ಮಾರುಕಟ್ಟೆಯಲ್ಲಿ ಲ್ಯಾಪ್ಟಾಪ್ (Laptop) ವಲಯದಲ್ಲಿ ಹೆಚ್ಚು ಜನಪ್ರಿಯವಾದ ಕಂಪನಿಯೆಂದರೆ ಅದು ಲೆನೋವೋ ಕಂಪನಿ. ಇದು ಟೆಕ್ನಾಲಜಿ ಮಾರುಕಟ್ಟೆಗೆ ಹೊಸ ಹೊಸ ಲ್ಯಾಪ್ಟಾಪ್ ಅನ್ನು ಪರಿಚಯಿಸುವ ಮೂಲಕ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನು ಮೂಡಿಸಿದೆ. ಟೆಕ್ನಾಲಜಿ ಕಂಪನಿಗಳು ದಿನದಿಂದ ದಿನಕ್ಕೆ ಅಭವೃದ್ಧಿಯಾಗುತ್ತಲೇ ಇದೆ. ಇದೀಗ ಲೆನೋವೋ ಗ್ರಾಹಕರಿಗೆ ಕಂಪನಿ (Lenovo Company) ಗುಡ್ನ್ಯೂಸ್ ಅನ್ನು ನೀಡಿದೆ. ಇದೀಗ ಲೆನೋವೋ ಕಂಪನಿಯಿಂದ ಹೊಸ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಇದು ಲೆನೋವೋ ಕಂಪನಿಯಿಂದ ಬಿಡುಗಡೆಯಾಗುತ್ತಿರುವ ಮೊದಲ ಸ್ಮಾರ್ಟ್ಫೋನ್ (Smartphone) ಇದಾಗಿದ್ದು. ಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನು ಇದು ಮೂಡಿಸಲಿದೆ.
ಲೆನೋವೋ ಕಂಪನಿ ಹೊಸ ಸ್ಮಾರ್ಟ್ಫೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಜ್ಜಾಗಿದೆ. ಇದೀಗ ಲೆನೋವೋ ಥಿಂಕ್ ಫೋನ್ ಎಂಬ ಸ್ಮಾರ್ಟ್ಫೋನ್ ಇದಾಗಿದ್ದು, ಲೆನೋವೋ ಕಂಪನಿಯಿಂದ ಬರುತ್ತಿರು ಮೊದಲ ಫೋನ್ ಇದಾಗಿದೆ. ಇದರ ಫೀಚರ್ಸ್, ಬೆಲೆ ಬಗ್ಗೆ ಕಂಪ್ಲೀಟ್ ಮಾಹಿತಿ ಇಲ್ಲಿದೆ.
ಲೆನೋವೋ ಥಿಂಕ್ ಫೋನ್ ನ ಫೀಚರ್ಸ್ ಹೇಗಿದೆ?
ಲೆನೋವೋ ಥಿಂಕ್ ಫೋನ್ 6.6 ಇಂಚಿನ ಹೆಚ್ಡಿ+ ಡಿಸ್ಪ್ಲೇ ಹೊಂದಿದೆ. ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಈ ಡಿಸ್ಪ್ಲೇ 144Hz ರಿಫ್ರೆಶ್ ರೇಟ್ ಮತ್ತು HDR10+ ಬೆಂಬಲವನ್ನು ಹೊಂದಿದೆ. ಇನ್ನು ಡಿಸ್ಪ್ಲೇ ಪಂಚ್ ಹೋಲ್ ನಾಚ್ ಹೊಂದಿದ್ದು, ಡಿಸ್ಪ್ಲೇನ ಸೇಫ್ಟಿಗಾಗಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಲೇಯರ್ ಅನ್ನು ಅಳವಡಿಸಲಾಗಿದೆ.
ಇದನ್ನೂ ಓದಿ: ಈ ಐಫೋನ್ ಅನ್ನು ಕೇವಲ 5990 ರೂಪಾಯಿಗೆ ಖರೀದಿಸಿ! ಫ್ಲಿಫ್ಕಾರ್ಟ್ನಿಂದ ಬಂಪರ್ ಗಿಫ್ಟ್
ಕ್ಯಾಮೆರಾ ಫೀಚರ್ಸ್
ಲೆನೋವೋ ಥಿಂಕ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್ಫೋನ್ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿಕೊಂಡಿದೆ.
ಬ್ಯಾಟರಿ ಫೀಚರ್ಸ್
ಲೆನೋವೋ ಥಿಂಕ್ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 68W ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಚಾರ್ಜ್ ಪೋರ್ಟ್ ಮತ್ತು ಡೇಟಾ ವರ್ಗಾವಣೆಗಾಗಿ ಯುಎಸ್ಬಿ 3.1 ಟೈಪ್ ಸಿ ಪೋರ್ಟ್ ಅನ್ನು ಹೊಂದಿದೆ. ಈ ಸ್ಮಾರ್ಟ್ಫೋನ್ 15W ವರೆಗೆ ವಾಯರ್ಲೆಸ್ ಚಾರ್ಜಿಂಗ್ ಸಾಮರ್ಥ್ಯವನ್ನು ಸಹ ಹೊಂದಿಕೊಂಡಿದೆ.
ಕನೆಕ್ಟಿವಿಟಿ ಫೀಚರ್ಸ್
ಇದರೊಂದಿಗೆ ಈ ಡಿವೈಸ್ ಸ್ಟೀರಿಯೋ ಸ್ಪೀಕರ್ ಸೆಟಪ್ ಮತ್ತು ಡಾಲ್ಬಿ ಅಟ್ಮಾಸ್ ಆಡಿಯೋ ಬೆಂಬಲವನ್ನು ಸಹ ಹೊಂದಿದೆ. ಇನ್ನು ವಿಶೇಷವಾಗಿ ಹಾಟ್ಸ್ಪಾಟ್, ವೈಫೈ, ಬ್ಲೂಟೂತ್ ಅನ್ನು ಬೆಂಬಲಿಸಲಿದೆ.
ಪ್ರೊಸೆಸರ್ ಸಾಮರ್ಥ್ಯ
ಲೆನೋವೋ ಥಿಂಕ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 8+ ಜೆನ್ 1 ಎಸ್ಓಸಿ ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12ಜಿಬಿ ರ್ಯಾಮ್ ಮತ್ತು 512ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್ಫೋನ್ ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಇನ್ನು ಯಾವುದೇ ಮಾಹಿತಿಯನ್ನು ಬಹಿರಂಗ ಪಡಿಸಿಲ್ಲ.
ಬೆಲೆ ಮತ್ತು ಲಭ್ಯತೆ
ಲೆನೋವೋ ಥಿಂಕ್ಫೋನ್ನ ಬೆಲೆ ಬಗ್ಗೆ ಕಂಪನಿ ಯಾವುದೇ ಮಾಹಿತಿಯನ್ನು ಬಹಿರಂಗ ಮಾಡಿಲ್ಲ. ಆದರೆ ಈ ಸ್ಮಾರ್ಟ್ಫೋನ್ ಯುಎಸ್, ಯುರೋಪ್, ಲ್ಯಾಟಿನ್ ಅಮೇರಿಕಾ, ಮಧ್ಯಪ್ರಾಚ್ಯ, ಆಸ್ಟ್ರೇಲಿಯಾ ಮತ್ತು ಮುಂಬರುವ ತಿಂಗಳುಗಳಲ್ಲಿ ಏಷ್ಯಾದಾದ್ಯಂತ ಆಯ್ದ ದೇಶಗಳಲ್ಲಿ ಬಿಡುಗಡೆಯಾಗುತ್ತದೆ ಎಂದು ಕಂಪನಿ ಹೇಳಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ