ದೇಶದ ಉದ್ದಗಲ ಕ್ಯಾಬ್ ಸೇವೆಯನ್ನು ಒದಗಿಸುತ್ತಿರುವ ಓಲಾ ಸಂಸ್ಥೆ ಎಲೆಕ್ಟ್ರಿಕ್ ಸ್ಕೂಟರ್ ತಯಾರಿಕೆಯಲ್ಲಿ ತೊಡಗಿಸಿಕೊಂಡಿದೆ. ಮುಂದಿನ ಜನವರಿ ತಿಂಗಳಿನಲ್ಲಿ ಮೊದಲ ವಾಹನವನ್ನು ಮಾರುಕಟ್ಟೆಗೆ ತರಲು ಯೋಜನೆ ಹಾಕಿಕೊಂಡಿದೆ.
ಓಲಾ ಉತ್ಪಾದಿಸುತ್ತಿರುವ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ನೆದರ್ಲ್ಯಾಂಡ್ನಲ್ಲಿ ತಯಾರಿಸಲಾಗುತ್ತಿದೆ. ನಂತರದ ದಿನಗಳಲ್ಲಿ ಭಾರತ ಮತ್ತು ಯುರೋಪಿನಲ್ಲಿ ಮಾರಾಟ ಮಾಡಲು ಮುಂದಾಗಿದೆ. ಅಂದಹಾಗೆಯೇ ಓಲಾ ಉತ್ಪಾದಿಸುವ ಮತ್ತು ಪರಿಚಯಿಸುವ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಇದಾಗಿರಲಿದೆ.
ಓಲಾ ಪರಿಚಯಿಸಲಿರುವ ಇವಿ ಆರ್ಮ್ ಸ್ಕೂಟರ್ ಅನ್ನು ರೈಡ್ ಹೀಲಿಂಗ್ ಕಂಪನಿ ಉತ್ಪಾದಿಸುತ್ತಿದೆ. ಭಾರತ ಮತ್ತು ಯುರೋಪಿನ ಮೂಲೆ ಮೂಲೆಗಳಗೆ ಜನವರಿ ತಿಂಗಳಿನಲ್ಲಿ ಪರಿಚಯಿಸಲಿದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಹರಿದಾಡುತ್ತಿರುವ ಮಾಹಿತಿ ಪ್ರಕಾರ ಓಲಾ ಮಿಲಿಯನ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಉತ್ಪಾದಿಸಿ ಮಾರಾಟ ಮಾಡುವ ಗುರಿಯನ್ನು ಹೊಂದಿದೆ ಎನ್ನಲಾಗುತ್ತಿದೆ.
ಇನ್ನು ನೂತನ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯ ಬಗ್ಗೆ ಮತ್ತು ಅದರ ವಿಶೇಷತೆಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಆದರೆ ಪೆಟ್ರೋಲ್ ಸ್ಕೂಟರ್ಗಳ ಎದುರು ಈ ಎಲೆಕ್ಟ್ರಿಕ್ ಸ್ಕೂಟರ್ ಸ್ಪರ್ಧೆಯನ್ನು ಒಡ್ಡಲಿದೆ ಎಂದು ಹೇಳಲಾಗುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ