ಸ್ಮಾರ್ಟ್‌ಫೋನ್ (Smartphone) ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಪ್ರತಿಯೊಬ್ಬರಿಗೂ ಇತ್ತೀಚಿನ ಕಾಲಮಾನದಲ್ಲಿ ಮೊಬೈಲ್ಗಳು ಅಗತ್ಯ ಸಾಧನವಾಗಿಬಿಟ್ಟಿದೆ. ಇನ್ನು ಕಂಪೆನಿಗಳು ಸಹ ಮಾರುಕಟ್ಟೆಗೆ ಹೊಸ ಹೊಸ ಮಾದರಿಯಲ್ಲಿ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತಿರುತ್ತದೆ. ಮಾರುಕಟ್ಟೆಯಲ್ಲಿ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಕಂಪೆನಿಗಳು ಹಲವಾರು ಇವೆ. ಅವುಗಳಲ್ಲಿ ಪೋಕೋ ಕಂಪೆನಿ (Poco Company) ಸಹ ಒಂದು. ಈ ಕಂಪೆನಿ ತನ್ನ ಬ್ರಾಂಡ್ನಲ್ಲಿ ಇದುವರೆಗೆ ಹಲವಾರು ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿದೆ. ಪೋಕೋ ಕಂಪೆನಿ ಬಜೆಟ್ ಬೆಲೆಯ ಮೊಬೈಲ್ಗಳನ್ನು ಪರಿಚಯಿಸುವಲ್ಲಿ ಭಾರೀ ಜನಪ್ರಿಯತೆಯನ್ನು ಪಡೆದಿದೆ. ಇದೀಗ ಈ ಕಂಪೆನಿಯಿಂದ ಹೊಸ ಸ್ಮಾರ್ಟ್‌ಫೋನ್ ಇಂದು ಅಂದರೆ ಫೆಬ್ರವರಿ 21 ರಿಂದ ಲಾಂಚ್ (Poco C55 Launch) ಆಗಲಿದ್ದು, ಮಾರುಕಟ್ಟೆಯಲ್ಲಿ ಬೇಡಿಕೆಯ ಸ್ಮಾರ್ಟ್‌ಫೋನ್ ಆಗಲಿದೆ ಎಂದು ಕಂಪೆನಿ ಹೇಳಿದೆ.
ಪೋಕೋ ಕಂಪೆನಿಯಿಂದ ಪೋಕೋ ಸಿ55 ಸ್ಮಾರ್ಟ್‌ಫೋನ್ ಇದೇ ಫೆಬ್ರವರಿ 21 ರಂದು ಫ್ಲಿಪ್ಕಾರ್ಟ್ ಮೂಲಕ ಫಸ್ಟ್ ಸೇಲ್ ಆರಂಭಿಸಲಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇನ್ನೂ ಹಲವಾರು ಫೀಚರ್ಸ್ಗಳನ್ನು ಇದು ಹೊಂದಿದೆ.
ಪೋಕೋ ಸಿ55 ಡಿಸ್‌ಪ್ಲೇ ವಿನ್ಯಾಸ
ಪೋಕೋ ಸಿ55 ಸ್ಮಾರ್ಟ್‌ಫೋನ್ 6.71 ಇಂಚಿನ ಹೆಚ್ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720 x 1650 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 20:6:9 ರಚನೆಯ ಅನುಪಾತವನ್ನು ಹೊಂದಿದ್ದು, 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ: ಇನ್ಮುಂದೆ ವಾಟ್ಸಾಪ್ನಲ್ಲೇ ಮೆಟ್ರೋ ಡಿಜಿಟಲ್ ಸೇವೆ! ಇಲ್ಲಿದೆ ಸಂಪೂರ್ಣ ಮಾಹಿತಿ
ಕ್ಯಾಮೆರಾ ಸೆಟಪ್
ಪೋಕೋ ಸಿ55 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. iಇನ್ನು ಸೆಲ್ಫಿಗಾಗಿ ಮತ್ತು ವಿಡಿಯೋ ಕಾಲ್ಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಪೋಕೋ ಸಿ55 ಪ್ರೊಸೆಸರ್ ಸಾಮರ್ಥ್ಯ
ಪೋಕೋ ಸಿ55 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ ಜಿ85 ಎಸ್ಓಸಿ ಪ್ರೊಸೆಸರ್ ವೇಗವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4ಜಿಬಿ ರ್‍ಯಾಮ್ ಮತ್ತು 64ಜಿಬಿ, 4ಜಿಬಿ ರ್‍ಯಾಮ್ ಮತ್ತು 128ಜಿಬಿ ಹಾಗೂ 6ಜಿಬಿ ರ್‍ಯಾಮ್ ಮತ್ತು 128ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಗಳಲ್ಲಿ ಬರುವ ನಿರೀಕ್ಷೆಯಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512ಜಿಬಿವರೆಗೆ ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಬ್ಯಾಟರಿ ಬ್ಯಾಕಪ್
ಪೋಕೋ ಸಿ55 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಹೊಂದಿರಲಿದೆ. ಈ ಬ್ಯಾಟರಿಯು 10W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.
ಇತರೆ ಫೀಚರ್ಸ್
ಇನ್ನು ಈ ಸ್ಮಾರ್ಟ್ಫೋನ್ನ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ FM ರೇಡಿಯೋ, 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಪ್ಪು, ನೀಲಿ, ಪುದೀನ ಮತ್ತು ನೇರಳೆ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಇದರ ಬೆಲೆ ಎಷ್ಟಿರಲಿದೆ ಅನ್ನೊದು ಇನ್ನು ಬಹಿರಂಗವಾಗಿಲ್ಲ.
ಬೆಲೆ ಮತ್ತು ಲಭ್ಯತೆ
ಪೋಕೋ ಕಂಪೆನಿ ಬಿಡುಗಡೆ ಮಾಡುತ್ತಿರುವ ಪೋಕೋ ಸಿ55 ಸ್ಮಾರ್ಟ್‌ಫೋನ್ ಫೆಬ್ರವರಿ 21 ರಂದು ಫ್ಲಿಪ್ಕಾರ್ಟ್ನಲ್ಲಿ ಮಾರಾಟ ಪ್ರಾರಂಭಿಸುತ್ತದೆ. ಆದರೆ ಈ ಸ್ಮಾರ್ಟ್ಫೋನ್ನ ಬೆಲೆಯ ಬಗ್ಗೆ ಯಾವುದೇ ಮಾಹಿತಿಯನ್ನು ಬಹಿರಂಗ ಪಡಿಸಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ