ಒಪ್ಪೋ ಕಂಪೆನಿ (Oppo Company) ಇತ್ತೀಚೆಗೆ ಮೊಬೈಲ್ ಮಾರುಕಟ್ಟೆಗೆ ಒಪ್ಪೋ ಎ78 5ಜಿ (Oppo A78 5G) ಎಂಬ ಸ್ಮಾರ್ಟ್ಫೋನ್ ಅನ್ನು ಪರಿಚಯಿಸಿದೆ. ಇದೀಗ ಈ ಸ್ಮಾರ್ಟ್ಫೋನ್ ಅನ್ನು ಭಾರತದ ಮಾರುಕಟ್ಟೆಯಲ್ಲೂ ಲಾಂಚ್ ಮಾಡಲು ರೆಡಿಯಾಗಿದೆ. ಒಪ್ಪೋ ಕಂಪೆನಿ ಈ ಹಿಂದೆಯೂ ಹಲವಾರು ಸ್ಮಾರ್ಟ್ಫೋನ್ಗಳನ್ನು (Smartphones) ಬಿಡುಗಡೆ ಮಾಡುವ ಮೂಲಕ ಭಾರತದಲ್ಲಿ ಜನಪ್ರಿಯತೆಯನ್ನು ಪಡೆದಿದೆ. ಕೆಲವೊಂದು ಗ್ರಾಹಕರು ಈ ಕಂಪೆನಿಯ ಮೊಬೈಲ್ ಬಿಡುಗಡೆಗಾಗಿ ಕಾಯುತ್ತಿರುತ್ತಾರೆ ಎಂದರೂ ತಪ್ಪಾಗಲಾರದು.ಸದ್ಯ ಲಾಂಚ್ ಆಗುತ್ತಿರುವ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ (Dual Camera Setup) ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ 5G ಸ್ಮಾರ್ಟ್ಫೋನ್ ಆಗಿದ್ದು ಡ್ಯುಯಲ್ ಮೋಡ್ 5ಜಿ ಗೆ ಬೆಂಬಲವನ್ನು ನೀಡಲಿದೆ.
ಒಪ್ಪೋ ಕಂಪೆನಿ ಭಾರತದ ಮಾರುಕಟ್ಟೆಗೆ ಹೊಸ ಒಪ್ಪೋ ಎ78 5ಜಿ ಎಂಬ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಸ್ಮಾರ್ಟ್ಫೋನ್ ವಿಶೇಷ ಫೀಚರ್ಸ್ಗಳನ್ನು ಹೊಂದಿದ್ದು, ಭಾರತದಲ್ಲಿ ಈ ವರ್ಷದಲ್ಲಿ ಬಿಡುಗಡೆಯಾಗುವ ಒಪ್ಪೋ ಕಂಪೆನಿಯ ಮೊದಲ ಪೋನ್ ಇದಾಗಿದೆ.
ಒಪ್ಪೋ ಎ78 5ಜಿ ಸ್ಮಾರ್ಟ್ಫೋನ್ ಫೀಚರ್ಸ್
ಒಪ್ಪೋ ಎ78 5ಜಿ ಸ್ಮಾರ್ಟ್ಫೋನ್ ಮುಖ್ಯವಾಗಿ 6.56 ಇಂಚಿನ ಹೆಚ್ಡಿ+ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 720 x 1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 600 ನಿಟ್ಸ್ನಱ್ಟು ಬ್ರೈಟ್ನೆಸ್ ಸಾಮರ್ಥ್ಯವನ್ನು ಹೊಂದಿರುತ್ತದೆ.
ಕ್ಯಾಮೆರಾ ಫೀಚರ್ಸ್
ಒಪ್ಪೋ ಎ78 5ಜಿ ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರುತ್ತದೆ ಎಂದು ಕಂಪೆನಿ ತಿಳಿಸಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋಟ್ರೇಟ್ ಸೆನ್ಸಾರ್ ಜೊತೆಗೆ ಅನ್ನು ಒಳಗೊಂಡಿದೆ.
ಇನ್ನು ಸೆಲ್ಫಿಗಾಗಿ ಮತ್ತು ವಿಡಿಯೋ ಕಾಲ್ಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಸ್ಮಾರ್ಟ್ಫೋನ್ನಲ್ಲಿರುವ ಕ್ಯಾಮೆರಾಗಳು 30fps ನಲ್ಲಿ ಫುಲ್ ಹೆಚ್ಡಿ ವಿಡಿಯೋಗಳನ್ನು ರೆಕಾರ್ಡ್ ಮಾಡುವಂತಹ ಅವಕಾಶವನ್ನು ನೀಡುತ್ತದೆ.
ಪ್ರೊಸೆಸರ್ ಸಾಮರ್ಥ್ಯ
ಒಪ್ಪೋ ಎ78 5ಜಿ ಸ್ಮಾರ್ಟ್ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700 ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರುತ್ತದೆ. ಇನ್ನು ಈ ಸ್ಮಾರ್ಟ್ಫೋನ್ ಆಂಡ್ರಾಯ್ಡ್ 12 ಆಧಾರಿತ ಕಲರ್ ಓಎಸ್ 12.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8ಜಿಬಿ ರ್ಯಾಮ್ ಮತ್ತು 256ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರುತ್ತದೆ. ಇದರಲ್ಲಿ ಆನ್ಬೋರ್ಡ್ ಸ್ಟೋರೇಜ್ ಬಳಸಿಕೊಂಡು 5ಜಿಬಿ ವರೆಗೆ ರ್ಯಾಮ್ ಅನ್ನು ವಿಸ್ತರಿಸುವ ಅವಕಾಶವೂ ಇದೆ.
ಬ್ಯಾಟರಿ ಫೀಚರ್ಸ್
ಒಪ್ಪೋ ಎ78 5ಜಿ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಒಳಗೊಂಡಿದೆ. ಇದು 33W ಸೂಪರ್ ವೂಕ್ ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ 8.5 ಗಂಟೆಗಳ ಗೇಮಿಂಗ್ ಸಮಯವನ್ನು ಒದಗಿಸುತ್ತದೆ ಎಂದು ಹೇಳಲಾಗಿದೆ.
ಇತರೆ ಫೀಚರ್ಸ್
ಇನ್ನು ಈ ಸ್ಮಾರ್ಟ್ಫೋನ್ನ ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 5 ಮತ್ತು ಬ್ಲೂಟೂತ್ ವಿ5.3 ವೈರ್ಲೆಸ್ ಸಂಪರ್ಕವನ್ನು ನೀಡುತ್ತದೆ. ಅಲ್ಲದೆ ಯುಎಸ್ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಹೆಡ್ಫೋನ್ ಜ್ಯಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಬೆಂಬಲಿಸಲಿದೆ.
ಇದನ್ನೂ ಓದಿ: ಅಮೆಜಾನ್ ರಿಪಬ್ಲಿಕ್ ಡೇ ಸೇಲ್; ಈ 5 ಟೆಕ್ ಡಿವೈಸ್ಗಳ ಮೇಲೆ ವಿಶೇಷ ರಿಯಾಯಿತಿ!
ಬೆಲೆ ಮತ್ತು ಲಭ್ಯತೆ
ಒಪ್ಪೋ ಎ78 5ಜಿ ಸ್ಮಾರ್ಟ್ಫೋನ್ 8ಜಿಬಿ ರ್ಯಾಮ್ ಮತ್ತು 128ಜಿಬಿ ಸ್ಟೋರೇಜ್ ಹೊಂದಿರುವ ಸ್ಮಾರ್ಟ್ಫೋನ್ನ ಬೆಲೆಯು 18,999 ರೂಪಾಯಿ ಆಗಿದೆ. ಇನ್ನು ಈ ಸ್ಮಾರ್ಟ್ಫೋನ್ ಅಮೆಜಾನ್ ಹಾಗೂ ಅಧಿಕೃತ ಒಪ್ಪೋ ಸ್ಟೋರ್ಗಳಲ್ಲಿ ಪ್ರೀ ಬುಕಿಂಗ್ಗೆ ಲಭ್ಯ ಇದೆ. ಇದೇ ಜ.18 ರಿಂದ ಈ ಸ್ಮಾರ್ಟ್ಫೋನ್ನ ಮಾರಾಟ ಪ್ರಾರಂಭಿಸಲಿದೆ. ಈ ಫೋನ್ ಬ್ಲ್ಯಾಕ್ ಮತ್ತು ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ