ಮೊಬೈಲ್ ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯಲ್ಲಿ (Budget Price) ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಮೂಲಕ ಐಟೆಲ್ ಕಂಪೆನಿ (Itel Company) ಬಹಳಷ್ಟು ಜನಪ್ರಿಯತೆಯನ್ನು ಪಡೆದಿದೆ. ಭಾರೀ ಹಿಂದೆಯಿಂದ ಪ್ರಚಲಿತದಲ್ಲಿರುವ ಈ ಕಂಪೆನಿ ಮೊದಲಿಗೆ ಫೀಚರ್ ಫೋನ್ಗಳನ್ನು (Feature Phones) ಬಿಡುಗಡೆ ಮಾಡುವ ಮೂಲಕ ಗ್ರಾಹಕರ ಮೆಚ್ಚುಗೆ ಪಾತ್ರವಾಗಿತ್ತು. ಇದೀಗ ಈ ಕಂಪೆನಿಯಿಂದ ಹೊಸ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಲು ರೆಡಿಯಾಗಿದೆ. ಬಜೆಟ್ ಬೆಲೆಯಲ್ಲಿ ಸ್ಮಾರ್ಟ್ಫೋನ್ಗಳನ್ನು ಖರೀದಿಸುವ ಪ್ಲ್ಯಾನ್ನಲ್ಲಿರುವವರಿಗೆ ಐಟೆಲ್ ಕಂಪೆನಿಯ ಸ್ಮಾರ್ಟ್ಫೋನ್ಗಳು ಉತ್ತಮವಾಗಿದೆ. ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಫೀಚರ್ಸ್ಗಳನ್ನು ಹೊಂದಿರುವ ಸ್ಮಾರ್ಟ್ಫೋನ್ಗಳಲ್ಲಿ ಐಟೆಲ್ ಕಂಪೆನಿಯ ಸ್ಮಾರ್ಟ್ಫೋನ್ಗಳು ಸಹ ಒಂದು.
ಐಟೆಲ್ ಕಂಪೆನಿಯಿಂದ ಐಟೆಲ್ ಎ24 ಪ್ರೋ ಸ್ಮಾರ್ಟ್ಫೋನ್ ಸದ್ಯ ಮಾರುಕಟ್ಟೆಗೆ ಲಗ್ಗೆಯಿಡುತ್ತಿದೆ. ಭಾರೀ ಅಗ್ಗದ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ ಅನ್ನು ಖರೀದಿಸಬಹುದಾಗಿದೆ. ಹಾಗಿದ್ರೆ ಈ ಸ್ಮಾರ್ಟ್ಫೋನ್ ಫೀಚರ್ಸ್ ಹೇಗಿದೆ ಎಂದು ತಿಳಿಬೇಕಾದ್ರೆ ಈ ಲೇಖನವನ್ನು ಓದಿ.
ಐಟೆಲ್ ಎ24 ಪ್ರೋ ಸ್ಮಾರ್ಟ್ಫೋನ್ ಫೀಚರ್ಸ್
ಐಟೆಲ್ ಎ24 ಪ್ರೋ ಸ್ಮಾರ್ಟ್ಫೋನ್ 5 ಇಂಚಿನ ಐಪಿಎಸ್ ಎಲ್ಸಿಡಿ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 850 x 480 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಡಿಸ್ಪ್ಲೇ 65.36 ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದೆ. ಜೊತೆಗೆ 294 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ನೀಡಲಿದೆ. ಈ ಸ್ಮಾರ್ಟ್ಫೋನ್ ಸ್ಮಾಲ್ ಡಿಸ್ಪ್ಲೇ ಹೊಂದಿರುವುದರಿಂದ ಇದು ಕಾಂಪ್ಯಾಕ್ಟ್ ಫೋನ್ ಆಗಿದೆ.
ಕ್ಯಾಮೆರಾ ಫೀಚರ್ಸ್ ಹೇಗಿದೆ?
ಐಟೆಲ್ ಎ24 ಪ್ರೋ ಸ್ಮಾರ್ಟ್ಫೋನ್ 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದಲ್ಲದೆ 0.3 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇನ್ನು ಹಿಂಭಾಗದಲ್ಲಿ ಕ್ಯಾಮೆರಾ ಜೊತೆಗೆ ಎಲ್ಇಡಿ ಫ್ಲ್ಯಾಷ್ ಅನ್ನು ಸಹ ಅಳವಡಿಸಲಾಗಿದೆ. ವಿಶೇಷವಾಗಿ ಸೆಲ್ಫಿ ಕ್ಯಾಮೆರಾದಲ್ಲಿ ಕೂಡ ಎಲ್ಇಡಿ ಫ್ಲ್ಯಾಷ್ ಅನ್ನು ಅಳವಡಿಸಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್ಗಳಲ್ಲಿ ಡಿಜಿಟಲ್ ಜೂಮ್ ಅನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಐಟೆಲ್ ಎ24 ಪ್ರೋ ಸ್ಮಾರ್ಟ್ಫೋನ್ ಯುನಿಸೋಕ್ ಎಸ್ಸಿ9832ಇ ಕ್ವಾಡ್ಕೋರ್ ಚಿಪ್ಸೆಟ್ನಲ್ಲಿ ರನ್ ಆಗಲಿದೆ. ಈ ಸ್ಮಾರ್ಟ್ಫೋನ್ ಆಂಡ್ರಾಯ್ಡ್ 12ನ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 32‘ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸ್ಟೋರೇಜ್ ಸಾಮರ್ಥ್ಯವನ್ನು 32ಜಿಬಿ ವರೆಗೆ ವಿಸ್ತರಿಸುವುದಕ್ಕೆ ಅವಕಾಶ ನೀಡಲಿದೆ.
ಬ್ಯಾಟರಿ ಫೀಚರ್ಸ್
ಐಟೆಲ್ ಎ24 ಪ್ರೋ ಸ್ಮಾರ್ಟ್ಫೋನ್ 3,020mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಒಳಗೊಂಡಿದೆ. ಇದು ಮೈಕ್ರೋ ಯುಎಸ್ಪಿ ಪೋರ್ಟ್ ಮೂಲಕ ಚಾರ್ಜಿಂಗ್ ಸಾಮರ್ಥ್ಯವನ್ನು ಬೆಂಬಲಿಸಲಿದೆ.
ಇತರೆ ಫೀಚರ್ಸ್
ಐಟೆಲ್ ಎ24 ಪ್ರೋ ಸ್ಮಾರ್ಟ್ಫೋನ್ನ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್ಬಿ ಪೋರ್ಟ್, ಹೆಡ್ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಜೊತೆಗೆ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೊಮೀಟರ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.
ಇದನ್ನೂ ಓದಿ: ರಿಲಯನ್ಸ್ ಡಿಜಿಟಲ್ ಇಂಡಿಯಾ ಸೇಲ್ ಆರಂಭ! ಈ ಡಿವೈಸ್ಗಳ ಮೇಲೆ ಬಂಪರ್ ಆಫರ್
ಬೆಲೆ ಮತ್ತು ಲಭ್ಯತೆ
ಐಟೆಲ್ ಎ24 ಪ್ರೋ ಸ್ಮಾರ್ಟ್ಫೋನ್ ಪ್ರಸ್ತುತ ಬಾಂಗ್ಲಾದೇಶದಲ್ಲಿ ಮಾತ್ರ ಬಿಡುಗಡೆಯಾಗಿದೆ. ಇದು ಆ ದೇಶದಲ್ಲಿ BDT 5,990 ಅಂದರೆ ಭಾರತದಲ್ಲಿ ಅಂದಾಜು 4,592 ರೂಪಾಯಿ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇದು ಭಾರತಕ್ಕೆ ಅತೀ ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಎಂದು ವರದಿಯಾಗಿದೆ. ಇನ್ನು ಈ ಸ್ಮಾರ್ಟ್ಫೋನ್ ಹಸಿರು ಬಣ್ಣದಲ್ಲಿ ಮಾತ್ರ ದೊರೆಯಲಿದೆ. ಭಾರತದ ಮಾರುಕಟ್ಟೆಯಲ್ಲಿ ಕೂಡ ಈ ಸ್ಮಾರ್ಟ್ಫೋನ್ ಎಂಟ್ರಿ ಲೆವೆಲ್ ಪ್ರೈಸ್ಟ್ಯಾಗ್ನಲ್ಲಿಯೇ ಬರಲಿದೆ ಎಂದು ನಿರೀಕ್ಷಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ