ಟೆಕ್ ಮಾರುಕಟ್ಟೆಯಲ್ಲಿ (Tech Market) ಸ್ಮಾರ್ಟ್ಫೋನ್ಗಳಿಗೆ ಇದ್ದಷ್ಟು ಬೇಡಿಕೆ ಬೇರೆ ಯಾವುದೇ ಸಾಧನಗಳಿಗಿಲ್ಲ. ಇದಕ್ಕೆ ಕಾರಣ ಈ ಮೊಬೈಲ್ಗಳು ಹೊಂದಿರುವಂತಹ ಫೀಚರ್ಸ್ ಅಂತಾನೇ ಹೇಳ್ಬಹುದು. ಸ್ಮಾರ್ಟ್ಫೋನ್ಗಳು ಇತ್ತೀಚಿನ ಕಾಲಮಾನದಲ್ಲಿ ಅತೀ ಅಗತ್ಯವಾದ ಸಾಧನವಾಗಿಬಿಟ್ಟಿದೆ. ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಬೇಕಾಗುವ ಆಯ್ಕೆಯಲ್ಲಿ ಸ್ಮಾರ್ಟ್ಫೋನ್ಗಳು (Smartphones) ಲಭ್ಯವಿದೆ. ಆದರೆ ಬೇರೆ ಬೇರೆ ವಿನ್ಯಾಸದಲ್ಲಿ ಇದು ರೂಪುಗೊಂಡಿದ್ದು ಗ್ರಾಹಕರನ್ನು ಬೇಗನೆ ಆಕರ್ಷಿಸಿಕೊಳ್ಳುತ್ತದೆ. ಅದೇ ರೀತಿ ಈ ಮೊಬೈಲ್ಗಳ ಫೀಚರ್ಸ್ಗಳಿಗೆ ಅನುಗುಣವಾಗಿ ಇವುಗಳ ಬೆಲೆ ನಿಗದಿಯಾಗುತ್ತದೆ. ಆದರೆ ಕೆಲವೊಂದು ಬಾರೆ ಪ್ರಮುಖ ಇಕಾಮರ್ಸ್ ಕಂಪೆನಿಗಳಾಗಿರುವ ಫ್ಲಿಪ್ಕಾರ್ಟ್ (Flipkart) ಹಾಗೂ ಅಮೆಜಾನ್ (Amazon) ಕೆಲವು ಗುಣಮಟ್ಟದ ಸ್ಮಾರ್ಟ್ಫೋನ್ಗಳ ಮೇಲೆ ಆಫರ್ಸ್ಗಳನ್ನು ನೀಡುತ್ತದೆ.
ಕೆಲವೊಮ್ಮೆ ಬಜೆಟ್ ಬೆಲೆಯಲ್ಲಿ ಸ್ಮಾರ್ಟ್ಫೋನ್ಗಳು ಲಭ್ಯವಾದಾಗ ಖರೀದಿ ಮಾಡುವ ಆಯ್ಕೆಯೇ ಒಂದು ದೊಡ್ಡ ಸಮಸ್ಯೆಯಾಗಿದೆ. ಆದರೆ 15 ಸಾವಿರ ರೂಪಾಯಿ ಒಳಗೆ ಸ್ಮಾರ್ಟ್‌ಫೋನ್ ಖರೀದಿ ಮಾಡಬೇಕೆನ್ನವ ಪ್ಲ್ಯಾನ್ನಲ್ಲಿರುವವರಿಗೆ ಇಲ್ಲಿದೆ ಟಾಪ್ 5 ಸ್ಮಾರ್ಟ್ಫೋನ್ಗಳು.
ರೆಡ್ಮಿ ನೋಟ್ 10ಎಸ್ ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10ಎಸ್ ಸ್ಮಾರ್ಟ್‌ಫೋನ್ ಕೇವಲ 12,499 ರೂಪಾಯಿಗಳಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದೆ. ಇನ್ನು ಈ ಫೋನ್ನ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದು 6.43 ಇಂಚಿನ ಸೂಪರ್ ಅಮೋಲ್ಡ್ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಹಿಲಿಯೋ ಜಿ96 ಪ್ರೊಸೆಸರ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಮತ್ತು 6 ಜಿಬಿ ರ್‍ಯಾಮ್ ಮತ್ತು 64ಜಿಬಿ ಹಾಗೂ 6 ಜಿಬಿ ರ್‍ಯಾಮ್ ಮತ್ತು 128 ಜಿಬಿ ನ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರುಕಟ್ಟೆಗೆ ಬಿಡುಗಡೆಯಾಗಿದೆ.
ಇದರೊಂದಿಗೆ ಈ ಮೊಬೈಲ್ನಲ್ಲಿ 64 ಎಮ್ಪಿ ಸೆನ್ಸಾರ್ನ ಮುಖ್ಯ ಕ್ಯಾಮೆರಾವನ್ನು ಹೊಂದಿದ್ದು, ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇನ್ನು ಸೆಲ್ಫಿಗಾಗಿ 13ಎಮ್ಪಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇದರ ಬ್ಯಾಟರಿ ಫೀಚರ್ಸ್ ಬಗ್ಗೆ ಹೇಳುವುದಾದರೆ, 33W ಫಾಸ್ಟ್ ಚಾರ್ಜರ್‌ನೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಹೊಂದಿದೆ.
ಮೊಟೊ ಜಿ72 ಸ್ಮಾರ್ಟ್‌ಫೋನ್
ಮೊಟೊ ಜಿ72 ಸ್ಮಾರ್ಟ್‌ಫೋನ್ 14,999 ರೂಪಾಯಿಗಳಲ್ಲಿ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಈ ಫೋನ್ 6.55 ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, ಇದು 120 Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಹಾಗೆಯೇ ಮೀಡಿಯಾ ಟೆಕ್ ಹಿಲಿಯೋ G99 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸುವ ಈ ಫೋನ್ 6ಜಿಬಿ ರ್‍ಯಾಮ್ ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ. ಹಾಗೂ 108ಎಮ್ಪಿ ಮುಖ್ಯ ಕ್ಯಾಮೆರಾದೊಂದಿಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.
ಇನ್ನು ಸೆಲ್ಫಿಗಾಗಿ 16ಎಮ್ಪಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಹೊಂದಿದೆ.
ಐಕ್ಯೂ ಝಡ್6 ಸ್ಮಾರ್ಟ್‌ಫೋನ್
ಐಕ್ಯೂ ಝಡ್6 44W ಸ್ಮಾರ್ಟ್‌ಫೋನ್ ಅನ್ನು 14,499 ರೂಪಾಯಿಗಳ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಈ ಫೋನ್ 6.44 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, ಸ್ನಾಪ್‌ಡ್ರಾಗನ್ 680 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4 ಜಿಬಿ ರ್‍ಯಾಮ್ ಮತ್ತು 128GB, 6ಜಿಬಿ ರ್‍ಯಾಮ್ ಮತ್ತು 128ಜಿಬಿ ಹಾಗೂ 8 ಜಿಬಿ ರ್‍ಯಾಮ್ ಮತ್ತು 128ಜಿಬಿ ನ ಮೂರು ಸ್ಟೋರೇಜ್ ವೇರಿಯಂಟ್‌ನಲ್ಲಿ ಲಭ್ಯವಾಗಲಿದೆ. ಇದರೊಂದಿಗೆ 50ಎಮ್ಪಿ ರಿಯರ್ ಕ್ಯಾಮೆರಾ ಹಾಗೂ 8ಎಮ್ಪಿ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ರಿಯಲ್‌ಮಿ 10 ಸ್ಮಾರ್ಟ್‌ಫೋನ್
ರಿಯಲ್‌ಮಿ 10 ಸ್ಮಾರ್ಟ್‌ಫೋನ್ ಅನ್ನು ಕೇವಲ 13,999 ರೂಪಾಯಿಗಳಲ್ಲಿ ಲಭ್ಯವಾಗಲಿದೆ. ಈ ಫೋನ್ 6.4 ಇಂಚಿನ ಅಮೋಲ್ಡ್ ಡಿಸ್‌ಪ್ಲೇ ಹೊಂದಿದ್ದು, 90 Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಹಾಗೆಯೇ ಹಿಲಿಯೋ ಜಿ99 ಚಿಪ್‌ಸೆಟ್ ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸುವ ಈ ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ವೇರಿಯಂಟ್‌ನಲ್ಲಿ ಲಭ್ಯವಿದೆ. ಇದರಲ್ಲಿ 50ಎಮ್ಪಿ ಸೆನ್ಸಾರ್ ಹೊಂದಿರುವ ರಿಯರ್ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಹಾಗೂ 16MP ಇನ್-ಡಿಸ್ಪ್ಲೇ ಸೆಲ್ಫಿ ಕ್ಯಾಮೆರಾವನ್ನು ಸಹ ಅಳವಡಿಸಲಾಗಿದೆ. 5,000 mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಪ್ಯಾಕ್ ಆಗಿರುವ ಈ ಫೋನ್ .33W ಸೂಪರ್ ವೂಕ್ ಚಾರ್ಜರ್‌ನೊಂದಿಗೆ ಬರುತ್ತದೆ.
ಇದನ್ನೂ ಓದಿ: ಬಜೆಟ್ ಬೆಲೆಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡ್ತಿದೆ ಮೊಟೊ ಇ13 ಮೊಬೈಲ್! ಫೀಚರ್ಸ್ ಹೇಗಿದೆ ಗೊತ್ತಾ?
ಪೋಕೋ ಎಮ್4 ಪ್ರೋ ಸ್ಮಾರ್ಟ್‌ಫೋನ್
ಪೋಕೋ ಎಮ್4 ಪ್ರೋ ಸ್ಮಾರ್ಟ್‌ಫೋನ್ ಅನ್ನು 13,999 ರೂಪಾಯಿಗಳಿಗೆ ಮಾರುಕಟ್ಟೆಯಲ್ಲಿ ಖರೀದಿ ಮಾಡಬಹುದಾಗಿದೆ. ಈ ಫೋನ್ 6.6 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, 90Hz ರಿಫ್ರೆಶ್ ರೇಟ್ ನೀಡಲಿದೆ. ಹಾಗೆಯೇ ಮೀಡಿಯಾ ಟೆಕ್ ಹಿಲಿಯೋ ಜಿ96 ನಲ್ಲಿ ಕಾರ್ಯನಿರ್ವವಹಿಸುತ್ತದೆ. ಹಾಗೆಯೇ ಇದು ಎರಡು ಸ್ಟೋರೇಜ್ ವೇರಿಯಂಟ್‌ನಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಸಹ ಹೊಂದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ