ಸ್ಮಾರ್ಟ್ಫೋನ್ ಕಂಪೆನಿಗಳು (Smartphone Company) ಇದೀಗ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಲು ರೆಡಿಯಾಗಿದೆ ಅಂತಾ ಹೇಳ್ಬಹುದು. ಕಾರಣ ಏನೆಂದರೆ ಈ ಬಾರಿ ತಿಂಗಳಿಗೆ ಒಂದರಂತೆ ಒಂದೊಂದು ಕಂಪೆನಿಗಳು ಸ್ಮಾರ್ಟ್ಫೋನ್ ಬಿಡುಗಡೆ ಮಾಡುತ್ತಿದೆ. ಇತ್ತೀಚೆಗೆ ಹುಟ್ಟಿಕೊಂಡಂತಹ ಪೋಕೋ (Poco) ಸ್ಮಾರ್ಟ್ಫೋನ್ ಕಂಪೆನಿ ಇದೀಗ ಮತ್ತೊಂದು ಹೊಸ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಪೋಕೋ ಕಂಪೆನಿ ಈ ಹಿಂದೆ ಪೋಕೋ ಸಿ50 (Poco C50) ಎಂಬ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿತ್ತು. ಇದರ ಬೆನ್ನಲ್ಲೇ ತನ್ನ ಗ್ರಾಹಕರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಇದೀಗ ಪೋಕೋ ಕಂಪೆನಿಯಿಂದ ಪೋಕೋ ಎಕ್ಸ್5 ಪ್ರೋ (Poco X5 Pro) ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಈ ಸ್ಮಾರ್ಟ್ಫೋನ್ ಇದೇ ಜನವರಿ ಅಥವಾ ಫೆಬ್ರವರಿ ಮಧ್ಯದಲ್ಲಿ ಪ್ರಾರಂಭವಾಗಬಹುದು ಎಂದು ಹೇಳಲಾಗುತ್ತಿದೆ.
ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್ಫೋನ್ ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸುದ್ದಿಯಾಗಿದೆ. ಇದೀಗ ಈ ಸ್ಮಾರ್ಟ್ಫೋನ್ನ ಬಿಡುಗಡೆಯ ಮೊದಲೇ ಫೀಚರ್ಸ್ಗಳು ಲೀಕ್ ಆಗಿವೆ, ವಿಶೇಷವಾಗಿ ಈ ಸ್ಮಾರ್ಟ್ಫೋನ್ 108 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ಹೊಂದಿರಲಿದೆ ಎನ್ನಲಾಗಿದೆ.
ಡಿಸ್ಪ್ಲೇ ವಿನ್ಯಾಸ ಹೇಗಿದೆ?
ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್ಫೋನ್ ಮುಖ್ಯವಾಗಿ 6.67 ಇಂಚಿನ ಫುಲ್ಹೆಚ್ಡಿ ಪ್ಲಸ್ ಓಎಲ್ಇಡಿ ಡಿಸ್ಪ್ಲೇಯನ್ನು ಹೊಂದಿರಲಿದೆ ಎಂಬ ವರದಿಯಿದೆ. ಈ ಡಿಸ್ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಬೆಂಬಲಿಸಲಿದೆ. ಅಲ್ಲದೆ 120Hz ಅಡಾಪ್ಟಿವ್ ರಿಫ್ರೆಶ್ ರೇಟ್, HDR10+ ಬೆಂಬಲವನ್ನು ನೀಡಬಹುದು.
ಇದನ್ನೂ ಓದಿ: ಪೋಕೋ ಸಿ50 ಸ್ಮಾರ್ಟ್ಫೋನ್ನ ಫಸ್ಟ್ ಸೇಲ್ ಕೆಲವೇ ದಿನಗಳಲ್ಲಿ ಆರಂಭ! ಆಫರ್ಸ್ ಹೇಗಿದೆ ಗೊತ್ತಾ?
ಕ್ಯಾಮೆರಾ ಫೀಚರ್ಸ್
ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್ಫೋನ್ನ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ ಎಂದು ವರದಿಯಾಗಿದೆ.
ಪ್ರೊಸೆಸರ್ ಸಾಮರ್ಥ್ಯ
ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 778ಜಿ ಎಸ್ಓಸಿ ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಪೋಕೋ ಕಂಪೆನಿಯ ಈ ಸ್ಮಾರ್ಟ್ಫೋನ್ ಆಂಡ್ರಾಯ್ಡ್ 13ನಲ್ಲಿ ರನ್ ಆಗಲಿದೆ ಎಂದು ಹೇಳಲಾಗಿದೆ. ಹಾಗೆಯೇ ಈ ಸ್ಮಾರ್ಟ್ಫೋನ್ನ ಸ್ಟೋರೇಜ್ ಸಾಮರ್ಥ್ಯದ ಬಗ್ಗೆ ಹೇಳುವುದಾದರೆ ಇದು 12 ಜಿಬಿ ರ್ಯಾಮ್ ಮತ್ತು 512 ಜಿಬಿವರೆಗಿನ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.
ಬ್ಯಾಟರಿ ಫೀಚರ್ಸ್
ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಹೊಂದಿರುವುದು ಖಚಿತವಾಗಿದೆ. ಇದು 67W ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.
ಇತರೆ ಫೀಚರ್ಸ್
ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್ಸ್ಪಾಟ್, ವೈಫೈ, ಬ್ಲೂಟೂತ್, ಹೆಡ್ಫೋನ್ ಜ್ಯಾಕ್ ಅನ್ನು ಬೆಂಬಲಿಸಬಹುದು ಎಂದು ಅಂದಾಜಿಸಲಾಗಿದೆ.
ಬೆಲೆ ಮತ್ತು ಲಭ್ಯತೆ
ಇನ್ನು ಈ ಸ್ಮಾರ್ಟ್ಫೋನ್ನ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ಇನ್ನೂ ಕಂಪೆನಿ ಯಾವುದೇ ರೀತಿಯ ಮಾಹಿತಿಯನ್ನು ಹೊರಬಿಟ್ಟಿಲ್ಲ. ಕೆಲವೇ ದಿನಗಳಲ್ಲಿ ಈ ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್ಫೋನ್ನ ಬಿಡುಗಡೆ ದಿನಾಂಕ ಮತ್ತು ಬೆಲೆಯ ಬಗ್ಗೆ ಮಾಹಿತಿ ಬಹಿರಂಗವಾಗಬಹುದು ಎನ್ನಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ