ಭಾರತದ ಮಾರುಕಟ್ಟೆಯಲ್ಲಿ (Indian Market) ಜನಪ್ರಿಯ ಮೊಬೈಲ್ ಕಂಪೆನಿಗಳಲ್ಲಿ ಇನ್ಫಿನಿಕ್ಸ್ ಕಂಪೆನಿ (Infinix Company) ಸಹ ಒಂದು. ಈ ಕಂಪೆನಿ ಈ ಹಿಂದಿನ ಬಾರಿ ಹಲವಾರು ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವ ಮೂಲಕ ಎಲ್ಲರ ಗಮನಸೆಳೆದಿದೆ. ಸದ್ಯ ಇನ್ಫಿನಿಕ್ಸ್ ಕಂಪೆನಿಯಿಂದ ಮಾರುಕಟ್ಟೆಗೆ ಹೊಸ ಸ್ಮಾರ್ಟ್ಫೋನ್ ಲಗ್ಗೆಯಿಡುತ್ತಿದ್ದು, ಮಾರುಕಟ್ಟೆಯಲ್ಲಿ ಬೇಡಿಕೆಯ ಸ್ಮಾರ್ಟ್ಫೋನ್ ಇದಾಗಲಿದೆ ಎಂದು ಕಂಪೆನಿ ತಿಳಿಸಿದೆ. ಸ್ಮಾರ್ಟ್ಫೋನ್ಗಳ ಬಿಡುಗಡೆಗಾಗಿ ಗ್ರಾಹಕರು ಕಾತುರದಿಂದ ಕಾಯುತ್ತಿರುತ್ತಾರೆ. ಹೀಗಿರುವಾಗ ಕಂಪೆನಿಗಳು ಕೂಡ ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನವೀನ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮೊಬೈಲ್ ಮಾರುಕಟ್ಟೆಗೆ ಪರಿಚಯಿಸುತ್ತದೆ. ಸದ್ಯ ಈ ಸಾಲಿಗೆ ಇನ್ಫಿನಿಕ್ಸ್ ನೋಟ್ ಸೀರಿಸ್ನ (Infinix Note Series) ಸ್ಮಾರ್ಟ್ಫೋನ್ ಸಹ ಸೇರ್ಪಡೆಯಾಗುತ್ತಿದೆ.
ಇನ್ಫಿನಿಕ್ಸ್ಸ್ ಕಂಪೆನಿ ಈ ಬಾರಿ ಹೊಸದಾಗಿ ಪರಿಚಯಿಸುತ್ತಿರುವ ಸ್ಮಾರ್ಟ್ಫೋನ್ ಇನ್ಫಿನಿಕ್ಸ್ ನೋಟ್ 12ಐ ಎಂಬ ಸ್ಮಾರ್ಟ್ಫೋನ್ ಆಗಿದೆ. ಈ ಸ್ಮಾರ್ಟ್ಫೋನ್ ಹಲವಾರು ಫೀಚರ್ಸ್ ಅನ್ನು ಒಳಗೊಂಡಿದ್ದು, ಸದ್ಯ ಇದರ ವೈಶಿಷ್ಟ್ಯತೆಗಳು ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗವಾಗಿದೆ.
ಇನ್ಫಿನಿಕ್ಸ್ ನೋಟ್ 12ಐ ಸ್ಮಾರ್ಟ್ಫೋನ್ ಫೀಚರ್ಸ್
ಇನ್ಫಿನಿಕ್ಸ್ ನೋಟ್ 12ಐ ಸ್ಮಾರ್ಟ್ಫೋನ್ 6.82 ಇಂಚಿನ ಫುಲ್ ಹೆಚ್ಡಿ ಪ್ಲಸ್ ಟಿಎಫ್ಟಿ ಡಿಸ್ಪ್ಲೇ ಹೊಂದಿದೆ. ಇದು 720x1640 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಡಿಸ್ಪ್ಲೇ 83.6% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಡಿಸ್ಪ್ಲೇ 263 ಪಿಪಿಐ ಸಾಂದ್ರತೆಯನ್ನು ಬೆಂಬಲಿಸಲಿದೆ ಎಂದು ಹೇಳಲಾಗಿದೆ.
ಕ್ಯಾಮೆರಾ ಫೀಚರ್ಸ್
ಇನ್ಫಿನಿಕ್ಸ್ ನೋಟ್ 12ಐ ಸ್ಮಾರ್ಟ್ಫೋನ್ ಮುಖ್ಯವಾಗಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಲೆನ್ಸ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಹಾಗೆಯೇ ಮೂರನೇ ಕ್ಯಾಮೆರಾ ಎಐ ಲೆನ್ಸ್ ಹೊಂದಿರಲಿದೆ. ಇನ್ನು ಸೆಲ್ಫಿಗಾಗಿ ಮತ್ತು ವಿಡಿಯೋ ಕಾಲ್ಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಪ್ರೊಸೆಸರ್ ಸಾಮರ್ಥ್ಯ
ಇನ್ಫಿನಿಕ್ಸ್ ನೋಟ್ 12ಐ ಸ್ಮಾರ್ಟ್ಫೋನ್ ಮೀಡಿಯಾಟೆಕ್ ಹಿಲಿಯೋ ಜಿ85 ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರಲಿದೆ. ಇನ್ನು ಈ ಸ್ಮಾರ್ಟ್ಫೋನ್ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4 ಜಿಬಿ ರ್ಯಾಮ್ ಮತ್ತು 128 ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇದಲ್ಲದೆ ಈ ಫೋನ್ನಲ್ಲಿ ರ್ಯಾಮ್ ಅನ್ನು 3ಜಿಬಿ, ವರ್ಚುವಲ್ ರ್ಯಾಮ್ ಜೊತೆಗೆ 7 ಜಿಬಿ ವರೆಗೆ ವಿಸ್ತರಿಸಬಹುದಾಗಿದೆ.
ಬ್ಯಾಟರಿ ಫೀಚರ್ಸ್
ಇನ್ಫಿನಿಕ್ಸ್ ನೋಟ್ 12ಐ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಒಳಗೊಂಡಿದೆ. ಈ ಬ್ಯಾಟರಿಯು 33W ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಹೊಂದಿದೆ.
ಇತರೆ ಫೀಚರ್ಸ್
ಇನ್ನು ಈ ಸ್ಮಾರ್ಟ್ಫೋನ್ನ ಕನೆಕ್ಟಿವಿಟಿ ಆಯ್ಕೆಯಲ್ಲಿ ಹಾಟ್ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್ಬಿ ಸಿ ಪೋರ್ಟ್, ಹೆಡ್ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.
ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ನೋಟ್ 12ಐ ಸ್ಮಾರ್ಟ್ಫೋನ್ ಬೆಲೆಯ ಬಗ್ಗೆ ಇನ್ನೂ ಯಾವುದೇ ವಿವರಗಳು ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್ಫೋನ್ ಭಾರತದಲ್ಲಿ ಇದೇ ಜನವರಿ 25 ರಂದು ಬಿಡುಗಡೆಯಾಗಲಿದೆ ಎಂದು ಕಂಪೆನಿ ತಿಳಿಸಿದೆ. ಹಾಗೆಯೇ ಈ ಸ್ಮಾರ್ಟ್ಫೋನ್ನ ಫಸ್ಟ್ ಸೇಲ್ ಫ್ಲಿಪ್ಕಾರ್ಟ್ನಲ್ಲಿ ಆರಂಭವಾಗಲಿದೆ ಎನ್ನಲಾಗಿದೆ.
ಇದನ್ನೂ ಓದಿ: ನೆಟ್ಟಿಗರ 'ಎದೆಗಾರಿಕೆ'ಗೆ ಮೆತ್ತಗಾದ ಮೆಟಾ, 'ಆ ತರ'ದ ಫೋಟೋಗಳ ರೂಲ್ಸ್ ಬದಲಿಸಿದ ಸೋಶಿಯಲ್ ಮೀಡಿಯಾ ದಿಗ್ಗಜ!
ಇನ್ಫಿನಿಕ್ಸ್ ಹಾಟ್ 20 ಪ್ಲೇ ಸ್ಮಾರ್ಟ್ಫೋನ್
ಇನ್ಫಿನಿಕ್ಸ್ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಇನ್ಫಿನಿಕ್ಸ್ ಹಾಟ್ 20 ಪ್ಲೇ ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನ್ 6.82 ಇಂಚಿನ ಹೆಚ್ಡಿ ಪ್ಲಸ್ ಐಪಿಎಸ್ ಎಲ್ಸಿಡಿ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 1640 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 120Hz ಟಚ್ ಸ್ಯಾಪ್ಲಿಂಗ್ ರೇಟ್ ಬೆಂಬಲಿಸಲಿದೆ. ಈ ಸ್ಮಾರ್ಟ್ಫೋನ್ನ ಡಿಸ್ಪ್ಲೇ 82.8% ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಪಡೆದುಕೊಂಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ