HOME » NEWS » Tech » KRIKEYS AUGMENTED REALTIY BASED GAME YAATRA WITH JIO HG

ಜಿಯೋ ಸಹಯೋಗದಲ್ಲಿ ಆಗ್ಮೆಂಟೆಡ್-ರಿಯಾಲಿಟಿ ಆಧಾರಿತ ಯಾತ್ರಾ ಗೇಮ್ ಪರಿಚಯಿಸಿದ ಕ್ರಿಕಿ

ಬಳಕೆದಾರರು ತಮ್ಮ ಆಟವನ್ನು ಪೂರ್ಣಗೊಳಿಸಿದ ನಂತರ, ವಿಡಿಯೋವನ್ನು ತಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಬಹುದು

news18-kannada
Updated:December 4, 2020, 6:11 PM IST
ಜಿಯೋ ಸಹಯೋಗದಲ್ಲಿ ಆಗ್ಮೆಂಟೆಡ್-ರಿಯಾಲಿಟಿ ಆಧಾರಿತ ಯಾತ್ರಾ ಗೇಮ್ ಪರಿಚಯಿಸಿದ ಕ್ರಿಕಿ
ಕ್ರಿಕಿ
  • Share this:
ಆಗ್ಮೆಂಟೆಡ್ ಎಂಬ ರಿಯಾಲಿಟಿ ಮೊಬೈಲ್ ಗೇಮಿಂಗ್ ಸಂಸ್ಥೆ ಕ್ರಿಕಿ, 'ಯಾತ್ರಾ' ಎಂಬ ಹೊಸ ಆಗ್ಮೆಂಟೆಡ್ ರಿಯಾಲಿಟಿ ಗೇಮ್ ಅನ್ನು ಭಾರತದಲ್ಲಿ ಪರಿಚಯಿಸಿದೆ. ಇದಕ್ಕಾಗಿ ಜಿಯೋ ಸಂಸ್ಥೆಯೊಡನೆ ಕೈಜೋಡಿಸಿದೆ.  ಸೀರೀಸ್ ಎ ಫಂಡಿಂಗ್ ಸುತ್ತನ್ನೂ ಮುನ್ನಡೆಸಿದ ಜಿಯೋ, ಕ್ರಿಕಿ ಪಡೆದ ಒಟ್ಟು ಹೂಡಿಕೆಯನ್ನು 22 ಮಿಲಿಯನ್ ಡಾಲರುಗಳಿಗೆ ಕೊಂಡೊಯ್ದಿದೆ.


ಸಂದರ್ಭದಲ್ಲಿ ಮಾತನಾಡಿದ ಕ್ರಿಕಿ ಸಂಸ್ಥಾಪಕರಾದ ಜಾಹ್ನವಿ ಮತ್ತು ಕೇತಕಿ ಶ್ರೀರಾಮ್, " ಕ್ರಿಕಿ ಮೂಲಕ ಸ್ಫೂರ್ತಿ ಮತ್ತು ವಾಸ್ತವವನ್ನು ಒಂದುಗೂಡಿಸುವುದು ನಮ್ಮ ದೃಷ್ಟಿಕೋನವಾಗಿದೆ. ಆಗ್ಮೆಂಟೆಡ್ ರಿಯಾಲಿಟಿಯೊಂದಿಗೆ, ನಿಮ್ಮ ಮೊಬೈಲ್ ಫೋನ್‌ ಮೂಲಕ ಫ್ಯಾಂಟಸಿ ಪ್ರಪಂಚಗಳನ್ನು ನೇರವಾಗಿ ನಿಮ್ಮ ಮನೆಗೆ ತರಲು ನಮಗೆ ಸಾಧ್ಯವಾಗುತ್ತದೆ." ಎಂದು ಹೇಳಿದ್ದಾರೆ.

ಕೇವಲ ತಮ್ಮ ಮೊಬೈಲ್ ಫೋನ್ ಕ್ಯಾಮೆರಾದೊಂದಿಗೆ, ಆಟಗಾರರು ಯಾತ್ರಾದ ಆಕ್ಷನ್-ಸಾಹಸಗಾಥೆಯನ್ನು ಪ್ರವೇಶಿಸಬಹುದು.  ಮಾನ್ಸ್ಟರ್ಗಳ ಸೈನ್ಯವನ್ನು ಸೋಲಿಸುಬಹುದು. ಬಿಲ್ಲು ಮತ್ತು ಬಾಣ, ಚಕ್ರ, ಮಿಂಚು ಮತ್ತು ಫೈರ್ ಬೋಲ್ಟ್ಗಳಂತಹ ಶಸ್ತ್ರಾಸ್ತ್ರಗಳನ್ನು ಬಳಸಿ, ಆಟಗಾರರು ವಿವಿಧ ಹಂತದ ಯುದ್ಧ ಮತ್ತು ಪಜಲ್ ಗೇಮ್ಗಳ ಮೂಲಕ ಹೋರಾಡಬಹುದು.

ಬಳಕೆದಾರರು ತಮ್ಮ ಆಟವನ್ನು ಪೂರ್ಣಗೊಳಿಸಿದ ನಂತರ, ವಿಡಿಯೋವನ್ನು ತಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಬಹುದು. ಇತರ ಬಳಕೆದಾರರು ಪೋಸ್ಟ್ ಮಾಡಿದ ಆಟದ ವೀಡಿಯೊಗಳನ್ನು ನೋಡಲು ವಿಡಿಯೋ ಫೀಡ್ಗಳು ಮತ್ತು ಡಿಜಿಟಲ್ ತರಬೇತಿ ಮೈದಾನ ಕೂಡ ಲಭ್ಯವಿದ್ದು, ಮತ್ತೆ ಆಡುವ ಮೊದಲು ಆಟಗಾರರು ಅಲ್ಲಿ ತಮ್ಮ ಬಿಲ್ಲು - ಬಾಣದ ಕೌಶಲವನ್ನು ಅಭ್ಯಾಸ ಮಾಡಬಹುದು.
ಕ್ರಿಕಿ




ಜಿಯೋ ಬಳಕೆದಾರರಿಗೆ ಈ ಕೆಳಗಿನ ವಿಶೇಷ ಸೌಲಭ್ಯಗಳು ದೊರಕುತ್ತಿವೆ:
- 3ಡಿ ಅವತಾರ್ ವೈಶಿಷ್ಟ್ಯ
- ಹೆಚ್ಚುವರಿ ಶಸ್ತ್ರಾಸ್ತ್ರಗಳು ಮತ್ತು ಪವರ್ಗಳನ್ನು ಅನ್ಲಾಕ್ ಮಾಡಲು ಗೇಮ್ಪ್ಲೇ ಟೋಕನ್ಗಳು
- ಗೇಮ್ ಲೆವೆಲ್ಗಳು

ಸಂದರ್ಭದಲ್ಲಿ ಮಾತನಾಡಿದ ಜಿಯೋ ನಿರ್ದೇಶಕ ಆಕಾಶ್ ಅಂಬಾನಿ, "ಆಗ್ಮೆಂಟೆಡ್ ರಿಯಾಲಿಟಿಯನ್ನು ಅಂಗೀಕರಿಸಲು ಕ್ರಿಕಿ ಒಂದು ಇಡೀ ಪೀಳಿಗೆಯ ಭಾರತೀಯರನ್ನು ಪ್ರೇರೇಪಿಸಲಿದೆ. ಪ್ರಪಂಚದೆಲ್ಲೆಡೆ ಅತ್ಯುತ್ತಮ ಅನುಭವಗಳನ್ನು ಭಾರತಕ್ಕೆ ತರುವುದು ನಮ್ಮ ದೃಷ್ಟಿಕೋನವಾಗಿದೆ.  ಯಾತ್ರಾ ಪರಿಚಯವು ದಿಕ್ಕಿನಲ್ಲಿ ಒಂದು ಹೆಜ್ಜೆಯಾಗಿದೆ. ಆಗ್ಮೆಂಟೆಡ್ ರಿಯಾಲಿಟಿ ಗೇಮಿಂಗ್ ಬಳಕೆದಾರರನ್ನು ತನ್ನದೇ ಆದ ಜಗತ್ತಿನೊಳಕ್ಕೆ ಕರೆದೊಯ್ಯುತ್ತದೆ,  ಯಾತ್ರಾ ಮೂಲಕ ಆಗ್ಮೆಂಟೆಡ್ ರಿಯಾಲಿಟಿಯನ್ನು (AR) ಅನುಭವಿಸಲು ನಾವು ಜಿಯೋ ಜೊತೆಗೆ ಪ್ರತಿಯೊಬ್ಬ ಬಳಕೆದಾರರಿನ್ನು ಆಹ್ವಾನಿಸುತ್ತೇವೆ" ಎಂದು ಹೇಳಿದ್ದಾರೆ.

ಕ್ರಿಕಿ ಈಗ ಐಒಎಸ್ ಆಪ್ ಸ್ಟೋರ್ ಮತ್ತು ಗೂಗಲ್ ಪ್ಲೇ ಸ್ಟೋರ್‌‌ಗಳಲ್ಲಿ ಉಚಿತವಾಗಿ ಲಭ್ಯವಿದೆ.
Published by: Harshith AS
First published: December 4, 2020, 6:06 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories