• Home
  • »
  • News
  • »
  • tech
  • »
  • Samsung A24 Smartphone: ಸ್ಯಾಮ್​ಸಂಗ್​ ಕಂಪೆನಿಯಿಂದ ಧೂಳೆಬ್ಬಿಸುವ ಸ್ಮಾರ್ಟ್​​ಫೋನ್​ ಬಿಡುಗಡೆ! ಹೇಗಿದೆ ಗೊತ್ತಾ ಫೀಚರ್ಸ್​

Samsung A24 Smartphone: ಸ್ಯಾಮ್​ಸಂಗ್​ ಕಂಪೆನಿಯಿಂದ ಧೂಳೆಬ್ಬಿಸುವ ಸ್ಮಾರ್ಟ್​​ಫೋನ್​ ಬಿಡುಗಡೆ! ಹೇಗಿದೆ ಗೊತ್ತಾ ಫೀಚರ್ಸ್​

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎ24 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎ24 ಸ್ಮಾರ್ಟ್‌ಫೋನ್‌

ಜನಪ್ರಿಯ ಮೊಬೈಲ್ ಕಂಪೆನಿಯಾಗಿರುವ ಸ್ಯಾಮ್​ಸಂಗ್ ಇದೀಗ ಮಾರುಕಟ್ಟೆಗೆ ಸ್ಯಾಮ್​ಸಂಗ್​ ಎ24 ಎಂಬ ಸ್ಮಾರ್ಟ್​ಫೋನ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಇದು ಈ ವರ್ಷ ಮಾರುಕಟ್ಟೆಯಲ್ಲಿ ಹೊಸ ರೀತಿಯ ಮಾರಾಟವನ್ನು ಸೃಷ್ಟಿಸಲಿದೆ ಎಂದು ಕಂಪೆನಿ ಹೇಳಿದೆ. ಹಾಗಿದ್ರೆ ಈ ಸ್ಮಾರ್ಟ್​​ಫೋನ್​ ಫೀಚರ್ಸ್​, ಬೆಲೆ ಹೇಗಿದೆ ಎಂಬುದನ್ನು ಈ ಲೇಖನದ ಮೂಲಕ ತಿಳಿಯಿರಿ.

ಮುಂದೆ ಓದಿ ...
  • Share this:

    ಮೊಬೈಲ್​ ಮಾರುಕಟ್ಟೆಯಲ್ಲಿ (Mobile Market) ಹಲವಾರು ಸ್ಮಾರ್ಟ್​​ಫೋನ್​ ಕಂಪೆನಿಗಳು ಹೊಸ ಹೊಸ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಮೂಲಕ ಬಹಳಷ್ಟು ಜನಪ್ರಿಯತೆಯನ್ನು ಪಡೆದಿವೆ. ಜನರು ಕೂಡ ಕೆಲವೊಂದು ಕಂಪೆನಿಗಳ ಸ್ಮಾರ್ಟ್​​ಫೋನ್​ಗಳ (Smartphones) ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿರುತ್ತಾರೆ. ಈ ಸಾಲಿನಲ್ಲಿ ಸ್ಯಾಮ್​ಸಂಗ್​ ಕಂಪೆನಿ (Samsung Company) ಸಹ ಸೇರಿದೆ ಎಂದರೆ ತಪ್ಪಾಗಲಾರದು. ಸ್ಯಾಮ್​ಸಂಗ್​ ಕಂಪೆನಿ ಸ್ಮಾರ್ಟ್​​ಫೋನ್ ವಲಯದಲ್ಲಿ ಭಾರೀ ಸದ್ದು ಮಾಡಿರುವಂತಹ ಕಂಪೆನಿಯಾಗಿದೆ. ಇದರ ಫೀಚರ್ಸ್​ ಮೂಲಕವೇ ಎಲ್ಲರನ್ನೂ ತನ್ನ ಆಕರ್ಷಿಸಿಕೊಂಡಿದೆ. ಸ್ಯಾಮ್​ಸಂಗ್​ ಕಂಪೆನಿ ಹಿಂದಿನಿಂದಲೂ ಗುಣಮಟ್ಟದ ಫೀಚರ್ಸ್​​ಗಳುಲ್ಲ ಸ್ಮಾರ್ಟ್​​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಇದೀಗ ತನ್ನ ಗ್ರಾಹಕರಿಗೆ ಕಂಪೆನಿ ಗುಡ್​ನ್ಯೂಸ್​ ಒಂದನ್ನು ನೀಡಿದೆ. ಅದೇನೆಂದರೆ ಸ್ಯಾಮ್​ಸಂಗ್​ ಕಂಪೆನಿಯಿಂದ ಹೊಸ ಸ್ಮಾರ್ಟ್​​ಫೋನ್​ ಬಿಡುಗಡೆಯಾಗುತ್ತಿದೆ.


    ಹೌದು, ಜನಪ್ರಿಯ ಮೊಬೈಲ್ ಕಂಪೆನಿಯಾಗಿರುವ ಸ್ಯಾಮ್​ಸಂಗ್ ಇದೀಗ ಮಾರುಕಟ್ಟೆಗೆ ಸ್ಯಾಮ್​ಸಂಗ್​ ಎ24 ಎಂಬ ಸ್ಮಾರ್ಟ್​ಫೋನ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಇದು ಈ ವರ್ಷ ಮಾರುಕಟ್ಟೆಯಲ್ಲಿ ಹೊಸ ರೀತಿಯ ಮಾರಾಟವನ್ನು ಸೃಷ್ಟಿಸಲಿದೆ ಎಂದು ಕಂಪೆನಿ ಹೇಳಿದೆ. ಹಾಗಿದ್ರೆ ಈ ಸ್ಮಾರ್ಟ್​​ಫೋನ್​ ಫೀಚರ್ಸ್​, ಬೆಲೆ ಹೇಗಿದೆ ಎಂಬುದನ್ನು ಈ ಲೇಖನದ ಮೂಲಕ ತಿಳಿಯಿರಿ.


    ಫೀಚರ್ಸ್​​ ಬಗ್ಗೆ ನಿರೀಕ್ಷೆ


    ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎ24 ಸ್ಮಾರ್ಟ್‌ಫೋನ್‌ 4ಜಿ ನೆಟ್​ವರ್ಕ್​ ಅನ್ನು ಬೆಂಬಲಿಸುವ ಸ್ಮಾರ್ಟ್​ಫೋನ್​ ಎಂದು ವರದಿಯಾಗಿದೆ.ಇನ್ನು ಈ ಸ್ಮಾರ್ಟ್​ಫೋನ್​ನ ಡಿಸ್​ಪ್ಲೇ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದು 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲ್ಡ್​​ ಡಿಸ್‌ಪ್ಲೇಯನ್ನು ಹೊಂದಿರಬಹುದು ಎನ್ನಲಾಗಿದೆ. ಇನ್ನು ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಬಹುದು. ಅಲ್ಲದೆ ಇದು 90Hz ರಿಫ್ರೆಶ್ ರೇಟ್‌ ಬೆಂಬಲಿಸಬಹುದು ಎಂದು ನಿರೀಕ್ಷಿಸಲಾಗಿದೆ.


    ಇದನ್ನೂ ಓದಿ: ಕೇವಲ 10 ಸಾವಿರ ರೂಪಾಯಿಗೆ ಖರೀದಿಸಿ ರೆಡ್​ಮಿ ನೋಟ್​ 12 ಸೀರಿಸ್​ನ ಸ್ಮಾರ್ಟ್​​ಫೋನ್!


    ಕ್ಯಾಮೆರಾ ಫಿಚರ್ಸ್​ ಹೇಗಿರಲಿದೆ?


    ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎ24 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಬಹುದು ಎಂದು ನಿರೀಕ್ಷಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿರುವ ಸಾಧ್ಯತೆಯಿದೆ ಎನ್ನಲಾಗಿದೆ, ಇದಲ್ಲದೆ ಸೆಲ್ಫಿಗಾಗಿ ಮತ್ತು ವಿಡಿಯೋ ಕಾಲ್​ಗಾಗಿ 16 ಮೆಗಾಪಿಕ್ಸೆಲ್​ ಸೆನ್ಸಾರ್​ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ ಎನ್ನಲಾಗಿದೆ.


    ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎ24 ಸ್ಮಾರ್ಟ್‌ಫೋನ್‌


    ಪ್ರೊಸೆಸರ್ ಸಾಮರ್ಥ್ಯ


    ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎ24 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 ಎಸ್​​ಓಸಿ ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿರಬಹುದು ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್​ಫೋನ್​ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಸ್ಯಾಮ್​ಸಂಗ್ ಗ್ಯಾಲಕ್ಸಿ ಎ24 ಸ್ಮಾರ್ಟ್​​ಫೋನ್​ 6ಜಿಬಿ ರ್‍ಯಾಮ್ ಮತ್ತು 128 ಜಿಬಿ ಇಂಟರ್ನಲ್​ ಸ್ಟೋರೇಜ್‌ ಸಾಮರ್ಥ್ಯದೊಂದಿಗೆ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸಿದ್ದಾರೆ. ಜೊತೆಗೆ ಮೆಮೊರಿ ಕಾರ್ಡ್‌ ಸ್ಲಾಟ್​​ ಅನ್ನು ಇದು ಹೊಂದಿರಲಿದ್ದು, ಈ ಮೂಲಕ 1 ಟಿಬಿ ವರೆಗೆ ಸ್ಟೋರೇಜ್​ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶ ನೀಡಲಿದೆ.


    ಬ್ಯಾಟರಿ ಫೀಚರ್ಸ್​


    ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎ24 ಸ್ಮಾರ್ಟ್‌ಫೋನ್‌ 4,000mAh ಬ್ಯಾಟರಿ ಬ್ಯಾಕಪ್​ ಅನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಈ ಬ್ಯಾಟರಿ 15W ವೇಗದ ಚಾರ್ಜಿಂಗ್‌ ಸಾಮರ್ಥ್ಯವನ್ನು ಹೊಂದಿರುವ ಸಾಧ್ಯತೆ ಇದೆ.


    ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎ24 ಸ್ಮಾರ್ಟ್‌ಫೋನ್‌


    ಇತರೆ ಫೀಚರ್ಸ್​


    ಇನ್ನು ಈ ಸ್ಮಾರ್ಟ್​​ಫೋನ್​ನ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಅನ್ನು ಬೆಂಬಲಿಸಬಹುದು.


    ಇನ್ನು ಈ ಸ್ಮಾರ್ಟ್​​ಫೋನ್​ ಮಾರುಕಟ್ಟೆಗೆ ಬಜೆಟ್​ ಬೆಲೆಯಲ್ಲಿ ಬರುವ ಸಾಧ್ಯತೆಯಿದೆ. ಹಾಗೂ ಇದರ ಬಿಡುಗಡೆಯ ದಿನಾಂಕವನ್ನು ಕಂಪೆನಿ ಇದುವರೆಗೆ ಯಾವುದೇ ಮಾಹಿತಿಯನ್ನು ಬಹಿರಂಗ ಪಡಿಸಿಲ್ಲ. ಹಾಗೇ ಈ ಸ್ಮಾರ್ಟ್​​ಫೋನ್​ನ ವಿನ್ಯಾಸ ಮತ್ತು ಫೀಚರ್ಸ್​ನಲ್ಲಿ ಇನ್ನಷ್ಟು ಬದಲಾಗಬಹುದು ಎನ್ನಲಾಗಿದೆ.

    Published by:Prajwal B
    First published: