ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ (Mobile Market) ಹಲವಾರು ಕಂಪನಿಗಳು ತನ್ನದೇ ಶೈಲಿಯಲ್ಲಿ ಸ್ಥಾನವನ್ನು ಗಳಿಸಿಕೊಂಡಿದೆ. ರೆಡ್ಮಿ (Redmi) ಆಗಿರಬಹುದು. ಒನ್ಪ್ಲಸ್ (OnePlus), ಸ್ಯಾಮ್ಸಂಗ್ (Samsung), ಒಪ್ಪೋ (Oppo) ಬಹಳಷ್ಟು ಪ್ರಸಿದ್ದೀ ಪಡೆದ ಕಂಪನಿಗಳಾಗಿವೆ. ಇತ್ತೀಚಗೆ ಒಪ್ಪೋ ತನ್ನ ಬ್ರಾಂಡ್ನಲ್ಲಿ ವಿಶೇಷ ಫೀಚರ್ಸ್ ಅನ್ನು ಒಳಗೊಂಡ ಮೊಬೈಲ್ ಅನ್ನು ಬಿಡುಗಡೆ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಮತ್ತೆ ಸದ್ದು ಮಾಡಲು ಒಪ್ಪೋ ಕಂಪನಿ ರೆಡಿಯಾಗಿದೆ. ಈ ಮೂಲಕಒಪ್ಪೋ ಎ78 (Oppo A78 5G) ಎಂಬ 5ಜಿ ಸ್ಮಾರ್ಟ್ಫೋನ್ ಅನ್ನು ಕಂಪನಿ ಬಿಡುಗಡೆ ಮಾಡಲು ಸಜ್ಜಾಗಿದೆ. ಇದು ಭಾರತದ ಮಾರುಕಟ್ಟೆಗೆ ಕೆಲವೇ ದಿನಗಳಲ್ಲಿ ಕಾಲಿಡಲಿದ್ದುಒಪ್ಪೋ ಸ್ಮಾರ್ಟ್ಫೋನ್ ಪ್ರಿಯರಿಗೆ ಇದೊಂದು ಸಂಭ್ರಮದ ಸುದ್ದಿಯಾಗಿದೆ.
ಒಪ್ಪೋ ಕಂಪನಿಯಿಂದ ಬಿಡುಗಡೆಯ ಸುದ್ದಿಯಲ್ಲಿರುವ ಸ್ಮಾರ್ಟ್ಫೋನ್ ಎಂದರೆ ಅದು ಒಪ್ಪೋ ಎ78 5ಜಿ ಸ್ಮಾರ್ಟ್ಫೋನ್. ಈ ಸ್ಮಾರ್ಟ್ಫೋನ್ ದೇಶದ ಮಾರುಕಟ್ಟೆಗೆ ಇದೇ ಜನವರಿ 14 ರಂದು ಬಿಡುಗಡೆಯಾಗಲಿದೆ ಎಂದು ಕಂಪನಿ ಹೇಳಿದೆ. ಜೊತೆಗೆ ಇದರ ಫೀಚರ್ಸ್, ಬೆಲೆ ಬಗ್ಗೆಯೂ ಮಾಹಿತಿ ನೀಡಿದ್ದು, ಇದರ ಕಂಪ್ಲೀಟ್ ಮಾಹಿತಿ ಇಲ್ಲಿದೆ.
ಕ್ಯಾಮೆರಾ ಫೀಚರ್ಸ್
ಒಪ್ಪೋ ಎ78 5ಜಿ ಸ್ಮಾರ್ಟ್ಫೋನ್ ವಿಶೇಷವಾಗಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ ಎಂದು ಕಂಪನಿ ತಿಳಿಸಿದೆ. ಇನ್ನು ಈ ಸ್ಮಾರ್ಟ್ಫೋನ್ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿರುತ್ತದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ ಲೆನ್ಸ್ ಹೊಂದಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ: ಈ ರೀಚಾರ್ಜ್ ಪ್ಲ್ಯಾನ್ ನೋಡಿದ್ರೆ ಗ್ಯಾರಂಟಿ ಇವತ್ತೇ ಪರ್ಚೇಸ್ ಮಾಡ್ತೀರಾ! ಹೇಗಿದೆ ಆಫರ್ಸ್?
ಡಿಸ್ಪ್ಲೇ ವಿನ್ಯಾಸ ಹೇಗಿದೆ?
ಒಪ್ಪೋ ಎ78 5ಜಿ ಸ್ಮಾರ್ಟ್ಫೋನ್ 6.6 ಇಂಚಿನ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 1200 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ. ಇನ್ನು ಡಿಸ್ಪ್ಲೇ 269 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಜೊತೆಗೆ 90 Hz ರಿಫ್ರೆಶ್ ರೇಟ್ನಲ್ಲಿ ಈ ಸ್ಮಾರ್ಟ್ಫೋನ್ನ ಡಿಸ್ಪ್ಲೇ ಕಾರ್ಯನಿರ್ವಹಿಸುತ್ತದೆ ಎಂದು ಹೇಳಲಾಗಿದೆ.
ಬ್ಯಾಟರಿ ಫೀಚರ್ಸ್
ಒಪ್ಪೋ ಎ78 5ಜಿ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಇನ್ನು ಇ ಸ್ಮಾರ್ಟ್ಫೋನ್ನ ವೇಗದ ಚಾರ್ಜಿಂಗ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿಯನ್ನು ಕಂಪನಿ ಬಹಿರಂಗಪಡಿಸಿಲ್ಲ.
ಕನೆಕ್ಟಿವಿಟಿ ಫೀಚರ್ಸ್
ಇನ್ನು ಒಪ್ಪೋ ಎ78 5ಜಿ ಸ್ಮಾರ್ಟ್ಫೋನ್ನ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ಹಾಟ್ಸ್ಪಾಟ್, ವೈಫೈ ಸೌಲಭ್ಯಗಳನ್ನು ಹೊಂದಿರುತ್ತದೆ ಎಂದು ತಿಳಿಸಲಾಗಿದೆ.
ಪ್ರೊಸೆಸರ್ ಸಾಮರ್ಥ್ಯ
ಒಪ್ಪೋ ಎ78 5ಜಿ ಸ್ಮಾರ್ಟ್ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರಬಹುದೆಂದು ಅಂದಾಜಿಸಲಾಗಿದೆ. ಈ ಸ್ಮಾರ್ಟ್ಫೋನ್ ಆಂಡ್ರಾಯ್ಡ್ 13-ಆಧಾರಿತ ಕಲರ್ಓಎಸ್ 13.0 ನಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ. ಹಾಗೆಯೇ 8 ಜಿಬಿ ರ್ಯಾಮ್ ಮತ್ತು 128 ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು ಅನ್ನು ಹೊಂದಿರಲಿದೆ. ಇನ್ನು ಈ ಸ್ಮಾರ್ಟ್ಫೋನ್ನಲ್ಲಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಕಂಪನಿ ನೀಡಲಿದೆ.
ಬೆಲೆ ಮತ್ತು ಲಭ್ಯತೆ
ಒಪ್ಪೋ ಎ78 5ಜಿ ಸ್ಮಾರ್ಟ್ಫೋನ್ನ ಬೇಸ್ ಮಾಡೆಲ್ ಬೆಲೆ ಭಾರತದಲ್ಲಿ 18,500 ರೂಪಾಯಿಯಿಂದ 19,000 ರೂಪಾಯಿಗಳ ನಡುವೆ ಇರಲಿದೆ ಎಂದು ಹೇಳಲಾಗಿದೆ. ಆದರೆ ಈ ಸ್ಮಾರ್ಟ್ಫೋನ್ನ ನಿಗದಿತ ಬೆಲೆಯನ್ನು ಇನ್ನೂ ಸರಿಯಾಗಿ ನಿರ್ಧಾರವಾಗಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ