ಜನಪ್ರಿಯ ಸ್ಮಾರ್ಟ್ಫೋನ್ ಕಂಪನಿಯಾಗಿರುವ (Smartphone Company) ವಿವೋ ಜಾಗತಿಕ ಮಾರುಕಟ್ಟೆಯಲ್ಲಿ ಈ ಬಾರಿ ಒಂದರ ಮೇಲೊಂದರಂತೆ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತಿತ್ತು. ವಿವೋ ಕಂಪನಿ (Vivo Company) ತನ್ನ ವಿಶಿಷ್ಟ ಫೀಚರ್ಸ್ಗಳನ್ನೊಳಗೊಂಡ ಮೊಬೈಲ್ ಅನ್ನು ಬಿಡುಗಡೆ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ತನ್ನದೇ ಆದ ಸ್ಥಾನವನ್ನು ಕಾಯ್ದುಕೊಂಡಿದೆ. ಒಂದು ಕಾಲದಲ್ಲಿ ವಿವೋ ಅಂದರೆ ಸಾಕು ಅದರೆ ಕ್ಯಾಮೆರಾ ಸೆಟಪ್ (Camera Setup) ಸೂಪರ್ ಎಂದು ಹೇಳುವವರೇ ಹೆಚ್ಚು. ಸದ್ಯ ಇದೀಗ ಮಾರುಕಟ್ಟೆಗೆ ವಿವೋ ಕಂಪನಿ ವಿವೋ ಎಸ್16 ಸೀರಿಸ್ನಲ್ಲಿ (Vivo S16 Series) ಮೂರು ಹೊಚ್ಚಹೊಸ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿದೆ. ಇದು ಮಾರುಕಟ್ಟೆಯಲ್ಲಿ ಬಹಳಷ್ಟು ಸಂಚಲನ ಮೂಡಿಸಲಿದ್ದು, ಗ್ರಾಹಕರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗುತ್ತದೆ ಎಂದು ಕಂಪನಿ ಹೇಳಿದೆ.
ಹೌದು, ವಿವೋ ಕಂಪನಿ ಇದುವರೆಗೆ ಸಾಕಷ್ಟು ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿದೆ. ಸದ್ಯ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿರುವ ಸ್ಮಾರ್ಟ್ಫೋನ್ಗಳೆಂದರೆ ಅದು ವಿವೋ ಕಂಪನಿಯ ವಿವೋ ಎಸ್16 ಸೀರಿಸ್ನ ಸ್ಮಾರ್ಟ್ಫೋನ್ಗಳು. ಈ ಸೀರಿಸ್ನ ಅಡಿಯಲ್ಲಿ ವಿವೋ ಎಸ್16, ವಿವೋ ಎಸ್16 ಪ್ರೋ ಮತ್ತು ವಿವೋ ಎಸ್16ಇ ಎಂಬ ಮೂರು ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿದೆ.
ವಿವೋ ಎಸ್16 ಸ್ಮಾರ್ಟ್ಫೋನ್
ಈ ಸ್ಮಾರ್ಟ್ಫೋನ್ 6.78 ಇಂಚಿನ ಫುಲ್ ಹೆಚ್ಡಿ ಪ್ಲಸ್ ಕರ್ವ್ಡ್ ಅಮೋಲ್ಡ್ ಡಿಸ್ಪ್ಲೇ ಹೊಂದಿದೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 870 SoC ಪ್ರೊಸೆಸರ್ನಲ್ಲಿ ಇದು ಕಾರ್ಯನಿರ್ವಹಿಸಲಿದೆ. ಹಾಗೆಯೇ 12ಜಿಬಿ ರ್ಯಾಮ್ ಮತ್ತು 256ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.
ಇದನ್ನೂ ಓದಿ: ವಾಟ್ಸಪ್ ಐಕಾನ್ ಮೇಲೆ ಕ್ರಿಸ್ಮಸ್ ಟೋಪಿ ಹಾಕ್ಬೇಕಾ? ಇಲ್ಲಿದೆ ಟ್ರಿಕ್ಸ್
ಇನ್ನು ಇದರ ಕ್ಯಾಮೆರಾ ಫೀಚರ್ಸ್ ಬಗ್ಗೆ ಮಾತನಾಡುವುದಾದರೆ ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 64ಎಮ್ಪಿ ಸೆನ್ಸಾರ್, ಎರಡನೇ ಕ್ಯಾಮೆರಾ 8ಎಮ್ಪಿ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2ಎಮ್ಪಿ ಮ್ಯಾಕ್ರೋ ಯೂನಿಟ್ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಾಗಿ ಮತ್ತು ವಿಡಿಯೋ ಕಾಲ್ಗಾಗಿ 50ಎಮ್ಪಿ ಸೆನ್ಸಾರ್ ಕ್ಯಾಮೆರಾವನ್ನು ಒಳಗೊಂಡಿದೆ.
ವಿವೋ ಎಸ್16 ಪ್ರೋ ಸ್ಮಾರ್ಟ್ಫೋನ್
ಈ ಸ್ಮಾರ್ಟ್ಫೋನ್ ಕೂಡ 6.78 ಇಂಚಿನ ಫುಲ್ ಹೆಚ್ಡಿ ಪ್ಲಸ್ ಕರ್ವ್ಡ್ ಅಮೋಲ್ಡ್ ಡಿಸ್ಪ್ಲೇಯನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್ನೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಆಧಾರಿತ OriginOS 3.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ 12ಜಿಬಿ ರ್ಯಾಮ್ ಮತ್ತು 512ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ವಿವೋ ಎಸ್16 ಪ್ರೋ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಎಮ್ಪಿ ಸೆನ್ಸಾರ್ ಹೊಂದಿದೆ. ಇದಲ್ಲದೆ 50ಎಮ್ಪಿ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿರಲಿದೆ.
ವಿವೋ ಎಸ್16ಇ ಸ್ಮಾರ್ಟ್ಫೋನ್
ವಿವೋ ಎಸ್16ಇ ಸ್ಮಾರ್ಟ್ಫೋನ್ 120Hz ರಿಫ್ರೆಶ್ ರೇಟ್ ಬೆಂಬಲಿಸುವ 6.62 ಇಂಚಿನ ಫುಲ್ ಹೆಚ್ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಸ್ಯಾಮ್ಸಂಗ್ ಎಕ್ಸಿನೋಸ್ 1080 SoC ಪ್ರೊಸೆಸರ್ ಬಲವನ್ನು ಪಡೆದಿದೆ.
ಇನ್ನು ಈ ಸ್ಮಾರ್ಟ್ಫೋನ್ನ ಕ್ಯಾಮೆರಾ ಫೀಚರ್ಸ್ ಬಗ್ಗೆ ಮಾತನಾಡುವುದಾದರೆ ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಎಮ್ಪಿ, ಎರಡನೇ ಕ್ಯಾಮೆರಾ 2ಎಮ್ಪಿ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2ಎಮ್ಪಿ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16ಎಮ್ಪಿ ಸೆಲ್ಫಿ ಕ್ಯಾಮೆರಾವನ್ನು ಸಹ ಇದರಲ್ಲಿ ನೀಡಲಾಗಿದೆ.
ವಿವೋ ಎಸ್16 ಸ್ಮಾರ್ಟ್ಫೋನ್ನ ಬೆಲೆ
ವಿವೋ S16 ಸೀರಿಸ್ ಸ್ಮಾರ್ಟ್ಫೋನ್ ಭಾರತದ ಮಾರುಕಟ್ಟೆಗೆ ಇನ್ನಷ್ಟೆ ಬಿಡುಗಡೆಯಾಗಬೇಕಿದೆ. ಸದ್ಯಕ್ಕೆ ಚೀನಾ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಕಾಲಿಟ್ಟಿದ್ದು, ವಿವೋ ಎಸ್16 ಬೆಲೆ CNY 2,499, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 29,600ರೂಪಾಯಿ ಆಗಬಹುದು. ವಿವೋ ಎಸ್16 ಪ್ರೋ ಸ್ಮಾರ್ಟ್ಫೋನ್ ಬೆಲೆ CNY 3,299 ಅಂದರೆ ದೇಶದಲ್ಲಿ ಅಂದಾಜು 39,100 ರೂಪಾಯಿ ಬೆಲೆಯಲ್ಲಿ ಪ್ರಾರಂಭವಾಗಲಿದೆ. ವಿವೋ ಎಸ್16ಇ ಬೆಲೆ CNY 2,099 ಅಂದರೆ ಭಾರತದಲ್ಲಿ ಸುಮಾರು 24,900ರೂಪಾಯಿ ಬೆಲೆ ನಿಗದಿ ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ