ಸ್ಮಾರ್ಟ್ಫೋನ್ಗಳು (Smartphones) ಇತ್ತೀಚೆಗೆ ಮಾರುಕಟ್ಟೆಯಲ್ಲಿ ಬಹಳಷ್ಟು ಬೇಡಿಕೆಯನ್ನು ಹೊಂದಿವೆ. ಯಾರ ಕೈ ನೋಡಿದರೂ ಈಗ ಮೊಬೈಲ್ಗಳೇ ಕಾಣುತ್ತವೆ. ಒಂದು ರೀತಿಯಲ್ಲಿ ಮೊಬೈಲ್ಗಳು ಮಾನವರ ಜೀವನ ಪ್ರಮುಖ ಸಾಧನವಾಗಿಬಿಟ್ಟಿದೆ. ಇನ್ನು ಈ ಮೊಬೈಲ್ ಕಂಪೆನಿಗಳು ಸಹ ಗ್ರಾಹಕರು ಬೇಡಿಕೆಗೆ ಅನುಗುಣವಾಗಿ ಮಾರುಕಟ್ಟೆಗೆ ಹೊಸ ಹೊಸ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸುತ್ತಲೇ ಇದೆ. ಬಜೆಟ್ ಬೆಲೆಯಲ್ಲಿ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸುವ ಹಲವಾರು ಕಂಪೆನಿಗಳಿವೆ. ಅದರಲ್ಲಿ ಇನ್ಫಿನಿಕ್ಸ್ ಕಂಪೆನಿ (Infinix Company) ಸಹ ಒಂದು. ಈ ಕಂಪೆನಿ ಕೈಗೆಟಕುವ ಬೆಲೆಯಲ್ಲಿ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಮೂಲಕ ಸಾಕಷ್ಟು ಗ್ರಾಹಕರನ್ನು ತನ್ನತ್ತ ಆಕರ್ಷಿಸಿಕೊಂಡಿದೆ. ಈ ಮಧ್ಯೆ ಹೊಸ ಸ್ಮಾರ್ಟ್‌ಫೋನ್ (New Smartphone Launch) ಅನ್ನು ಬಿಡುಗಡೆ ಮಾಡಲು ರೆಡಿಯಾಗಿದೆ.
ಇನ್ಫಿನಿಕ್ಸ್ ಕಂಪೆನಿ ಬಿಡುಗಡೆ ಮಾಡುತ್ತಿರುವ ಸ್ಮಾರ್ಟ್‌ಫೋನ್ ಇನ್ಫಿನಿಕ್ಸ್ ಸ್ಮಾರ್ಟ್ 7 ಎಂಬುದಾಗಿದೆ. ಈ ಡಿವೈಸ್ ಇದೇ ಫೆಬ್ರವರಿ 22 ರಂದು ಮಾರುಕಟ್ಟೆಗೆ ಲಾಂಚ್ ಆಗಲಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ ಫೀಚರ್ಸ್
ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ 6.6 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬಿಡುಗಡೆಯಾಗಬಹುದು ಎಂದು ಹೇಳಲಾಗಿದೆ. ಜೊತೆಗೆ ಈ ಡಿಸ್‌ಪ್ಲೇ 400 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಸಹ ನೀಡಲಿದೆ. ಇದಲ್ಲದೆ ಡಿಸ್‌ಪ್ಲೇ 84.98 % ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತ ಪಡೆದಿರುವ ಸಾಧ್ಯತೆಯಿದೆ.
ಇದನ್ನೂ ಓದಿ: ಈ ಆ್ಯಪ್ ಮೂಲಕ ಯಾವುದೇ ದೇವಾಲಯದ ದರ್ಶನ ಸುಲಭದಲ್ಲಿ ಮಾಡ್ಬಹುದು! ಸಾಕಷ್ಟು ಪ್ರಯೋಜನಗಳು ಸಹ ಲಭ್ಯ
ಕ್ಯಾಮೆರಾ ಫೀಚರ್ಸ್
ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಬಹುದು ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು AI ಲೆನ್ಸ್ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಸೆಲ್ಫಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಸ್ಮಾರ್ಟ್‌ಫೋನ್ ರಿಯರ್ ಕ್ಯಾಮೆರಾ ಜೊತೆಗೆ ಎಲ್ಇಡಿ ಫ್ಲ್ಯಾಷ್ ಮಾಡ್ಯೂಲ್ ಅನ್ನು ಸಹ ಹೊಂದಿದೆ. ರಿಯರ್ ಕ್ಯಾಮೆರಾ ಮೂಲಕ 1080p 30fps ವರೆಗೆ ವಿಡಿಯೋ ರೆಕಾರ್ಡಿಂಗ್ ಅನ್ನು ಮಾಡಬಹುದು.
ಪ್ರೊಸೆಸರ್ ಸಾಮರ್ಥ್ಯ
ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಪ್ರೊಸೆಸರ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದರ ಚಿಪ್‌ಸೆಟ್ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇದುವರೆಗೆ ಬಹಿರಂಗವಾಗಿಲ್ಲ. ಇದು ಆಂಡ್ರಾಯ್ಡ್ 12 ಆಧಾರಿತ ಎಕ್ಸ್ಓಎಸ್ 12 ಔಟ್ ಆಫ್ ದಿ ಬಾಕ್ಸ್ ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4 ಜಿಬಿ ರ್‍ಯಾಮ್ ಮತ್ತು 64ಜಿಬಿ ಇಂಟರ್ನಲ್ ಸ್ಟೊರೇಜ್ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಯಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಈ ಸ್ಮಾರ್ಟ್ಫೋನ್ನ ಸ್ಟೋರೇಜ್ ಸಾಮರ್ಥ್ಯವನ್ನು 2ಟಿಬಿ ವರೆಗೆ ವಿಸ್ತರಿಸಬಹುದಾಗಿದೆ.
ಬ್ಯಾಟರಿ ಫೀಚರ್ಸ್
ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಈ ಬ್ಯಾಟರಿಯ ವೇಗದ ಚಾರ್ಜಿಂಗ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ.
ಇತರೆ ಫೀಚರ್ಸ್
ಇನ್ನು ಈ ಸ್ಮಾರ್ಟ್ಫೋನ್ನ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು AI ಫೇಸ್ ಅನ್‌ಲಾಕ್‌ಗೆ ಬೆಂಬಲವನ್ನು ನೀಡುತ್ತದೆ.
ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ ಭಾರತದಲ್ಲಿ 7,500ರೂ. ಬೆಲೆಯಲ್ಲಿ ಲಭ್ಯವಾಗುವ ಸಾಧ್ಯತೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಫೆಬ್ರವರಿ 22 ರಮದು ಬಿಡುಗಡೆಯಾಗುತ್ತದೆ. ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಬಣ್ಣಗಳಲ್ಲಿ ಲಭ್ಯವಾಗುತ್ತದೆ ಎಂದು ಇನ್ನೂ ಬಹಿರಂಗವಾಗಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ