ಒಪ್ಪೋ ಕಂಪೆನಿ (Oppo Company) ಮೊಬೈಲ್ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡಿದ ಕಂಪೆನಿಯಾಗಿದೆ. ಇತ್ತೀಚೆಗೆ ಒಪ್ಪೋ ಕಂಪೆನಿಯ ಸ್ಮಾರ್ಟ್ಫೋನ್ಗಳು ಸಾಕಷ್ಟು ಮಾರುಕಟ್ಟೆಯಲ್ಲಿ ಬಿಡುಗಡೆಯಾಗುತ್ತಿರುವುದನ್ನು ನಾವು ನೋಡಬಹುದಾಗಿದೆ. ಈ ಸ್ಮಾರ್ಟ್ಫೋನ್ಗಳು ಗುಣಮಟ್ಟದ ಫೀಚರ್ಸ್ ಹಾಗೂ ಕ್ಯಾಮೆರಾದಿಂದ ಗ್ರಾಹಕರನ್ನು ತನ್ನತ್ತ ಆಕರ್ಷಿಸಿವೆ ಎಂದು ಹೇಳ್ಬಹುದು. ಕಳೆದ ವರ್ಷದಲ್ಲಿ ಒಪ್ಪೋ ಎ ಸೀರಿಸ್ನಲ್ಲಿ (Oppo A Series) ಬಹಳಷ್ಟು ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿದೆ. ಇದೀಗ ಒಪ್ಪೋ ಗ್ರಾಹಕರಿಗೆ ಸಿಹಿಸುದ್ದಿಯನ್ನು ನೀಡಿದೆ. ಒಪ್ಪೋ ಕಂಪೆನಿಯಿಂದ ಹೊಸ ಒಪ್ಪೋ ಎ56ಎಸ್ (Oppo A56s) ಎಂಬ ಸ್ಮಾರ್ಟ್ಫೋನ್ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ.
ಇದೀಗ ಒಪ್ಪೋ ’ಎ’ ಸೀರಿಸ್ನ ಅಡಿಯಲ್ಲಿ ಒಪ್ಪೋ ಎ56ಎಸ್ ಎಂಬ ಸ್ಮಾರ್ಟ್ಫೋನ್ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸಲಿದ್ದು, ಇದರ ಫೀಚರ್ಸ್, ಬೆಲೆ ಬಗ್ಗೆ ಕಂಪ್ಲೀಟ್ ಮಾಹಿತಿ ಇಲ್ಲಿದೆ.
ಒಪ್ಪೋ ಎ56ಎಸ್ ಸ್ಮಾರ್ಟ್ಫೋನ್ನ ಫೀಚರ್ಸ್
ಒಪ್ಪೋ ಎ56ಎಸ್ ಸ್ಮಾರ್ಟ್ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರುತ್ತದೆ. ಇನ್ನು ಈ ಸ್ಮಾರ್ಟ್ಫೋನ್ನ ಡಿಸ್ಪ್ಲೇ 6.5 ಇಂಚಿನ ಹೆಚ್ಡಿ+ ಡಿಸ್ಪ್ಲೇಯನ್ನು ಹೊಂದಿದೆ. ಇದು 90Hz ಟಚ್ ರೀಫ್ರೆಶ್ ರೇಟ್ ಅನ್ನು ಹೊಂದಿದೆ. ಹಾಗೆಯೇ ಉತ್ತಮ ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದಿದೆ. ಇನ್ನು ಡಿಸ್ಪ್ಲೇನ ಪ್ರತಿ ಪಿಕ್ಸೆಲ್ನ ಸಾಂದ್ರತೆಯು 269ppi ಆಗಿದ್ದು, 600 ನಿಟ್ಸ್ ಬ್ರೈಟ್ನೆಸ್ ಅನ್ನು ಇದು ಹೊಂದಿದೆ.
ಇದನ್ನೂ ಓದಿ: ರೆಡ್ಮಿ ಕಂಪೆನಿಯ ಹೊಸ ಸ್ಮಾರ್ಟ್ಫೋನ್ ಲಾಂಚ್! ಹೇಗಿದೆ ಗೊತ್ತಾ ಫೀಚರ್ಸ್?
ಕ್ಯಾಮೆರಾ ಫೀಚರ್ಸ್
ಒಪ್ಪೋ ಎ56ಎಸ್ ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ನಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇನ್ನು ಈ ಸ್ಮಾರ್ಟ್ಫೋನ್ ಕ್ಯಾಮೆರಾದಲ್ಲಿಯೇ ಫೋಟೊ ಎಡಿಟ್ ಮಾಡುವ ಆಯ್ಕೆಗಳಿದ್ದು, ಯಾವುದೇ ಥರ್ಡ್ ಪಾರ್ಟಿ ಆ್ಯಪ್ಗಳನ್ನು ಡೌನ್ಲೋಡ್ ಮಾಡುವ ಅವಶ್ಯಕತೆಯಿರುವುದಿಲ್ಲ.
ಬ್ಯಾಟರಿ ಫೀಚರ್ಸ್ ಹೇಗಿದೆ?
ಒಪ್ಪೋ ಎ56ಎಸ್ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಒಳಗೊಂಡಿದೆ. ಇದರೊಂದಿಗೆ ಈ ಬ್ಯಾಟರಿ 10w ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯವನ್ನು ಸಹ ಹೊಂದಿದೆ . ಇನ್ನು ಈ ಸ್ಮಾರ್ಟ್ಫೋನ್ನಲ್ಲಿ ಸೈಡ್ ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಅಳವಡಿಸಲಾಗಿದೆ. ಜೊತೆಗೆ ಈ ಸಾಧನ ಫೇಸ್ ಅನ್ಲಾಕ್ ಅನ್ನು ಸಹ ಬೆಂಬಲಿಸುತ್ತದೆ.
ಕನೆಕ್ಟಿವಿಟಿ ಫೀಚರ್ಸ್
ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, ಯುಎಸ್ಬಿ ಟೈಪ್ ಸಿ ಪೋರ್ಟ್, ಬ್ಲೂಟೂತ್ ವಿ5.1, ವೈ-ಫೈ 5, 3.5 ಎಂಎಂ ಆಡಿಯೋ ಜ್ಯಾಕ್, ಜಿಪಿಎಸ್ ಹೀಗೆ ಅನೇಕ ಫೀಚರ್ಸ್ಗಳನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೊನ್ 5ಜಿ ನೆಟ್ವರ್ಕ್ ಅನ್ನೂ ಬೆಂಬಲಿಸುತ್ತದೆ.
ಬೆಲೆ ಮತ್ತು ಲಭ್ಯತೆ
ಒಪ್ಪೋ ಎ56ಎಸ್ ನ 8 ಜಿಬಿ ರ್ಯಾಮ್ ಮತ್ತು 128 ಜಿಬಿ ಸ್ಟೋರೇಜ್ ಹೊಂದಿದ ಸ್ಮಾರ್ಟ್ಫೋನ್ನ ಬೆಲೆಯು RMB 1099 ಅಂದರೆ ಭಾರತದಲ್ಲಿ ಅಂದಾಜು 13,330 ರೂಪಾಯಿ ನಿಗದಿ ಮಾಡಲಾಗಿದೆ. ಹಾಗೆಯೇ 8 ಜಿಬಿ ರ್ಯಾಮ್ ಮತ್ತು 256 ಜಿಬಿ ಸ್ಟೋರೇಜ್ ಹೊಂದಿದ ಸ್ಮಾರ್ಟ್ಫೋನ್ನ ಬೆಲೆಯು RMB 1299 ಅಂದರೆ ಭಾರತದಲ್ಲಿ ಅಂದಾಜು 15,750 ರೂಪಾಯಿಗಳು ಎಂದು ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್ಫೋನ್ ಬ್ಲೂ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಆದರೆ ಈ ಸ್ಮಾರ್ಟ್ಫೋನ್ ಭಾರತದಲ್ಲಿ ಯಾವಾಗ ಲಾಂಚ್ ಆಗುತ್ತದೆ ಎಂದು ಇನ್ನೂ ಬಹಿರಂಗ ಮಾಡಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ