊಸ ಸ್ಮಾರ್ಟ್ಫೋನ್ಗಳು ಬಿಡುಗಡೆಯಾಗಲಿದೆ ಎಂದು ಹೇಳಿದ್ದವು. ಜೊತೆಗೆ ಆ ಸ್ಮಾರ್ಟ್ಫೋನ್ಗಳ ಸ್ಪೆಷಲ್ ಫೀಚರ್ಸ್ಗಳನ್ನು ಹೇಳುವ ಮೂಲಕ ಜನರಲ್ಲಿ ಇನ್ನಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿತ್ತು. ಇದೀಗ ಭಾರತದ ಮಾರುಕಟ್ಟೆಗೆ ಮತ್ತೊಂದು ನಿರೀಕ್ಷೆಯ ಸ್ಮಾರ್ಟ್ಫೋನ್ ಒಂದು ಲಗ್ಗೆಯಿಟ್ಟಿದೆ. ಈ ಸ್ಮಾರ್ಟ್ಫೋನ್ ಇದರ ಪ್ರೊಸೆಸರ್ (Processor) ಸಾಮರ್ಥ್ಯದಿಂದಲೇ ಎಲ್ಲರ ಗಮನಸೆಳೆದಿತ್ತು. ಐಕ್ಯೂ ಕಂಪೆನಿಯ (IQoo Company) ಐಕ್ಯೂ 11 ಎಂಬ ಸ್ಮಾರ್ಟ್ಫೋನ್ (Iqoo 11 Smartphone) ಭಾರತದಲ್ಲಿ ಬಿಡುಗಡೆಯಾಗಿದೆ.
ಇದೀಗ ಐಕ್ಯೂ 11 ಸ್ಮಾರ್ಟ್ಫೋನ್ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ವಿಶೇಷವೆಂದರೆ ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 8 Gen 2 SoC ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸುವ ಭಾರತದ ಮೊದಲ ಫೋನ್ ಆಗಿದೆ. ಹೀಗೇ ಇನ್ನೂ ಹಲವಾರು ವಿಶೇಷ ಫೀಚರ್ಸ್ಗಳನ್ನು ಹೊಂದಿದ್ದು, ಅವುಗಳ ಕಂಪ್ಲೀಟ್ ಮಾಹಿತಿ ಈ ಕೆಳಗಿನ ಲೇಕನದಲ್ಲಿದೆ.
ಪ್ರೊಸೆಸರ್ ಸಾಮರ್ಥ್ಯ ಹೇಗಿದೆ?
ಐಕ್ಯೂ 11 ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 8 Gen 2 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಭಾರತದಲ್ಲಿ ಇಷ್ಟು ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರುವ ಮೊದಲ ಸ್ಮಾರ್ಟ್ಫೋನ್ ಎಂದು ಗುರುತಿಸಿಕೊಂಡಿದೆ. ಇನ್ನಿ ಈ ಸ್ಮಾರ್ಟ್ಫೋನ್ ಆಂಡ್ರಾಯ್ಡ್ 13 ಆಧಾರಿತ ಫಂಕ್ಷನ್ ಓಎಸ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಇದನ್ನೂ ಓದಿ: ಮೊಟೊ ಕಂಪೆನಿಯ ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ನೋಡಿದ್ರೆ ಗ್ಯಾರಂಟಿ ಖರೀದಿಸ್ತೀರಾ
ಇನ್ನು ಈ ಸ್ಮಾರ್ಟ್ಫೋನ್ನ ಸ್ಟೋರೇಜ್ ಆಯ್ಕೆಗಳ ಬಗ್ಗೆ ಹೇಳುವುದಾದರೆ, ಇದು 8 ಜಿಬಿ ರ್ಯಾಮ್ ಮತ್ತು 256 ಜಿಬಿ ಹಾಗೂ 16 ಜಿಬಿ ರ್ಯಾಮ್ ಮತ್ತು 256 ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ನಲ್ಲಿ ಮೆಮೊರಿ ಕಾರ್ಡ್ ಸ್ಲಾಟ್ ಅನ್ನು ನೀಡಿಲ್ಲ ಎಂದು ಕಂಪೆನಿ ಹೇಳಿದೆ.
ಐಕ್ಯೂ 11 ಸ್ಮಾರ್ಟ್ಫೋನ್ ಫೀಚರ್ಸ್
ಐಕ್ಯೂ 11 ಸ್ಮಾರ್ಟ್ಫೋನ್ 6.78 ಇಂಚಿನ ಪಂಚ್ ಹೋಲ್ ಸ್ಯಾಮ್ಸಂಗ್ E6 ಅಮೋಲ್ಡ್ ಡಿಸ್ಪ್ಲೇ ಹೊಂದಿದೆ. ಈ ಡಿಸ್ಪ್ಲೇ 3200 x 1440 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 144Hz ರಿಫ್ರೆಶ್ ರೇಟ್, 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ನೀಡಲಿದೆ. ಇನ್ನು ಡಿಸ್ಪ್ಲೇ 517 PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ ಡಿಸ್ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.
ಕ್ಯಾಮೆರಾ ಫೀಚರ್ಸ್
ಐಕ್ಯೂ 11 ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್ಸಂಗ್ GN5 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ 2x ಟೆಲಿಫೋಟೋ ಲೆನ್ಸ್ ಅನ್ನು ಒಳಗೊಂಡಿದೆ. ಇನ್ನು ಸೆಲ್ಫಿಗಾಗಿ ಮತ್ತು ವಿಡಿಯೋ ಕಾಲ್ಗಾಗಿ 16 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಸ್ಮಾರ್ಟ್ಫೋನ್ನಲ್ಲಿರುವ ಎಲ್ಲಾ ಕ್ಯಾಮೆರಾಗಳು ವಿವೋ ವಿ2 ಇಮೇಜಿಂಗ್ ಚಿಪ್ನಿಂದ ಕಾರ್ಯನಿರ್ವಹಿಸುತ್ತದೆ ಎಂದು ಕಂಪೆನಿ ಹೇಳಿಕೊಂಡಿದೆ.
ಬ್ಯಾಟರಿ ಫೀಚರ್ಸ್
ಐಕ್ಯೂ 11 ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 120W ವೇಗದ ವೈರ್ಡ್ ಚಾರ್ಜಿಂಗ್ ಸಾಮರ್ಥ್ಯವನ್ನು ಹೊಂದಿದೆ.
ಇತರೆ ಫೀಚರ್ಸ್
ಇನ್ನು ಈ ಸ್ಮಾರ್ಟ್ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5 ಜಿ, ವೈಫೈ 6, ಬ್ಲೂಟೂತ್ 5.3, ಜಿಎನ್ಎಸ್ಎಸ್, ಎನ್ಎಫ್ಸಿ ಮತ್ತು ಯುಎಸ್ಬಿ ಟೈಪ್ ಸಿ ಗೆ ಬೆಂಬಲವನ್ನು ನೀಡಲಿದೆ. ಇದು ಡ್ಯುಯಲ್ ಸ್ಟೀರಿಯೋ ಸ್ಪೀಕರ್ಗಳು, ಐಆರ್ ಸೆನ್ಸಾರ್ ಮತ್ತು ಆಪ್ಟಿಕಲ್ ಫಿಂಗರ್ಪ್ರಿಂಟ್ ಸೆನ್ಸಾರ್ ಕೂಡ ಒಳಗೊಂಡಿದೆ.
ಬೆಲೆ ಮತ್ತು ಲಭ್ಯತೆ
ಐಕ್ಯೂ 11 ಸ್ಮಾರ್ಟ್ಫೋನ್ ಭಾರತದಲ್ಲಿ 8ಜಿಬಿ ರ್ಯಾಮ್ ಮತ್ತು 256ಜಿಬಿ ಸ್ಟೋರೇಜ್ ಆಯ್ಕೆಯ ಬೆಲೆ 59,999 ರೂ. ಆಗಿದೆ. ಇದರ 16ಜಿಬಿ ರ್ಯಾಮ್ ಮತ್ತು 256ಜಿಬಿ ಸ್ಟೋರೇಜ್ ಆಯ್ಕೆಯು 64,999ರೂ. ಬೆಲೆಯನ್ನು ಹೊಂದಿದೆ. ಇದನ್ನು ಆಲ್ಫಾ ಅಥವಾ ಲೆಜೆಂಡ್ ಸಿಲಿಕಾನ್ ಲೆದರ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು. ಇನ್ನು ಈ ಸ್ಮಾರ್ಟ್ಫೋನ್ ಅಮೆಜಾನ್ ಇಂಡಿಯಾ ಮತ್ತು ಐಕ್ಯೂ ಕಂಪೆನಿಯ ಅಧಿಕೃತ ವೆಬ್ಸೈಟ್ನ ಮೂಲಕ ಜನವರಿ 13 ರಂದು ಸೇಲ್ ಆರಂಭವಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ