ದಿನ ಹೋದಂತೆ ಟೆಕ್ ಕಂಪೆನಿಗಳು (Tech Companies) ಬಹಳಷ್ಟು ಅಭಿವೃದ್ಧಿಯತ್ತ ಸಾಗುತ್ತಿದೆ. ಇದಕ್ಕೆ ಕಾರಣಗಳು ಟೆಕ್ನಾಲಜಿಯಲ್ಲಾಗುತ್ತಿರುವ ಅಪ್ಡೇಟ್ಗಳು. ಇದರಲ್ಲೂ ಸ್ಮಾರ್ಟ್‌ಫೋನ್ ಕಂಪೆನಿಗಳಂತೂ ಭಾರೀ ಮುಂಚೂಣಿಯಲ್ಲಿದೆ. ಮೊಬೈಲ್ ಕಂಪೆನಿಗಳು ಇತ್ತೀಚೆಗೆ ಹೊಸ ಹೊಸ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದೆ. ಅದರಲ್ಲೂ ಈಗ ತಿಂಗಳಿಗೆ 4 ರಿಂದ 5 ರಂತೆ ಸ್ಮಾರ್ಟ್ಫೋನ್ಗಳು ಬಿಡುಗಡೆಯಾಗುತ್ತಿದೆ. ಇದೀಗ ಜನಪ್ರಿಯ ಸ್ಮಾರ್ಟ್‌ಫೋನ್ ಕಂಪೆನಿಯಾಗಿರುವ ಪೋಕೋ ಕಂಪೆನಿ (Poco Company) ತನ್ನ ಬ್ರಾಂಡ್ನ ಅಡಿಯಲ್ಲಿ ಭಾರತದಲ್ಲಿ ಕಳೆದ ವಾರವಷ್ಟೇ ಪೋಕೋ ಎಕ್ಸ್5 ಪ್ರೋ (Poco X5 Pro) ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿತ್ತು. ಆದರೆ ಮಾರಾಟ ಪ್ರಕ್ರಿಯೆ ಆರಂಭವಾಗಿರಲಿಲ್ಲ. ಪೋಕೋ ಕಂಪೆನಿ ಸದ್ಯ ಇದರ ಫಸ್ಟ್ ಸೇಲ್ (Flipkart First Sale) ಅನ್ನು ಇಂದಿನಿಂದ ಅಂದರೆ ಫೆಬ್ರವರಿ 13 ರಿಂದ ಪ್ರಾರಂಭಿಸಿದೆ.
ಪೋಕೋ ಕಂಪೆಮಿ ತನ್ನ ಬ್ರಾಂಡ್ನ ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್ಫೋನ್ನ ಫಸ್ಟ್ ಸೇಲ್ ಆರಂಭಿಸಿದ್ದು, ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ಲಭ್ಯವಿದೆ. ಇನ್ನು ಫಸ್ಟ್ ಸೇಲ್ನಲ್ಲಿ ಈ ಹೊಸ ಸ್ಮಾರ್ಟ್‌ಫೋನ್ ಖರೀದಿ ಮಾಡುವವರಿಗೆ ಫ್ಲಿಪ್‌ಕಾರ್ಟ್ ಆಫರ್ಗಳನ್ನು ಸಹ ನೀಡುತ್ತಿದೆ.
ಫಸ್ಟ್ ಸೇಲ್ ಪ್ರಯುಕ್ತ ಆಫರ್ಸ್ ಏನೆಲ್ಲಾ ಇದೆ?
ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್‌ಫೋನ್ ಫಸ್ಟ್ ಸೇಲ್ ಇಂದು ಅಂದರೆ ಫೆ.13 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ನಲ್ಲಿ ಪ್ರಾರಂಭವಾಗುತ್ತದೆ. ಇನ್ನು ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್‌ಫೋನ್ 6ಜಿಬಿ ರ್‍ಯಾಮ್ ಮತ್ತು 128ಜಿಬಿ ಸ್ಟೋರೇಜ್ ಹೊಂದಿದ ಸ್ಮಾರ್ಟ್‌ಫೋನ್ 22,999 ರೂಪಾಯಿಗೆ ಲಭ್ಯವಿದೆ ಹಾಗೂ 8ಜಿಬಿ ರ್‍ಯಾಮ್ ಮತ್ತು 256ಜಿಬಿ ಸ್ಟೋರೇಜ್ ಹೊಂದಿದ ಸ್ಮಾರ್ಟ್‌ಫೋನ್ 24,999 ರೂಪಾಯಿ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.
ಇದನ್ನೂ ಓದಿ: ಏರ್ಟೆಲ್ ಗ್ರಾಹಕರೇ ಇಲ್ಲಿದೆ ನೋಡಿ ಬೆಸ್ಟ್ ರೀಚಾರ್ಜ್ ಪ್ಲ್ಯಾನ್ಗಳು!
ಇನ್ನು ಫಸ್ಟ್ ಸೇಲ್ ಪ್ರಯುಕ್ತ ಗ್ರಾಹಕರು ಐಸಿಐಸಿಐ ಮತ್ತು ಹೆಚ್ಡಿಎಫ್ಸಿ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಮೂಲಕ ಖರೀದಿಸಿದರೆ 2,000 ರೂಪಾಯಿವರೆಗಿನ ತ್ವರಿತ ರಿಯಾಯಿತಿಯನ್ನು ಪಡೆಯಬಹುದಾಗಿದೆ. ಇದಲ್ಲದೆ ಫ್ಲಿಪ್‌ಕಾರ್ಟ್ ತಿಂಗಳಿಗೆ 3,645 ರೂಪಾಯಿಗಳಿಂದ ಪ್ರಾರಂಭವಾಗುವ ನೋ ಕಾಸ್ಟ್ ಇಎಂಐ ಆಯ್ಕೆಯನ್ನು ಸಹ ನೀಡುತ್ತಿದೆ.
ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್‌ಫೋನ್ ಫೀಚರ್ಸ್
ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್‌ಫೋನ್ 6.67 ಇಂಚಿನ ಎಕ್ಸ್‌ಫಿನಿಟಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇಯು 900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದ್ದು, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಸಹ ಪಡೆದಿದೆ. ಈ ಸ್ಮಾರ್ಟ್‌ಫೋನ್ ಡಿಸ್‌ಪ್ಲೇಯು HDR10+ ಬೆಂಬಲ ಮತ್ತು ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ನೀಡಲಾಗಿದೆ.
ಕ್ಯಾಮೆರಾ ಫೀಚರ್ಸ್
ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಕ್ಯಾಮೆರಾಗಳನ್ನು ಹೊಂದಿರುತ್ತದೆ. ಇನ್ನು ಸೆಲ್ಫಿಗಾಗಿ ಇದರಲ್ಲಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಸ್ಮಾರ್ಟ್ಫೋನ್ನ ಹಿಂಭಾಗದ ಕ್ಯಾಮೆರಾ ಮೂಲಕ 30fps ನಲ್ಲಿ 4ಕೆ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ವಿಡಿಯೋಗಳನ್ನು ರೆಕಾರ್ಡ್ ಮಾಡಬಹುದು.
ಬ್ಯಾಟರಿ ಸಾಮರ್ಥ್ಯ
ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ನೊಂದಿಗೆ ಪ್ಯಾಕ್ ಆಗಿದೆ. ಈ ಬ್ಯಾಟರಿಯು 67W ವೇಗದ ಚಾರ್ಜಿಂಗ್ ಬೆಂಬಲಿಸಲಿದ್ದು, ಸ್ಮಾರ್ಟ್‌ಫೋನ್ ಫುಲ್ ಚಾರ್ಜ್ ಆಗಲು ಕೇವಲ 45 ನಿಮಿಷಗಳು ಸಾಕಾಗುತ್ತದೆ ಎಂದು ಕಂಪೆನಿ ಹೇಳಿದೆ. ಈ ಸ್ಮಾರ್ಟ್‌ಫೋನ್ ಡಾಲ್ಬಿ ಅಟ್ಮೋಸ್ ಬೆಂಬಲದೊಂದಿಗೆ ಡ್ಯುಯಲ್ ಸ್ಟೀರಿಯೋ ಸ್ಪೀಕರ್‌ಗಳನ್ನು ಹೊಂದಿದೆ.
ಇತರೆ ಫೀಚರ್ಸ್
ಇನ್ನು ಈ ಸ್ಮಾರ್ಟ್ಫೋನ್ನ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದಲ್ಲದೆ ಡ್ಯುಯಲ್-ಬ್ಯಾಂಡ್ ವೈಫೈ ಮತ್ತು ಬ್ಲೂಟೂತ್ 5.1 ವೈರ್‌ಲೆಸ್ ಕನೆಕ್ಟಿವಿಟಿಯನ್ನು ಬೆಂಬಲಿಸಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ