ಇತ್ತೀಚೆಗೆ ಸ್ಮಾರ್ಟ್ಫೋನ್ಗಳ (Smartphone) ಬಳಕೆ ಹೆಚ್ಚಾಗ್ತಾಇದೆ. ಸ್ಮಾರ್ಟ್ಫೋನ್ಎಂಬುದು ಈಗಿನ ಜೀವನ ಮಾದರಿಗೆ ಪ್ರಮುಖ ಅಂಶವಾಗಿಬಿಟ್ಟಿದೆ. ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಸ್ಮಾರ್ಟ್‌ಫೋನ್ ಕಂಪನಿಗಳು ಹೊಸ ಹೊಸ ಫೀಚರ್ಸ್ (Features) ಹೊಂದಿದ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತಿದೆ. ಈ ವರ್ಷದಲ್ಲಿ ಸ್ಮಾರ್ಟ್ಫೋನ್ಗಳು ಕೂಡ ಬಹಳಷ್ಟು ಬಿಡುಗಡೆಯಾಗಿದ್ದು ಇವೆಲ್ಲವೂ ಕೂಡ ಮಾರುಕಟ್ಟೆಯಲ್ಲಿ ಅದರದೇ ಆದಂತಹ ಸ್ಥಾನವನ್ನು ಹೊಂದಿದೆ. ಇದೀಗ ಜನಪ್ರಿಯ ಸ್ಮಾರ್ಟ್‌ಫೋನ್ ಕಂಪನಿಯಾದ ಸ್ಯಾಮ್‌ಸಂಗ್‌ನ ಹೊಸ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್04 (Samsung Galaxy M04) ಸ್ಮಾರ್ಟ್‌ಫೋನ್‌ನ ಫಸ್ಟ್ ಸೇಲ್ ಅಮೆಜಾನ್ನಲ್ಲಿ ಆರಂಭವಾಗಿದೆ. ಕೆಲದಿನಗಳವರೆಗೆ ಗ್ರಾಹಕರು ಅಮೆಜಾನ್ನಲ್ಲಿ (Amazon) ಬಹಳಷ್ಟು ಆಫರ್ನಲ್ಲಿ ಈ ಸ್ಮಾರ್ಟ್‌ಫೋನ್ ಅನ್ನು ಖರೀದಿ ಮಾಡಬಹುದಾಗಿದೆ.
ಸ್ಯಾಮ್ಸಂಗ್ನಿಂದ ಬಿಬಡುಗಡೆಯಾದಂತಹ ಗ್ಯಾಲಕ್ಸಿ ಎಮ್04 ಸ್ಮಾರ್ಟ್‌ಫೋನ್ ಇದೇ ಡಿಸೆಂಬರ್ 16 ರಿಂದ ಅಮೆಜಾನ್ನಲ್ಲಿ ಖರೀದಿಗೆ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ ಬಹಳಷ್ಟು ಫೀಚರ್ಸ್ ಅನ್ನು ಹೊಂದಿದ್ದು ಇಕಾಮರ್ಸ್ ವೆಬ್ಸೈಟ್ನಲ್ಲಿ ವಿವಿಧ ಆಫರ್ಸ್ನೊಂದಿಗೆ ಪಡೆಯಬಹುದಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್04 ಸ್ಮಾರ್ಟ್‌ಫೋನ್ ಸ್ಪೆಷಲ್ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್04 ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ನೀಡುತ್ತದೆ. ಇನ್ನು ಡಿಸ್‌ಪ್ಲೇ ರಚನೆಯು 20:9 ಆಗಿದ್ದು, 270 ಪಿಪಿಐ ಪಿಕ್ಸೆಲ್ಅನ್ನು ಒಳಗೊಂಡಿದೆ. ಇದು ವಾಟರ್ ಡ್ರಾಪ್ ಶೈಲಿಯ ನಾಚ್ ಟಚ್ ಡಿಸ್‌ಪ್ಲೇಯನ್ನು ಹೊಂದಿದೆ.
ಇದನ್ನೂ ಓದಿ: ರಿಯಲ್ಮಿ 10 ಪ್ರೋ ಸ್ಮಾರ್ಟ್‌ಫೋನ್ ಸೇಲ್ ಆರಂಭ, ಗ್ರಾಹಕರು ಕೊಟ್ಟ ಮಾರ್ಕ್ಸ್ ಎಷ್ಟು?
ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್04 ಸ್ಮಾರ್ಟ್‌ಫೋನ್‌ನ ಕ್ಯಾಮೆರಾ ಸೆಟಪ್ ಬಗ್ಗೆ ಹೇಳುವುದಾದರೆ ಇದರಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಅಳವಡಿಸಲಾಗಿದೆ. ಇದರ ಜೊತೆಗ ಎಲ್‌ಇಡಿ ಫ್ಲ್ಯಾಷ್ ಕೂಡ ಅಳವಡಿಸಿದ್ದಾರೆ. ಇನ್ನು ಈ ಸ್ಮಾರ್ಟ್ಫೋನ್ನಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಮುಂಭಾಗದಲ್ಲಿ ಆ್ಯಡ್ ಮಾಡಿದ್ದಾರೆ.
ಬ್ಯಾಟರಿ ಫೀಚರ್ಸ್
ಸ್ಯಾಮ್‌ಸಂಗ್‌ನ ಬ್ಯಾಟರಿ ಫೀಚರ್ಸ್ ಪ್ರತಿಯೊಂದರಲ್ಲೂ ಗುಣಮಟ್ಟದ್ದಾಗಿದೆ. ಆದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್04 ಸ್ಮಾರ್ಟ್ಫೋನ್ನಲ್ಲಿ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಿದ್ದಾರೆ. ಈ ಫೋನ್ ವೇಗದ ಚಾರ್ಜಿಂಗ್ ಬೆಂಬಲ ನೀಡುವ ಬಗ್ಗೆ ಫೀಚರ್ ಅನ್ನು ಯಾವುದೇ ರೀತಿಯಲ್ಲಿ ಬಹಿರಂಗ ಪಡಿಸಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್‌ನ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಬೆಂಬಲವನ್ನು ಹೊಂದಿದೆ|
ಪ್ರೊಸೆಸರ್ ಸಾಮರ್ಥ್ಯ ಹೇಗಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್04 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ ಪಿ35 SoC ಪ್ರೊಸೆಸರ್ ನಿಂದ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಸ್ಕಿನ್ ಜೊತೆಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4ಜಿಬಿ ರ್‍ಯಾಮ್ ಮತ್ತು 64ಜಿಬಿ ಸ್ಟೋರೇಜ್ ಹೊಂದಿದೆ. ಸ್ಯಾಮ್‌ಸಂಗ್‌ನ ಈ ಸ್ಮಾರ್ಟ್‌ಫೋನ್ ರ್‍ಯಾಮ್ ಪ್ಲಸ್ ಫೀಚರ್ಸ್ ಒಳಗೊಂಡಿದ್ದು,ರ್‍ಯಾಮ್ ಅನ್ನು 8ಜಿಬಿ ವರೆಗೆ ವಿಸ್ತರಿಸಬಹುದು. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್04 ಸ್ಮಾರ್ಟ್‌ಫೋನ್ 4ಜಿಬಿ ರ್‍ಯಾಮ್ ಮತ್ತು 64ಜಿಬಿ ಸ್ಟೋರೇಜ್ ಹೊಂದಿದ ಮೊಬೈಲ್ 8499 ರೂಪಾಯಿ ಬೆಲೆಯನ್ನು ಹೊಂದಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್04 ಸ್ಮಾರ್ಟ್‌ಫೋನ್ 4GB + 128ಜಿಬಿ ಹೊಂದಿದ ಸ್ಮಾರ್ಟ್‌ಫೋನ್ ಅನ್ನು9499ರೂಪಾಯಿಗೆ ಖರೀದಿ ಮಾಡ್ಬಹುದು.. ಇನ್ನು ಈ ಸ್ಮಾರ್ಟ್‌ಫೋನ್ ಅಮೆಜಾನ್ ನಲ್ಲಿ ಡಿಸೆಂಬರ್ 16ರಂದು ಮಾರಾಟ ಶುರು ಮಾಡಿದೆ. ನೀಲಿ, ಗೋಲ್ಡ್, ಮಿಂಟ್ ಗ್ರೀನ್ ಮತ್ತು ವೈಟ್ ಬಣ್ಣದ ಆಯ್ಕೆಗಳಲ್ಲಿ ಖರೀದಿ ಮಾಡ್ಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ