ಭಾರತದ ಮಾರುಕಟ್ಟೆಯಲ್ಲಿ ಒಪ್ಪೋ ಕಂಪೆನಿ (Oppo Company) ಹೊಸ ಮಾರುಕಟ್ಟೆಯ ಡಿಮ್ಯಾಂಡ್ ಅನ್ನೇ ಸೃಷ್ಟಿ ಮಾಡಿದೆ. ಒಪ್ಪೋ ಸ್ಮಾರ್ಟ್ಫೋನ್ಗಳಿಗೆ (Oppo Smartphones) ಈಗಲೂ ಮಾರುಕಟ್ಟೆಯಲ್ಲಿ ಎಲ್ಲಿಲ್ಲದ ಬೇಡಿಕೆ. ಈ ಕಂಪೆನಿ ಇದುವರೆಗೆ ಸಾಕಷ್ಟು ಮೊಬೈಲ್ಗಳನ್ನು ಬಿಡುಗಡೆ ಮಾಡಿದೆ. ಪರಿಚಯಿಸಿದ ಒಂದೊಂದು ಸ್ಮಾರ್ಟ್ಫೋನ್ಗಳು ಕೂಡ ವಿಭಿನ್ನ ರೀತಿಯ ವಿನ್ಯಾಸ ಹಾಗೂ ಫೀಚರ್ಸ್ಗಳನ್ನು ಒಳಗೊಂಡಿದೆ. ಇದೀಗ ಒಪ್ಪೋ ಕಂಪೆನಿಯಿಂದ ಒಪ್ಪೋ ರೆನೋ 8ಟಿ (Oppo Reno 8T Smartphone) ಎಂಬ ಸ್ಮಾರ್ಟ್ಫೋನ್ ಅನ್ನು ಪರಿಚಯಿಸಲು (Launch) ಸಜ್ಜಾಗಿದೆ. ವಿಶೇಷವೆಂದರೆ ಈ ಸ್ಮಾರ್ಟ್ಫೋನ್ ಇನ್ನೂ ಮಾರುಕಟ್ಟೆಗೆ ಬಿಡುಗಡೆಯಾಗಿಲ್ಲ, ಆದರೆ ಈಗಲೇ ಹೊಸ ಸಂಚಲನವನ್ನು ಸೃಷ್ಟಿ ಮಾಡುತ್ತಿದೆ. ಇದು 4ಜಿ ಮತ್ತು 5ಜಿ ಎರಡೂ ಆಯ್ಕೆಗಳನ್ನು ಹೊಂದಿಕೊಂಡು ಮಾರುಕಟ್ಟೆಗೆ ಪ್ರವೇಶ ಮಾಡಲಿದೆ.
ಒಪ್ಪೋ ಕಂಪೆನಿಯಿಂದ ಒಪ್ಪೋ ರೆನೋ 8ಟಿ ಎಂಬ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಆದರೆ ಬಿಡುಗಡೆಗೆ ಮೊದಲೇ ಈ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಭಾರೀ ನಿರೀಕ್ಷೆಯನ್ನು ಹುಟ್ಟಿಸಿದೆ. ಹಾಗಿದ್ರೆ ಈ ಸ್ಮಾರ್ಟ್ಫೋನ್ ಪ್ರೊಸೆಸರ್ ಸಾಮರ್ಥ್ಯ, ವಿನ್ಯಾಸ ಹೇಗಿದೆ ಎಂಬುದನ್ನು ಈ ಲೇಖನದಲ್ಲಿ ತಿಳಿಯಿರಿ.
ಡಿಸ್ಪ್ಲೇ ವಿನ್ಯಾಸ ಹೇಗಿರಲಿದೆ?
ಒಪ್ಪೋ ರೆನೋ 8ಟಿ ಸ್ಮಾರ್ಟ್ಫೋನ್ 6.67 ಇಂಚಿನ ಓಎಲ್ಇಡಿ ಡಿಸ್ಪ್ಲೇಯನ್ನು ಹೊಂದಿರುವ ನಿರೀಕ್ಷೆಯಿದೆ. ಈ ಡಿಸ್ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 10 ಬಿಟ್ ಕಲರ್ ಡೆಪ್ತ್ ಅನ್ನು ಹೊಂದಿರಬಹುದು ಎಂದು ವರದಿಯಾಗಿದೆ. ಇನ್ನು ಡಿಸ್ಪ್ಲೇ 89.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿರಬಹುದು. ಜೊತೆಗೆ ಈ ಡಿಸ್ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.
ಕ್ಯಾಮೆರಾ ಫೀಚರ್ಸ್
ಒಪ್ಪೋ ರೆನೋ 8ಟಿ ಸ್ಮಾರ್ಟ್ಫೋನ್ ಮುಖ್ಯವಾಗಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ ಎಂಬ ನಿರೀಕ್ಷೆಯಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿರಬಹುದು. ಇನ್ನು ಈ ಸ್ಮಾರ್ಟ್ಫೋನ್ನ ಸೆಲ್ಫಿ ಕ್ಯಾಮೆರಾದ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.
ಪ್ರೊಸೆಸರ್ ಸಾಮರ್ಥ್ಯದ ಬಗ್ಗೆ ನಿರೀಕ್ಷೆ
ಒಪ್ಪೋ ರೆನೋ 8ಟಿ ಸ್ಮಾರ್ಟ್ಫೋನ್ ಮೀಡಿಯಾಟೆಕ್ ಹಿಲಿಯೋ ಜಿ99 ಎಸ್ಓಸಿ ಪ್ರೊಸೆಸರ್ ವೇಗವನ್ನು ಹೊಂದಿರಬಹುದು. ಇನ್ನು ಈ ಸ್ಮಾರ್ಟ್ಫೋನ್ ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 ಜಿಬಿ ರ್ಯಾಮ್ ಮತ್ತು 128ಜಿಬಿ , 8 ಜಿಬಿ ರ್ಯಾಮ್ ಮತ್ತು 256 ಜಿಬಿ ಹಾಗೂ 12 ಜಿಬಿ ರ್ಯಾಮ್ ಮತ್ತು 256 ಜಿಬಿ ಇಂಟರ್ನಲ್ ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಬ್ಯಾಟರಿ ಫೀಚರ್ಸ್
ಒಪ್ಪೋ ರೆನೋ 8ಟಿ ಸ್ಮಾರ್ಟ್ಫೋನ್ 4800mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಒಳಗೊಂಡಿದೆ. ಈ ಬ್ಯಾಟರಿಯು 67W ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಹೊಂದಿರುತ್ತದೆ ಎಂದು ಹೇಳಲಾಗಿದೆ.
ಇತರೆ ಫೀಚರ್ಸ್
ಇನ್ನು ಈ ಸ್ಮಾರ್ಟ್ಫೋನ್ನ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್ಬಿ ಟೈಪ್ ಸಿ ಪೋರ್ಟ್, ಹೆಡ್ಫೋನ್ ಜ್ಯಾಕ್ ಅನ್ನು ನಿರೀಕ್ಷಿಸಬಹುದು.
ಬೆಲೆ ಮತ್ತು ಲಭ್ಯತೆಯ ಬಗ್ಗೆ ನಿರೀಕ್ಷೆ
ಒಪ್ಪೋ ರೆನೋ 8ಟಿ ಸೀರಿಸ್ನ ಸ್ಮಾರ್ಟ್ಫೋನ್ನ ಆರಂಭಿಕ ಬೆಲೆ 27,000 ರಿಂದ 29,000 ರೂಪಾಯಿ ಇರಬಹುದು ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್ಫೋನ್ ಮಿಡ್ನೈಟ್ ಬ್ಲಾಕ್ ಮತ್ತು ಸನ್ಸೆಟ್ ಆರೆಂಜ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ.
ಇದನ್ನೂ ಓದಿ: YONO ಆ್ಯಪ್ನ ಪಾಸ್ವರ್ಡ್ ಮರೆತೋಗಿದ್ಯಾ? ಹಾಗಿದ್ರೆ ಈ ಟ್ರಿಕ್ಸ್ ಮೂಲಕ ರೀಸೆಟ್ ಮಾಡ್ಕೊಳ್ಳಿ
ಇದಲ್ಲದೆ ಈ ಸ್ಮಾರ್ಟ್ಫೋನ್ನ 5ಜಿ ಮಾದರಿಯು ಮಿಡ್ನೈಟ್ ಬ್ಲ್ಯಾಕ್ ಕಲರ್ ಆಯ್ಕೆಗಳ ಜೊತೆಗೆ ಒಪ್ಪೋ ಗ್ಲೋ ವಿನ್ಯಾಸವನ್ನು ಹೊಂದಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್ಫೋನ್ನ ಬಿಡುಗಡೆಯ ದಿನಾಂಕದ ಬಗ್ಗೆ ಯಾವುದೇ ಮಾಹಿತಿಯನ್ನು ಕಂಪೆನಿ ತಿಳಿಸಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ