ಇತ್ತೀಚೆಗೆ ಅಭಿವೃದ್ಧಿಯಾಗುತ್ತಿರುವ ಒಂದು ಮಾರುಕಟ್ಟೆಯೆಂದರೆ ಅದು ಮೊಬೈಲ್ ಮಾರುಕಟ್ಟೆ. ಈಗಂತೂ ಸ್ಮಾರ್ಟ್ಫೋನ್ಗಳಿಗೆ ಮಾರುಕಟ್ಟೆಯಲ್ಲಿ ಎಲ್ಲಿಲ್ಲದ ಬೇಡಿಕೆ. ಸ್ಮಾರ್ಟ್ಫೋನ್ ಇಲ್ಲದೇ ದಿನವೇ ಹೋಗಲ್ಲ ಎನ್ನುವವರನ್ನು ಎಷ್ಟೋ ಜನರನ್ನು ನಾವು ಕಾಣಬಹುದಾಗಿದೆ. ಈ ಮಧ್ಯೆ ಸ್ಮಾರ್ಟ್ಫೋನ್ ಕಂಪೆನಿಗಳು ಕೂಡ ಮಾರುಕಟ್ಟೆಗೆ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಗಮನ ಸೆಳೆಯುತ್ತಲೇ ಇದೆ. ಕೆಲವೊಂದು ಸ್ಮಾರ್ಟ್ಫೋನ್ ಕಂಪೆನಿಗಳು ಬೆಲೆಗೆ ತಕ್ಕ ಫೀಚರ್ಸ್ಗಳನ್ನು ತನ್ನ ಪ್ರೊಡಕ್ಟ್ನಲ್ಲಿ ನೀಡುತ್ತದೆ. ಇದಕ್ಕೆ ಶಿಯೋಮಿ, ಒನ್ಪ್ಲಸ್, ಐಕ್ಯೂ, ಗೂಗಲ್ ಕಂಪೆನಿಯ ಸ್ಮಾರ್ಟ್ಫೋನ್ಗಳು ಉದಾಹರಣೆಯಾಗಿ ಹೇಳಬಹುದಾಗಿದೆ.
ದುಬಾರಿ ಬೆಲೆಯ ಸ್ಮಾರ್ಟ್ಫೋನ್ಗಳಿಗೆ ಇತ್ತೀಚೆಗೆ ಭಾರೀ ಬೇಡಿಕೆಯಿದೆ. ಈ ಸ್ಮಾರ್ಟ್ಫೋನ್ಗಳು ಪ್ರೀಮಿಯಂ ರೀತಿಯಲ್ಲಿ ಫೀಚರ್ಸ್ಗಳನ್ನು ನೀಡುವ ಮೂಲಕ ತಮ್ಮ ಕಂಪೆನಿಯ ಗ್ರಾಹಕರನ್ನಾಗಿ ಬದಲಾವಣೆ ಮಾಡುತ್ತಿದೆ. ಹಾಗಿದ್ರೆ ದುಬಾರಿ ಬೆಲೆಯಲ್ಲಿ ಮಾರುಕಟ್ಟೆಯಲ್ಲಿ ಖರೀದಿ ಮಾಡಬಹುದಾದ ಸ್ಮಾರ್ಟ್ಫೋನ್ಗಳ ಮಾಹಿತಿ ಇಲ್ಲಿದೆ.
ಒನ್ಪ್ಲಸ್ 10ಟಿ 5ಜಿ
ಒನ್ಪ್ಲಸ್ 10ಟಿ 5ಜಿ ಸ್ಮಾರ್ಟ್ಫೋನ್ನ ಆರಂಭಿಕ ಬೆಲೆ 49,999 ರೂಪಾಯಿ ಆಗಿದೆ. ಈ ಸ್ಮಾರ್ಟ್ಫೋನ್ 6.7 ಇಂಚಿನ ಹೆಚ್ಡಿ ಪ್ಲಸ್ ಅಮೋಲ್ಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಮ್ ಸ್ನಾಪ್ಡ್ರಾಗನ್ 8+ ಜೆನ್ 1 ಎಸ್ಓಸಿ ಪ್ರೊಸೆಸರ್ ನಲ್ಲಿ ಕಾರ್ಯ ನಿರ್ವಹಿಸಲಿದೆ.
ಇದನ್ನೂ ಓದಿ: ಒಲಿಂಪಿಕ್ ಪದಕ ಗೆದ್ದ ಭಾರತದ ಮೊದಲ ವೈಯಕ್ತಿಕ ಅಥ್ಲೀಟ್ಗೆ ಗೂಗಲ್ ಡೂಡಲ್ನಿಂದ ಗೌರವ!
ಜೊತೆಗೆ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಈ ಸ್ಮಾರ್ಟ್ಫೋನ್ ರನ್ ಆಗಲಿದೆ. ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುತ್ತದೆ.
ಶಿಯೋಮಿ 12 ಪ್ರೋ 5ಜಿ
ಶಿಯೋಮಿ 12 ಪ್ರೋ 5ಜಿ ಸ್ಮಾರ್ಟ್ಫೋನ್ 12ಜಿಬಿ ರ್ಯಾಮ್ ಮತ್ತು 256ಜಿಬಿ ಸ್ಟೋರೆಜ್ ಹೊಂದಿರುವ ಸ್ಮಾರ್ಟ್ಫೋನ್ 59,999 ರೂಪಾಯಿ ಬೆಲೆಯಲ್ಲಿ ಹೊಂದಬಹುದಾಗಿದೆ. ಶಿಯೋಮಿ 12 ಪ್ರೋ 5ಜಿ ಸ್ಮಾರ್ಟ್ಫೋನ್ 6.73 ಇಂಚಿನ WQHD+ ಸ್ಯಾಮ್ಸಂಗ್ ಇ5 ಅಮೋಲ್ಡ್ ಡಿಸ್ಪ್ಲೇಯನ್ನು ಹೊಂದಿರಲಿದೆ.
ಇದು ಆಕ್ಟಾ-ಕೋರ್ ಸ್ನಾಪ್ಡ್ರಾಗನ್ 8 ಜೆನ್ 1 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX707 ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.
ಐಕ್ಯೂ 11 5ಜಿ
ಐಕ್ಯೂ 11 5ಜಿ 2023 ಸ್ಮಾರ್ಟ್ಫೋನ್ 8ಜಿಬಿ ರ್ಯಾಮ್ ಮತ್ತು 128ಜಿಬಿ ಸ್ಟೋರೇಜ್ ಹೊಂದಿರುವ ಸ್ಮಾರ್ಟ್ಫೋನ್ 59,999 ರೂಪಾಯಿ ಬೆಲೆಯಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದೆ. ಇನ್ನು ಈ ಸ್ಮಾರ್ಟ್ಫೋನ್ 6.78 ಇಂಚಿನ ಪಂಚ್-ಹೋಲ್ ಡಿಸ್ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 8 ಜೆನ್ 2 ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ.
ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್ಸಂಗ್ GN5 ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಬ್ಯಾಟರಿ 120W ವೇಗದ ವೈರ್ಡ್ ಚಾರ್ಜಿಂಗ್ ಸಾಮರ್ಥ್ಯವನ್ನು ಹೊಂದಿದೆ.
ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್ಫೋನ್
ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್ಫೋನ್ ಆರಂಭಿಕ ಬೆಲೆ 59,999 ರೂಪಾಯಿ ಆಗಿದೆ. ಇನ್ನು ಈ ಸ್ಮಾರ್ಟ್ಫೋನ್ 6.32 ಇಂಚಿನ ಫುಲ್ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸಲ್ ಸೆನ್ಸಾರ್ ಪಡೆದಿದೆ. ಜೊತೆಗೆ 4,335mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ