ಮೊಬೈಲ್ ಮಾರುಕಟ್ಟೆಯಲ್ಲಿ ಹಲವಾರು ಸ್ಮಾರ್ಟ್ಫೋನ್ಗಳು (Smartphones) ಬಿಡುಗಡೆಯಾಗಿದೆ. ಆದರೆ ಇವೆಲ್ಲವೂ ಒಂದಕ್ಕಿಂತ ಒಂದು ವಿಶೇಷ ಫೀಚರ್ಸ್ಗಳನ್ನು ಒಳಗೊಂಡಂತಹ ಮೊಬೈಲ್ಗಳಾಗಿವೆ. ಈ ಮಧ್ಯೆ ಟೆಕ್ನೋ ಕಂಪನಿಯಿಂದ (Techno Company) ಮಾರುಕಟ್ಟೆಗೆ ಹೊಸ ಸ್ಮಾರ್ಟ್ಫೋನ್ ಅನ್ನು ಪರಿಚಯಿಸಿತ್ತು. ಇದೀಗ ಈ ಸ್ಮಾರ್ಟ್ಫೋನ್ನ ಪ್ರೀ ಬುಕಿಂಗ್ ಸೇಲ್ (Pre-Booking Sale) ಆರಂಭವಾಗಿದೆ. ಟೆಕ್ನೋ ಫ್ಯಾಂಟಮ್ ಎಕ್ಸ್2 (Techno Phantom X2) ಎಂಬ ಸ್ಮಾರ್ಟ್ಫೋನ್ ಅನ್ನು ಗ್ರಾಹಕರು ಜನವರಿ 2 ರಂದು ಮಧ್ಯಾಹ್ನ 12 ಗಂಟೆಯಿಂದ ಪ್ರೀ ಬುಕಿಂಗ್ ಮಾಡುವ ಅವಕಾಶವಿದೆ. ಇದರಲ್ಲಿ ಹಲವಾರು ಆಫರ್ಸ್ಗಳು ಕೂಡ ಲಭ್ಯವಿದೆ. ಟೆಕ್ನೋ ಕಂಪನಿ ಈ ಹಿಂದಿನ ವರ್ಷದಲ್ಲಿ ಈ ಸ್ಮಾರ್ಟ್ಫೋನ್ನ ಫೀಚರ್ಸ್ ಬಗ್ಗೆ, ಬಿಡುಗಡೆಯ ಬಗ್ಗೆ ಮಾಹಿತಿಯನ್ನು ನೀಡಿತ್ತು.
ಟೆಕ್ನೋ ಫ್ಯಾಂಟಮ್ ಎಕ್ಸ್2 ಸ್ಮಾರ್ಟ್ಫೋನ್ ಅನ್ನು ಹೊಸ ವರ್ಷದ ಆರಂಭದಲ್ಲೇ ಪ್ರೀ ಬುಕಿಂಗ್ ಅವಕಾಶವನ್ನು ಕಲ್ಪಿಸಿದೆ. ಈ ಮೂಲಕ ಸ್ಮಾರ್ಟ್ಫೋನ್ ಅನ್ನು ಖರೀದಿಸುವ ಪ್ಲ್ಯಾನ್ನಲ್ಲಿರುವವರಿಗೆ ಇದು ಉತ್ತಮ ಆಯ್ಕೆಯಾಗಿದೆ. ಇನ್ನು ಈ ಸ್ಮಾರ್ಟ್ಪೋನ್ ಅನ್ನು ಅಮೆಜಾನ್ನಲ್ಲಿ ಪ್ರೀ ಬುಕಿಂಗ್ ಮಾಡಬಹುದಾಗಿದೆ.
ಟೆಕ್ನೋ ಫ್ಯಾಂಟಮ್ ಎಕ್ಸ್2 ಫೀಚರ್ಸ್
ಟೆಕ್ನೋ ಫ್ಯಾಂಟಮ್ ಎಕ್ಸ್2 ಸ್ಮಾರ್ಟ್ಫೋನ್ 1,080 x 2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8 ಇಂಚಿನ ಫುಲ್ ಹೆಚ್ಡಿ + ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ. ಇದು ಸೂಪರ್ ಅಮೋಲ್ಡ್ ಕರ್ವ್ ಡಿಸ್ಪ್ಲೇಯನ್ನು ಒಳಗೊಂಡಿದೆ. ಇನ್ನು ಈ ಡಿಸ್ಪ್ಲೇಯ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಸೇರಿಸಲಾಗಿದೆ.
ಇದನ್ನೂ ಓದಿ: ಭಾರತೀಯರಲ್ಲಿ ಕ್ಷಮೆ ಕೇಳಿದ ವಾಟ್ಸಾಪ್! ಕಾರಣವೇನು ಗೊತ್ತಾ?
ಕ್ಯಾಮೆರಾ ಫೀಚರ್ಸ್ ಹೇಗಿದೆ?
ಟೆಕ್ನೋ ಫ್ಯಾಂಟಮ್ ಎಕ್ಸ್2 ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ 120 ಡಿಗ್ರಿ ಕ್ಷೇತ್ರವನ್ನು ಹೊಂದಿದೆ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಪಿ ಕ್ಯಾಮೆರಾವನ್ನು ಹೊಂದಿದೆ.
ಬ್ಯಾಟರಿ ಫೀಚರ್ಸ್
ಟೆಕ್ನೋ ಫ್ಯಾಂಟಮ್ ಎಕ್ಸ್2 ಸ್ಮಾರ್ಟ್ಫೋನ್ 5160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 45W ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಹೊಂದಿರಲಿದೆ.
ಇತರೆ ಫೀಚರ್ಸ್
ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಎಲ್ಟಿಇ, ಜಿಪಿಎಸ್, ಎಫ್ಎಂ ರೇಡಿಯೋ, ಬ್ಲೂಟೂತ್ ಮತ್ತು ಯುಎಸ್ಬಿ ಟೈಪ್ ಸಿ ಪೋರ್ಟ್ ಈ ರೀತಿಯ ಹಲವು ಫೀಚರ್ಸ್ ಅನ್ನು ಒಳಗೊಂಡಿದೆ. ಇದು ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ.
ಲಭ್ಯತೆ
ಟೆಕ್ನೋ ಫ್ಯಾಂಟಮ್ ಎಕ್ಸ್2 ಸ್ಮಾರ್ಟ್ಫೋನ್ ಎರಡು ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. ಅವುಗಳು ಕ್ರಮವಾಗಿ ಮೂನ್ಲೈಟ್ ಸಿಲ್ವರ್ ಮತ್ತು ಸ್ಟಾರ್ಡಸ್ಟ್ ಗ್ರೇ ಆಗಿವೆ. ಈ ಫೋನ್ 164.6 × 72.7 × 8.9mm ಅಳತೆ ಮತ್ತು 210 ಗ್ರಾಂ ತೂಕವನ್ನು ಹೊಂದಿರುತ್ತದೆ.
ಪ್ರೊಸೆಸರ್ ಸಾಮರ್ಥ್ಯ
ಟೆಕ್ನೋ ಫ್ಯಾಂಟಮ್ ಎಕ್ಸ್2 ಸ್ಮಾರ್ಟ್ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 ಜಿಬಿ ರ್ಯಾಮ್ ಮತ್ತು 256 ಜಿಬಿ ಇಂಟರ್ನಲ್ ಸ್ಟೋರೇಜ್ ಅನ್ನು ಒಳಗೊಂಡಿದೆ.
ಅಮೆಜಾನ್ನಲ್ಲಿ ಲಭ್ಯ
ಟೆಕ್ನೋ ಫ್ಯಾಂಟಮ್ ಎಕ್ಸ್2 ಸ್ಮಾರ್ಟ್ಫೋನ್ ಖರೀದಿಸಲು ಇಚ್ಛಿಸುವವರು ಅಮೆಜಾನ್ ನಲ್ಲಿ ಪ್ರೀ-ಬುಕ್ಕಿಂಗ್ ಮಾಡಬಹುದಾಗಿದೆ. ಇದು ಇದೇ 2023 ಜನವರಿ 2 ರಿಂದ ಮಧ್ಯಾಹ್ನ 12 ಗಂಟೆಯಿಂದ ಪ್ರಾರಂಭವಾಗಲಿದೆ. ಈ ಮುಂಗಡ ಬುಕಿಂಗ್ ಮೂಲಕ ಖರೀದಿಸುವವರಿಗೆ ಟೆಕ್ನೋ ಫ್ಯಾಂಟಮ್ ಎಕ್ಸ್3 ಅಪ್ಗ್ರೇಡ್ ಕೂಡ ಲಭ್ಯವಾಗಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ