ಭಾರತೀಯ ಟೆಲಿಕಾಂ ಕಂಪನಿಗಳಲ್ಲಿ (Indian Telecom Company) ಜನಪ್ರಿಯತೆಯನ್ನು ಪಡೆದ ಒಂದು ಕಂಪನಿಯಿದ್ದರೆ ಅದು ಏರ್ಟೆಲ್. ಈ ಕಂಪನಿ ವರ್ಷಕ್ಕೆ ಹಲವಾರು ರೀಚಾರ್ಜ್ ಯೋಜನೆಗಳನ್ನು (Recharge Plans) ಪರಿಚಯಿಸುತ್ತದೆ. ಅದು ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ರೀಚಾರ್ಜ್ ಮಾಡಿಕೊಳ್ಳಬಹುದಾಗಿದೆ. ಏರ್ಟೆಲ್ ಟೆಲಿಕಾಂ ಕಂಪನಿಗಳಲ್ಲಿ ಅತೀ ಹೆಚ್ಚು ಬಳಕೆದಾರರನ್ನು ಹೊಂದಿದ್ದು ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಏರ್ಟೆಲ್ ಗ್ರಾಹಕರು ಕಂಪನಿ ಯಾವಾಗ ಹೊಸ ಕೊಡುಗೆಗಳನ್ನು ಬಿಡುಗಡೆ ಮಾಡುತ್ತದೆ ಎಂದು ಕಾಯುತ್ತಿರುತ್ತಾರೆ. ಇದೀಗ ಏರ್ಟೆಲ್ ಗ್ರಾಹಕರಿಗೆ ಗುಡ್ನ್ಯೂಸ್ ಅನ್ನು ನೀಡಿದೆ. ಆದರೆ ಇದು ದುಬಾರಿಯಾದರೂ ಉತ್ತಮ ಕೊಡುಗೆಗ:ನ್ನು ಇದರಿಂದ ಗ್ರಾಹಕರು ಪಡೆಯಬಹುದಾಗಿದೆ.
ಏರ್ಟೆಲ್ ಕಂಪನಿ ಇದೀಗ ತನ್ನ ಗ್ರಾಹಕರಿಗಾಗಿ ವರ್ಷಾಂತ್ಯದಲ್ಲಿ ಹೊಸ ರೀಚಾರ್ಜ್ ಪ್ಲಾನ್ ಅನ್ನು ಬಿಡುಗಡೆ ಮಾಡಿದೆ. ಈ ಮೂಲಕ ಗ್ರಾಹಕರು ಇನ್ನಷ್ಟು ಆಫರ್ಸ್ಗಳನ್ನು ಪಡೆಯಬಹುದು. ಹಾಗಿದ್ರೆ ಈ ವರ್ಷ ಬಿಡುಗಡೆಯಾದ ಏರ್ಟೆಲ್ ಅತ್ಯುತ್ತಮ ರೀಚಾರ್ಜ್ ಪ್ಲಾನ್ಸ್ ಯಾವುದೆಂಬುದನ್ನು ಈ ಲೇಖನದ ಮೂಲಕ ತಿಳಿಯಿರಿ.
ಏರ್ಟೆಲ್ನ 3359 ರೂಪಾಯಿ ರೀಚಾರ್ಜ್ ಪ್ಲಾನ್
ಏರ್ಟೆಲ್ ಕಂಪನಿಯ ಈ ಪ್ರೀಪೇಯ್ಡ್ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಇದು 365 ದಿನಗಳ ವ್ಯಾಲಿಡಿಟಿಯನ್ನುಹೊಂದಿರುತ್ತದೆ. ಈ ಯೋಜನೆಯನ್ನು ರೀಚಾರ್ಜ್ ಮಾಡಿಕೊಂಡರೆ ಗ್ರಾಹಕರು ಪ್ರತಿದಿನ 2.5 ಜಿಬಿ ಡೇಟಾ ಪ್ರಯೋಜನವನ್ನು ಪಡೆಯಬಹುದಾಗಿದೆ. ಈ ರೀಚಾರ್ಜ್ ಪ್ಲಾನ್ನಲ್ಲಿ ಏರ್ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನ್ಲಿಮಿಟೆಡ್ ಕಾಲ್ ಸೌಲಭ್ಯ. ಪ್ರತಿದಿನ 100 ಉಚಿತ ಎಸ್ಎಮ್ಎಸ್ ಮಾಡುವ ಪ್ರಯೋಜನ ಸಹ ದೊರೆಯುತ್ತದೆ.
ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ಪ್ರಮೋಷನ್ ಮಾಡುವವರೇ ಎಚ್ಚರ! ಸರ್ಕಾರದಿಂದ ಹೊಸ ನಿಯಮ ಜಾರಿ
ಇನ್ನು ಏರ್ಟೆಲ್ನ 3359 ರೂಪಾಯಿ ಯೋಜನೆಯಲ್ಲಿ ಹೆಚ್ಚುವರಿಯಾಗಿ ಒಂದು ವರ್ಷದ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಚಂದಾದಾರಿಕೆ, ಏರ್ಟೆಲ್ ಎಕ್ಸ್ಟ್ರೀಮ್ ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯವಿದೆ. ಇನ್ನು ಈ ಯೋಜನೆಯಲ್ಲಿ ಒಟ್ಟಾಗಿ ಗ್ರಾಹಕರು 912.5 ಜಿಬಿ ಡೇಟಾ ಪ್ರಯೋಜನ ದೊರೆಯಲಿದೆ.
ಏರ್ಟೆಲ್ನ 2999 ರೂಪಾಯಿ ಪ್ರಿಪೇಯ್ಡ್ ರೀಚಾರ್ಜ್ ಪ್ಲಾನ್
ಏರ್ಟೆಲ್ನ ಈ ಪ್ರೀಪೇಯ್ಡ್ ಪ್ಲಾನ್ ಕೂಡ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಇದು 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನುಹೊಂದಿರಲಿದೆ. ಇದರಲ್ಲಿ ಪ್ರತಿದಿನ 2 ಜಿಬಿ ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನ್ಲಿಮಿಟೆಡ್ ಕಾಲ್ ಮಾಡುವ ಅವಕಾಶ ಸಿಗಲಿದೆ. ಇನ್ನು ಈ ಯೋಜನೆ ಮೂಲಕ ಪ್ರತಿದಿನ 100 ಎಸ್ಎಮ್ಎಸ್ ಮಾಡಬಹುದಾಗಿದೆ. ಹೆಚ್ಚುವರಿ ಯಾಗಿ ಈ ಯೋಜನೆ ಮೂಲಕ ಏರ್ಟೆಲ್ ಎಕ್ಸ್ಟ್ರೀಮ್ ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಕೂಡ ಸಿಗುತ್ತದೆ.
ಏರ್ಟೆಲ್ನ 839 ರೂಪಾಯಿ ರೀಚಾರ್ಜ್ ಪ್ಲಾನ್
ಏರ್ಟೆಲ್ ಕಂಪನಿಯ 838ರೂಪಾಯಿ ಪ್ರೀಪೇಡ್ ಯೋಜನೆಯಲ್ಲಿ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಈ ಯೋಜನೆಯಲ್ಲಿ ಅನ್ಲಿಮಿಟೆಡ್ ಕಾಲ್ ಮಾಡುವಂತಹ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2ಜಿಬಿ ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಮಾಡುವಂತಹ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಚಂದಾದಾರಿಕೆ, ಏರ್ಟೆಲ್ ಎಕ್ಸ್ಟ್ರೀಮ್ ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಸಿಗಲಿದೆ.
ಏರ್ಟೆಲ್ 699 ರೂಪಾಯಿ ರೀಚಾರ್ಜ್ ಪ್ಲಾನ್
ಏರ್ಟೆಲ್ ಟೆಲಿಕಾಂನ ಜನಪ್ರಿಯ ಪ್ರೀಪೇಡ್ ಪ್ಲಾನ್ಗಳಲ್ಲಿ ಒಂದಾಗಿರುವ 699 ರೂಪಾಯಿ ಪ್ರೀಪೇಯ್ಡ್ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನ್ಲಿಮಿಟೆಡ್ ಕಾಲ್ ಮಾಡುವಂತಹ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3 ಜಿಬಿ ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಅಮೆಜಾನ್ ಪ್ರೈಮ್ ಚಂದಾದಾರಿಕೆ, ಏರ್ಟೆಲ್ ಎಕ್ಸ್ಟ್ರೀಮ್ ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯವಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ