ಜನಪ್ರಿಯ ಟೆಕ್ನಾಲಜಿ ಕಂಪನಿಯಾಗಿರುವ (Telecom Company) ಸ್ಯಾಮ್ಸಂಗ್ ಭಾರತೀಯ ಮಾರುಕಟ್ಟೆಯಲ್ಲಿ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಮೂಲಕ ಬಹಳಷ್ಟು ಹೆಸರುವಾಸಿಯಾಗಿದೆ. ಇದೀಗ ಸ್ಯಾಮ್ಸಂಗ್ (Samsung) 2023ರಲ್ಲಿ ಹಲವಾರು ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಲು ರೆಡಿಯಾಗಿದೆ. ಸ್ಯಾಮ್ಸಂಗ್ ಕಂಪನಿ 2022ರಲ್ಲಿ ತನ್ನ ಸೀರಿಸ್ನ ಅಡಿಯಲ್ಲಿ ಸಾಕಷ್ಟು ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡಿದೆ. ಸ್ಯಾಮ್ಸಂಗ್ ಕಂಪನಿ ತನ್ನ ವಿಶೇಷ ರೀತಿಯ ಫೀಚರ್ಸ್ ಅನ್ನು ಒಳಗೊಂಡ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಮೂಲಕ ಹೊಸ ಸಂಚಲನವನ್ನೇ ಸೃಷ್ಟಿ ಮಾಡಿದೆ. ಸ್ಯಾಮ್ಸಂಗ್ ತನ್ನ ’ಎ’ ಸೀರಿಸ್ನಲ್ಲಿ (Samsung A Series) ಹಲವು ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ. ಇದೀಗ ಮತ್ತೊಂದು ಮೊಬೈಲ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ.
ಸ್ಯಾಮ್ಸಂಗ್ ಕಂಪನಿ ಇದೀಗ ತನ್ನ ’ಎ’ ಸೀರಿಸ್ನಲ್ಲಿ ನೂತನವಾಗಿ ಸ್ಯಾಮ್ಸಂಗ್ ಗ್ಯಾಲಕ್ಸಿ ಎ14 5ಜಿ ಸ್ಮಾರ್ಟ್ಫೋನ್ ಅನ್ನು ಯುರೋಪ್ನಲ್ಲಿ ಲಾಂಚ್ ಮಾಡಿದೆ. ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಮೊಬೈಲ್ನ ಬೆಲೆ, ಫೀಚರ್ಸ್ ಹೇಗಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಇದರ ಬಗ್ಗೆ ಕಂಪ್ಲೀಟ್ ಮಾಹಿತಿ ಈ ಲೇಖನದಲ್ಲಿದೆ ಓದಿ.
ಸ್ಯಾಮ್ಸಂಗ್ ಗ್ಯಾಲಕ್ಸಿ ಎ14 ಸ್ಮಾರ್ಟ್ಫೋನ್ ಫೀಚರ್ಸ್ ಹೇಗಿದೆ?
ಸ್ಯಾಮ್ಸಂಗ್ ಗ್ಯಾಲಕ್ಸಿ ಎ14 5ಜಿ ಸ್ಮಾರ್ಟ್ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ.
ಇದನ್ನೂ ಓದಿ: ಸ್ಮಾರ್ಟ್ ಟಿವಿ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾಗಿದೆ ಸ್ಯಾಮ್ಸಂಗ್! ಹೇಗಿದೆ ಗೊತ್ತಾ ಫೀಚರ್ಸ್?
ಕ್ಯಾಮೆರಾ ಫೀಚರ್ಸ್
ಸ್ಯಾಮ್ಸಂಗ್ ಕಂಪನಿಯ ಸ್ಮಾರ್ಟ್ಫೋನ್ಗಳು ಎಲ್ಲವೂ ಅದರ ಕ್ಯಾಮೆರಾ ಮೂಲಕವೇ ಹೆಚ್ಚು ಜನಪ್ರಿಯತೆಯನ್ನು ಪಡೆದಿದೆ. ಆದೇ ರೀತಿ ಈ ಸ್ಯಾಮ್ಸಂಗ್ ಗ್ಯಾಲಕ್ಸಿ ಎ14 5ಜಿ ಸ್ಮಾರ್ಟ್ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಬ್ಯಾಟರಿ ಹಾಗು ಇತರೆ ಫೀಚರ್ಸ್
ಸ್ಯಾಮ್ಸಂಗ್ ಗ್ಯಾಲಕ್ಸಿ ಎ14 5ಜಿ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್ಫೋನ್ನಲ್ಲಿ 15W ಫಾಸ್ಟ್ ಚಾರ್ಜಿಂಗ್ ಫೀಚರ್ ಅನ್ನು ಅಳವಡಿಸಲಾಗಿದೆ.
ಕನೆಕ್ಟಿವಿಟಿ ಫೀಚರ್ಸ್
ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ 4ಜಿ ಎಲ್ಟಿಇ, ವೈ-ಫೈ, ಬ್ಲೂಟೂತ್, ಯುಎಸ್ಬಿ ಟೈಪ್ ಸಿ, ಮತ್ತು 3.5mm ಹೆಡ್ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.
ಪ್ರೊಸೆಸರ್ ಸಾಮರ್ಥ್ಯ
ಸ್ಯಾಮ್ಸಂಗ್ ಗ್ಯಾಲಕ್ಸಿ ಎ14 5ಜಿ ಸ್ಮಾರ್ಟ್ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್ಫೋನ್ ಆಂಡ್ರಾಯ್ಡ್ 13 ಓಎಸ್ ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 6 ಜಿಬಿ ರ್ಯಾಮ್ ಮತ್ತು 128 ಜಿಬಿ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಎಸ್ಡಿ ಕಾರ್ಡ್ ಅಳವಡಿಸುವ ಮೂಲಕ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು 1TB ವರೆಗೂ ವಿಸ್ತರಿಸಬಹುದಾದ ಅವಕಾಶವನ್ನು ಹೊಂದಿದೆ.
ಬೆಲೆ ಮತ್ತು ಲಭ್ಯತೆ
ಸ್ಯಾಮ್ಸಂಗ್ ಗ್ಯಾಲಕ್ಸಿ ಎ14 5ಜಿ ಸ್ಮಾರ್ಟ್ಫೋನ್ ಭಾರತದಲ್ಲಿ 4ಜಿಬಿ ರ್ಯಾಮ್ + 64ಜಿಬಿ ಮತ್ತು 6ಜಿಬಿ ರ್ಯಾಮ್ + 128ಜಿಬಿ ಇಂಟರ್ನಲ್ ಸ್ಟೋರೇಜ್ ಹೊಂದಿದ ಮೊಬೈಲ್ ಅನ್ನು 12,999 ರೂಪಾಯಿಗೆ ಪಡೆಯಬಹುದು. ಹಾಗೂ 4ಜಿಬಿ ರ್ಯಾಮ್+ 128ಜಿಬಿ ಸ್ಟೋರೇಜ್ ಬೆಲೆ ಯುರೋಪ್ನಲ್ಲಿ $200 ಅಂದರೆ ಭಾರತದಲ್ಲಿ ಅಂದಾಜು 16,500 ರೂಪಾಯಿ ಆಗಿದೆ. ಹಾಗೆಯೇ 6ಜಿಬಿ ರ್ಯಾಮ್ + 128ಜಿಬಿ ವೇರಿಯಂಟ್ ದರವು EUR 229 ಅಂದರೆ ಭಾರತದಲ್ಲಿ ಅಂದಾಜು 20,100 ರೂ. ಆಗಿದೆ. ಇನ್ನು ಈ ಫೋನ್ ಬ್ಲ್ಯಾಕ್, ಸಿಲ್ವರ್, ಡಾರ್ಕ್ ರೆಡ್ ಹಾಗೂ ಲೈಟ್ ಗ್ರೀನ್ ಬಣ್ಣಗಳಲ್ಲಿ ಖರೀದಿಸಬಹುದಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ