ದೇಶದಲ್ಲಿ ಹಲವಾರು ಟೆಲಿಕಾಂ ಕಂಪೆನಿಗಳಿವೆ (Telecom Companies). ಅದರಲ್ಲಿ ಮುಂಚೂಣಿಯಲ್ಲಿರುವ ಕಂಪೆನಿಗಳೆಂದರೆ ಜಿಯೋ (Jio), ಏರ್ಟೆಲ್, ವೊಡಫೋನ್ ಐಡಿಯಾ. ಇದರಲ್ಲಿ ಜಿಯೋ ಅತೀ ಹೆಚ್ಚು ಗ್ರಾಹಕರನ್ನು ಹೊಂದಿದ್ದು ನಂಬರ್ ಒನ್ ಸ್ಥಾನದಲ್ಲಿದೆ. ಜಿಯೋ ಗೆ ಪ್ರತಿಸ್ಪರ್ಧಿಯಾಗಿ ಎಷ್ಟೇ ಕಂಪೆನಿಗಳು ಅಗ್ಗದ ಬೆಲೆಯ ರೀಚಾರ್ಜ್ ಪ್ಲ್ಯಾನ್ಗಳನ್ನು ಬಿಡುಗಡೆ ಮಾಡಿದ್ರೂ, ಜಿಯೋ ಮಾತ್ರ ತನ್ನ ಸ್ಥಾನವನ್ನು ಬಿಟ್ಟ ಕೊಟ್ಟೇ ಇಲ್ಲ. ಇದಕ್ಕೆ ಕಾರಣ ಜಿಯೋ ಪರಿಚಯಿಸುತ್ತಿರುವಂತಹ ರೀಚಾರ್ಜ್ ಪ್ಲ್ಯಾನ್ಗಳು (Recharge Plans) ಎಂದು ಹೇಳ್ಬಹುದು. ಜಿಯೋ ಕಂಪೆನಿ ಅಗ್ಗದ ಬೆಲೆಯ ರೀಚಾರ್ಜ್ ಯೋಜನೆಗಳನ್ನು ಪರಿಚಯಿಸುವಲ್ಲಿ ಭಾರೀ ಜನಪ್ರಿಯತೆಯನ್ನು ಪಡೆದಿದೆ.
ಜಿಯೋ ತನ್ನ ಗ್ರಾಹಕರಿಗಾಗಿ ಇದುವರೆಗೆ ಹಲವಾರು ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಈ ಪ್ಲ್ಯಾನ್ಗಳಲ್ಲಿ ಜಿಯೋ ಗ್ರಾಹಕರು ಅಧಿಕ ಡೇಟಾ, ಅನ್ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಹೀಗೆ ಅನೇಕ ಪ್ರಯೋಜನಗಳು ಲಭ್ಯವಾಗುತ್ತದೆ. ಹಾಗಿದ್ರೆ ಈ ಪ್ರಯೋಜನಗಳನ್ನು ಹೊಂದಿರುವ ಜಿಯೋನ ಬೆಸ್ಟ್ ರೀಚಾರ್ಜ್ ಪ್ಲ್ಯಾನ್ಗಳು ಯಾವುದೆಂಬುದನ್ನು ಈ ಲೇಖನದಲ್ಲಿ ತಿಳಿಯಿರಿ.
ಜಿಯೋನ 2999 ರೂಪಾಯಿ ರೀಚಾರ್ಜ್ ಪ್ಲ್ಯಾನ್
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಆದ್ರೆ, ಈ ಪ್ಲ್ಯಾನ್‌ನಲ್ಲಿ ಈಗ ಹೆಚ್ಚುವರಿಯಾಗಿ 23 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆಯಬಹುದಾಗಿದೆ. ಈ ಮೂಲಕ ವ್ಯಾಲಿಡಿಟಿ ಅವಧಿಯು ಒಟ್ಟು 388 ದಿನಗಳವರೆಗೆ ವಿಸ್ತರಣೆಯಾಗುತ್ತದೆ.
ಇದನ್ನೂ ಓದಿ: ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ ಹೊಸ ಸ್ಮಾರ್ಟ್ವಾಚ್! ಫೀಚರ್ಸ್, ಬೆಲೆ ಮಾಹಿತಿ ಇಲ್ಲಿದೆ
ಈ ಯೋಜನೆಯಲ್ಲಿ ಗ್ರಾಹಕರು ಪ್ರತಿದಿನ 2.5ಜಿಬಿ ಡೇಟಾ ಪ್ರಯೋಜನಗಳುಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 912.5 ಜಿಬಿ ಡೇಟಾ ದೊರೆಯುತ್ತದೆ. ಇದಲ್ಲದೇ ಅನಿಯಮಿತ ವಾಯ್ಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಅನ್ನು ಉಚಿತವಾಗಿ ಮಾಡಬಹುದಾಗಿದೆ. ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಜಿಯೋ ಆ್ಯಪ್ಸ್ಗಳನ್ನು ಉಚಿತವಾಗಿ ಬಳಕೆ ಮಾಡಬಹುದು.
ಜಿಯೋನ 2879 ರೂಪಾಯಿ ರೀಚಾರ್ಜ್ ಪ್ಲ್ಯಾನ್
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಇದು ಹೊಂದಿದೆ. ಇದರಲ್ಲಿ ಪ್ರತಿದಿನ 2 ಜಿಬಿ ಡೇಟಾವನ್ನು ಬಳಸಬಹುದಾಗಿದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯ್ಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಮಾಡುವ ಪ್ರಯೋಜನ ಸಹ ದೊರೆಯುತ್ತದೆ
ಜಿಯೋನ 899 ರೂಪಾಯಿ ಪ್ರೀಪೇಯ್ಡ್ ಪ್ಲಾನ್
ಜಿಯೋ ಟೆಲಿಕಾಂ ಹೊಸದಾಗಿ ಪರಿಚಯಿಸಿರುವ 899 ರೂಪಾಯಿ ಪ್ರೀಪೇಯ್ಡ್ ಪ್ಲಾನ್ 90 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ದೈನಂದಿನ 2.5 ಜಿಬಿ ಡೇಟಾ ಲಭ್ಯವಾಗಲಿದ್ದು, ವ್ಯಾಲಿಡಿಟಿ ಮುಗಿಯುವ ಹೊತ್ತಿಗೆ 225ಜಿಬಿ ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನ್ಲಿಮಿಟೆಡ್ ವಾಯ್ಸ್ ಕರೆಯ ಪ್ರಯೋಜನ, ಪ್ರತಿದಿನ ಉಚಿತ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಜಿಯೋ ಆ್ಯಪ್ಗಳನ್ನು ಉಚಿತವಾಗಿ ಬಳಕೆ ಮಾಡಬಹುದು.
ಜಿಯೋ ಟೆಲಿಕಾಂನ 719 ರೂಪಾಯಿ ಪ್ರೀಪೇಯ್ಡ್ ಪ್ಲ್ಯಾನ್
ಜಿಯೋ ಟೆಲಿಕಾಂನ 719 ರೂಪಾಯಿ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2ಜಿಬಿ ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯ್ಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಗ್ರಾಹಕರು ಒಟ್ಟು 168ಜಿಬಿ ಡೇಟಾವನ್ನು ಬಳಸಬಹುದು. ಹೆಚ್ಚುವರಿಯಾಗಿ ಜಿಯೋ ಆ್ಯಪ್ಗಳ ಸೌಲಭ್ಯ ದೊರೆಯುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ