ಮೊಬೈಲ್ ಮಾರುಕಟ್ಟೆಯಲ್ಲಿ (Mobile Market) ಬಜೆಟ್ ಬೆಲೆಯಲ್ಲಿ ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸುವ ಮೂಲಕ ಭಾರೀ ಸದ್ದಿನಲ್ಲಿರು ಕಂಪೆನಿಗಳಲ್ಲಿ ಪೋಕೋ ಕಂಪೆನಿ (Poco Company) ಸಹ ಒಂದು. ಈ ಕಂಪೆನಿಯಿಂದ ಇದುವರೆಗೆ ಹಲವಾರು ಸ್ಮಾರ್ಟ್ಫೋನ್ಗಳು ಬಿಡುಗಡೆಯಾಗಿದ್ದು ಎಲ್ಲವೂ ಉತ್ತಮ ಫೀಚರ್ಸ್ಗಳನ್ನು ಒಳಗೊಂಡಿದೆ. ಟೆಕ್ ಜಗತ್ತಿನಲ್ಲಿ (Tech World) ಇತ್ತೀಚೆಗೆ ಸ್ಮಾರ್ಟ್ಫೋನ್ಗಳಿಗೆ ಬೇಡಿಕೆ ಹೆಚ್ಚಾಗಿದೆ. ಅದ್ರಲ್ಲೂ ಜನರು ಹೊಸ ಸ್ಮಾರ್ಟ್ಫೋನ್ಗಳ ಬರುವಿಕೆಗಾಗಿ ಕಾತುರದಿಂದ ಕಾಯುತ್ತಿರುತ್ತಾರೆ. ಈ ಮಧ್ಯೆ ಪೋಕೋ ಕಂಪೆನಿ ತನ್ನ ಬ್ರಾಂಡ್ ಅಡಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಅನ್ನು ಇದೇ 2023ರ ಫೆಬ್ರವರಿಯಲ್ಲಿ ಬಿಡುಗಡೆ ಮಾಡುವುದಾಗಿದೆ ಘೋಷಿಸಿದೆ.
ಪೋಕೋ ಕಂಪೆನಿಯಿಂದ ಹೊಸ ಸ್ಮಾರ್ಟ್‌ಫೋನ್ ಫೆಬ್ರವರಿ 6 ರಂದು ಬಿಡುಗಡೆಯಾಗುತ್ತಿದ್ದು, ಇದಕ್ಕೆ ಪೋಕೋ ಎಕ್ಸ್5 ಪ್ರೋ ಎಂದು ಹೆಸರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಲ್ಲಿ ಮಾರುಕಟ್ಟೆಯನ್ನು ಪ್ರವೇಶಿಸಲಿದ್ದು, ಉತ್ತಮ ಫೀಚರ್ಸ್ಗಳನ್ನು ಸಹ ಇದು ಹೊಂದಿರಲಿದೆ.
ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್‌ಫೋನ್ ಫೀಚರ್ಸ್
ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್‌ಫೋನ್ ವಿಶೇಷವಾಗಿ 6.67 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಓಎಲ್ಇಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎಂಬ ವರದಿಯಾಗಿದೆ. ಈ ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಬೆಂಬಲಿಸಲಿದೆ. ಅಲ್ಲದೆ 120Hz ಅಡಾಪ್ಟಿವ್ ರಿಫ್ರೆಶ್ ರೇಟ್, HDR10+ ಬೆಂಬಲವನ್ನು ಸಹ ನೀಡಬಹುದು.
ಕ್ಯಾಮೆರಾ ಫೀಚರ್ಸ್
ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ ಅನ್ನೋದು ವರದಿಯ ಪ್ರಕಾರ ಪಕ್ಕಾ ಆಗಿದೆ. ಇನ್ನು ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸೆಲ್ಫಿಗಾಗಿ ಮತ್ತು ವಿಡಿಯೋ ಕಾಲ್ಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಪ್ರೊಸೆಸರ್ ಸಾಮರ್ಥ್ಯ
ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778ಜಿ ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರುತ್ತದೆ. ಇದು ಆಂಡ್ರಾಯ್ಡ್ 13ನಲ್ಲಿ ರನ್ ಆಗಲಿದೆ ಎಂದು ಹೇಳಲಾಗಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 12 ಜಿಬಿ ರ್‍ಯಾಮ್ ಮತ್ತು 512 ಜಿಬಿ ವರೆಗಿನ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಮದಿರಬಹುದು ಎಂದು ಅಂದಾಜಿಸಲಾಗಿದೆ.
ಬ್ಯಾಟರಿ ಫೀಚರ್ಸ್
ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಹೊಂದಿರುತ್ತದೆ. ಈ ಬ್ಯಾಟರಿಯು 67W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಬಹುದು.
ಇತರೆ ಫೀಚರ್ಸ್
ಇನ್ನು ಈ ಸ್ಮಾರ್ಟ್ಫೋನ್ನ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಬಹುದು ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ: ದಿನಕ್ಕೆ 2 ರೂಪಾಯಿ ಪಾವತಿಸಿ; ವರ್ಷವಿಡೀ ಅನಿಯಮಿತ ಕರೆ, ಪ್ರತಿದಿನ 2 ಜಿಬಿ ಡೇಟಾ ಸೌಲಭ್ಯ ಪಡೆಯಿರಿ
ಬೆಲೆ ಮತ್ತು ಲಭ್ಯತೆ
ಪೋಕೋ ಎಕ್ಸ್5 ಪ್ರೋ ಸ್ಮಾರ್ಟ್ಫೋನ್ನ ಬೆಲೆ ಬಗ್ಗೆ ಕಂಪೆನಿಯು ಯಾವುದೇ ಮಾಹಿತಿಯನ್ನು ಇದುವರೆಗೆ ಬಹಿರಂಗ ಪಡಿಸಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಅನ್ನು ಫೆಬ್ರವರಿ 6 ರಂದು ಬಿಡುಗಡೆಯಾಗಬಹುದು ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
ಪೋಕೋ ಕಂಪೆನಿಯಿಂದ ಬಿಡುಗಡೆಯಾಗುವಂತ ಎಲ್ಲಾ ಸ್ಮಾರ್ಟ್ಫೋನ್ಗಳು ಗ್ರಾಹಕರಿಕೆ ಕೈಗೆಟಕುವ ಬೆಲೆಯಲ್ಲೇ ದೊರೆಯುತ್ತದೆ. ಆದ್ದರಿಮದ ಪೋಕೋ ಸ್ಮಾರ್ಟ್ಫೋನ್ಗಳಿಗಾಗಿ ಮಾರುಕಟ್ಟೆಯಲ್ಲಿ ಜನರು ಕಾಯುತ್ತಿರುತ್ತಾರೆ. ಇನ್ನು ಈ ಸ್ಮಾರ್ಟ್ಫೋನ್ನ ಡಿಸ್‌ಪ್ಲೇ ವಿನ್ಯಾಸದಿಂದ ಹಿಡಿದು ಬ್ಯಾಟರಿ, ಕ್ಯಾಮೆರಾ ಫೀಚರ್ಸ್ಗಳೆಲ್ಲವೂ ಗುಣಮಟ್ಟದ್ದಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ