ಐಕ್ಯೂ ಕಂಪನಿಯ (IQoo Company) ಫೋನ್ಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಇದಕ್ಕೆ ತಕ್ಕಂತೆ ಐಕ್ಯೂ ಕಂಪನಿ ಕೂಡ ಹೊಸ ಮಾದರಿಯ ಫೋನ್ಗಳನ್ನು ಪರಿಚಯಿಸುತ್ತಾ ಬಂದಿದೆ. ಇನ್ನು ಇತ್ತೀಚಿಗೆ ತನ್ನ ಐಕ್ಯೂ ನಿಯೋ 7 ಸರಣಿಯನ್ನು (IQoo Neo 7 Series) ಪರಿಚಯಿಸಿ ಸಾಕಷ್ಟು ಸೌಂಡ್ ಮಾಡಿತ್ತು. ಇದೀಗ ಅದೇ ಸರಣಿಯಲ್ಲಿ ಹೊಸದಾಗಿ ಐಕ್ಯೂ ನಿಯೋ 7 ರೇಸಿಂಗ್ ಎಡಿಷನ್ ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್ಫೋನ್ ಸ್ನಾಪ್ಡ್ರಾಗನ್ 8+ Gen 1 ಪ್ರೊಸೆಸರ್ (Processor) ವೇಗವನ್ನು ಪಡೆದುಕೊಂಡಿದೆ. ಐಕ್ಯೂ ಕಂಪನಿ ಈ ಹಿಂದೆಯೂ ಹೊಸ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿತ್ತು ಅವುಗಳೆಲ್ಲವೂ ಅದರದ್ದೇ ಆದಂತಹ ವಿಶೇಷ ಫೀಚರ್ಸ್ಗಳನ್ನು ಹೊಂದಿತ್ತು. ಇದೀಗ ಮತ್ತೆ ಹೊಸ ಸ್ಮಾರ್ಟ್ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ.
ಐಕ್ಯೂ ಕಂಪನಿ ಇದೀಗ ಮೊಬೈಲ್ ಮಾರುಕಟ್ಟೆಗೆ ಹೊಸ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ. ಐಕ್ಯೂ ನಿಯೋ 7 ರೇಸಿಂಗ್ ಎಡಿಷನ್ ಎಂಬ ಫೋನ್ ಅನ್ನು ಲಾಂಚ್ ಮಾಡಿದೆ. ಇದರ ಫೀಚರ್ಸ್, ಬೆಲೆ ಬಗ್ಗೆ ಸಂಪೂರ್ಣ ಮಾಹಿತಿ ಬೇಕಿದ್ರೆ ಈ ಕೆಳಗಿನ ಲೇಖನವನ್ನು ಓದಿ.
ಐಕ್ಯೂ ನಿಯೋ 7 ರೇಸಿಂಗ್ ಎಡಿಷನ್ ಸ್ಮಾರ್ಟ್ಫೋನ್ 6.78 ಇಂಚಿನ FHD+ E5 ಅಮೋಲ್ಡ್ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ ಪಂಚ್ ಹೋಲ್ ಕಟೌಟ್ ಅನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಮತ್ತು ಇನ್ ಸ್ಕ್ರೀನ್ ಫಿಂಗರ್ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಜೊತೆಗೆ ಈ ಡಿಸ್ಪ್ಲೇ HDR10 ಬೆಂಬಲವನ್ನು ಹೊಂದಿದೆ. ಇದಲ್ಲದೆ ಫ್ರೇಮ್ ರೇಟ್ ಇಂಟರ್ಪೋಲೇಷನ್, ಇಮೇಜ್ ರೆಂಡರಿಂಗ್ ಫೀಚರ್ಸ್ ಒಳಗೊಂಡ ಪ್ರೋ+ ಡಿಸ್ಪ್ಲೇ ಚಿಪ್ ಅನ್ನು ಒಳಗೊಂಡಿದೆ.
ಇದನ್ನೂ ಓದಿ: ಆ್ಯಪಲ್ ಕಂಪನಿಯಿಂದ ಹೊಸ ಫೋಲ್ಡಬಲ್ ಐಫೋನ್ ಬಿಡುಗಡೆ! ಯಾವಾಗ ಅನಾವರಣ?
ಕ್ಯಾಮೆರಾ ಫೀಚರ್ಸ್
ಐಕ್ಯೂ ನಿಯೋ 7 ರೇಸಿಂಗ್ ಎಡಿಷನ್ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್ಸಂಗ್ GN5 ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆ್ಯಂಗಲ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇನ್ನು 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಅಳವಡಿಸಲಾಗಿದೆ.
ಪ್ರೊಸೆಸರ್ ಸಾಮರ್ಥ್ಯ
ಐಕ್ಯೂ ನಿಯೋ 7 ರೇಸಿಂಗ್ ಎಡಿಷನ್ ಸ್ಮಾರ್ಟ್ಫೋನ್ ಸ್ನಾಪ್ಡ್ರಾಗನ್ 8+ Gen 1SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು ಆಂಡ್ರಾಯ್ಡ್ 13 ಆಧಾರದ ಮೇಲೆ OriginOS 3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 16 ಜಿಬಿ ರ್ಯಾಮ್ ಮತ್ತು 512 ಜಿಬಿ ಇಂಟರ್ನಲ್ ಸ್ಟೋರೇಜ್ ಅನ್ನು ಪಡೆದುಕೊಂಡಿದೆ. ಉನ್ನು ಈ ಸ್ಮಾರ್ಟ್ಫೋನ್ನ ರ್ಯಾಮ್ ಅನ್ನು 8 ಜಿಬಿಯಷ್ಟು ವಿಸ್ತರಿಸುವ ಅವಕಾಶವಿದೆ.
ಬ್ಯಾಟರಿ ಫೀಚರ್ಸ್
ಐಕ್ಯೂ ನಿಯೋ 7 ರೇಸಿಂಗ್ ಆವೃತ್ತಿಯು 120W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಹೊಂದಿದೆ.
ಇತರ ಫೀಚರ್ಸ್
ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್ಬಿ ಸಿ ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ ಆಕ್ಸಿಲೆರೋ ಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್, ಗ್ಯಾವಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.
ಬೆಲೆ ಮತ್ತು ಲಭ್ಯತೆ
ಐಕ್ಯೂ ನಿಯೋ 7 ರೇಸಿಂಗ್ ಎಡಿಷನ್ ಸ್ಮಾರ್ಟ್ಫೋನ್ ಸದ್ಯ ಚೀನಾದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಆದ್ದರಿಂದ ಪ್ರಸ್ತುತ ಚೀನಾದಲ್ಲಿ ಬಿಡುಗಡೆಯಾಗಿರುವ ಸ್ಮಾರ್ಟ್ಫೊನ್ 8 ಜಿಬಿ ರ್ಯಾಮ್ ಮತ್ತು 128 ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್ಫೋನ್ನ ಬೆಲೆ ಚೀನಶಾದಲ್ಲಿ ಆರ್ಎಮ್ಬಿ 2,799 ಅಂದರೆ ಭಾರತದಲ್ಲಿ ಸುಮಾರು 33,305 ರೂಪಾಯಿ ಆಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ