ಸ್ಮಾರ್ಟ್ಫೋನ್ (Smartphone) ವಲಯದಲ್ಲಿ ಹಲವಾರು ಜನಪ್ರಿಯತೆ ಕಂಪೆನಿಗಳಿವೆ. ಅದರಲ್ಲಿ ಒನ್ಪ್ಲಸ್ (Oneplus Company) ಕೂಡಾ ಒಂದು. ಈ ಕಂಪೆನಿ ತನ್ನ ಬ್ರಾಂಡ್ನ ಅಡಿಯಲ್ಲಿ ಪ್ರೀಮಿಯಂ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆಯುವಂತೆ ಮಾಡಿದೆ. ಒನ್ಪ್ಲಸ್ ಕಂಪೆನಿ ಇದುವರೆಗೆ ಬಿಡುಗಡೆ ಮಾಡಿರುವಂತಹ ಸ್ಮಾರ್ಟ್ಫೋನ್ಗಳೆಲ್ಲವೂ ಉತ್ತಮ ಗುಣಮಟ್ಟದ್ದಾಗಿದ್ದು, ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದೆ. ಇದಲ್ಲದೆ ಒನ್ಪ್ಲಸ್ ಕಂಪೆನಿಯ ಸ್ಮಾರ್ಟ್ಫೋನ್ (Oneplus Nord CE 3)ಗಳಿಗೆ ಭಾರತೀಯ ಮಾರುಕಟ್ಟೆಯಲ್ಲಿ ಎಲ್ಲಿಲ್ಲದ ಬೇಡಿಕೆ. ಇನ್ನು ಈ ಕಂಪೆನಿ ಭಾರತದ ಹಲವಾರು ಸ್ಮಾರ್ಟ್ಫೋನ್ ಕಂಪೆನಿಗಳಲ್ಲಿ ಅಗ್ರ ಸ್ಥಾನದಲ್ಲಿದೆ. ಈ ಮಧ್ಯೆ ಒನ್ಪ್ಲಸ್ ಕಂಪೆನಿಯಿಂದ ಹೊಸ ಸ್ಮಾರ್ಟ್ಫೋನ್ ಒಂದು ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ರೆಡಿಯಾಗಿದೆ.
ಒನ್ಪ್ಲಸ್ ಕಂಪೆನಿ ಒನ್ಪ್ಲಸ್ ನಾರ್ಡ್ ಸಿಇ3 ಎಂಬ ಪ್ರೀಮಿಯಂ ಸ್ಮಾರ್ಟ್ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗಿ ನಿಂತಿದೆ. ಈ ಸ್ಮಾರ್ಟ್ಫೋನ್ ಹಲವು ದಿನಗಳಿಂದ ಮಾರುಕಟ್ಟೆಯಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು. ಇದೀಗ ಬಿಡುಗಡೆಗೂ ಮೊದಲೇ ಇದರ ಫೀಚರ್ಸ್ ಸೋರಿಕೆಯಾಗಿದೆ. ಹಾಗಿದ್ರೆ ಈ ಸ್ಮಾರ್ಟ್ಫೋನ್ ಸ್ಪೆಷಲ್ ಫೀಚರ್ಸ್ ಏನು? ಬೆಲೆ ಎಷ್ಟು ಎಂಬುದನ್ನು ಈ ಲೇಖನದ ಮೂಲಕ ತಿಳಿಯಿರಿ.
ಒನ್ಪ್ಲಸ್ ನಾರ್ಡ್ ಸಿಇ3 ಸ್ಮಾರ್ಟ್ಫೋನ್ ವಿನ್ಯಾಸ ಹೇಗಿದೆ?
ಒನ್ಪ್ಲಸ್ ನಾರ್ಡ್ ಸಿಇ3 ಸ್ಮಾರ್ಟ್ಫೋನ್ 6.7 ಇಂಚಿನ ಫುಲ್ ಹೆಚ್ಡಿ ಪ್ಲಸ್ ಎಲ್ಸಿಡಿ ಡಿಸ್ಪ್ಲೇ ಹೊಂದಿರಲಿದೆ. ಇದು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆಯುವ ಸಾಧ್ಯತೆಯಿದೆ ಎಂದು ನಿರೀಕ್ಷಿಸಲಾಗಿದೆ. ಈ ಡಿಸ್ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಇದರ ರಕ್ಷಣೆಗಾಗಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಅಳವಡಿಸಿರಬಹುದು ಎಂದು ಅಂದಾಜಿಸಲಾಗಿದೆ.
ಕ್ಯಾಮೆರಾ ಫೀಚರ್ಸ್
ಒನ್ಪ್ಲಸ್ ನಾರ್ಡ್ ಸಿಇ3 ಸ್ಮಾರ್ಟ್ಫೋನ್ ಮುಖ್ಯವಾಗಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿರಬಹುದು ಎಂಬ ನಿರೀಕ್ಷೆಯಿದೆ. ಇನ್ನು ಸೆಲ್ಫಿಗಾಗಿ ಮತ್ತು ವಿಡಿಯೋ ಕಾಲ್ಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ ಎಂದು ಅಂದಾಜಿಸಲಾಗಿದೆ.
ಬ್ಯಾಟರಿ ಫೀಚರ್ಸ್
ಒನ್ಪ್ಲಸ್ ನಾರ್ಡ್ ಸಿಇ 3 ಸ್ಮಾರ್ಟ್ಫೋನ್ 5,000mAh ಬ್ಯಾಟರಿಯನ್ನು ಒಳಗೊಂಡಿರುತ್ತದೆ ಎಂದು ಹೇಳಲಾಗಿದೆ. ಇನ್ನು ಈ ಬ್ಯಾಟರಿಯು 67W ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಹೊಂದಿರಬಹುದು ಎಂದು ನಿರೀಕ್ಷಿಸಲಾಗಿದೆ.
ಪ್ರೊಸೆಸರ್ ಹೇಗಿರಬಹುದು?
ಒನ್ಪ್ಲಸ್ ನಾರ್ಡ್ ಸಿಇ 3 ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 695SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 ಜಿಬಿ ರ್ಯಾಮ್ ಮತ್ತು 128ಜಿಬಿ ಇಂಟರ್ನಲ್ ಸ್ಟೋರೇಜ್ ಅನ್ನು ಪಡೆಯಲಿದೆ ಎನ್ನಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸ್ಟೋರೇಜ್ ಸಾಮರ್ಥ್ಯ ವಿಸ್ತರಿಸುವ ಆಯ್ಕೆಯನ್ನು ಸಹ ನಿರೀಕ್ಷಿಸಲಾಗಿದೆ.
ಇತರೆ ಫೀಚರ್ಸ್
ಇನ್ನು ಒನ್ಪ್ಲಸ್ ನಾರ್ಡ್ ಸಿಇ 3 ಸ್ಮಾರ್ಟ್ಫೋನ್ನ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್ಸ್ಪಾಟ್, ಬ್ಲೂಟೂತ್, ವೈಫೈ, 5G, ಫಿಂಗರ್ಪ್ರಿಂಟ್ ಸ್ಕ್ಯಾನರ್, NFC ಅನ್ನು ಬೆಂಬಲಿಸಲಿದೆ.
ಇದನ್ನೂ ಓದಿ: ಟೆಕ್ನೋ ಕಂಪೆನಿಯ ಹೊಸ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಲಗ್ಗೆ! ಬೆಲೆ ಎಷ್ಟು?
ಬೆಲೆ ಮತ್ತು ಲಭ್ಯತೆ
ಇನ್ನು ಈ ಸ್ಮಾರ್ಟ್ಫೋನ್ನ ಬೆಲೆಯ ಬಗ್ಗೆ ಕಂಪೆನಿ ಯಾವುದೇ ರೀತಿಯ ಮಾಹಿತಿಯನ್ನು ಬಹಿರಂಗ ಪಡಿಸಿಲ್ಲ.. ಆದರೆ ಇದು ಭಾರತದಲ್ಲಿ 25,000 ಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಲಭ್ಯವಾಗಬಹುದು ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್ಫೋನ್ ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯಿಲ್ಲ. ಆದರೆ ಪ್ರಸ್ತುತ ಒನ್ಪ್ಲಸ್ ಕಂಪೆನಿ ಭಾರತದಲ್ಲಿ ಒನ್ಪ್ಲಸ್ 11 ಅನ್ನು ಫೆಬ್ರವರಿ 7 ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಆದ್ದರಿಂದ ಒನ್ಪ್ಲಸ್ ನಾರ್ಡ್ ಸಿಇ 3 ಫೋನ್ ಬಿಡುಗಡೆ ಇನ್ನಷ್ಟು ತಡವಾಗುವ ಸಾದ್ಯತೆ ಕೂಡ ಇದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ