• ಹೋಂ
  • »
  • ನ್ಯೂಸ್
  • »
  • ಮೊಬೈಲ್- ಟೆಕ್
  • »
  • Vivo Smartphones: ಮಾರುಕಟ್ಟೆಗೆ ಸದ್ಯದಲ್ಲೇ ಲಗ್ಗೆಯಿಡಲಿದೆ ವಿವೋ ವಿ27 ಸೀರಿಸ್​ ಸ್ಮಾರ್ಟ್​​ಫೋನ್! ಹೇಗಿದೆ ಫೀಚರ್ಸ್​?

Vivo Smartphones: ಮಾರುಕಟ್ಟೆಗೆ ಸದ್ಯದಲ್ಲೇ ಲಗ್ಗೆಯಿಡಲಿದೆ ವಿವೋ ವಿ27 ಸೀರಿಸ್​ ಸ್ಮಾರ್ಟ್​​ಫೋನ್! ಹೇಗಿದೆ ಫೀಚರ್ಸ್​?

ವಿವೋ ವ27 ಸೀರಿಸ್​ ಸ್ಮಾರ್ಟ್​​ಫೋನ್​

ವಿವೋ ವ27 ಸೀರಿಸ್​ ಸ್ಮಾರ್ಟ್​​ಫೋನ್​

ವಿವೋ ವಿ27 ಸೀರಿಸ್​ನಲ್ಲಿ ವಿವೋ 27 ಮತ್ತು ವಿವೋ 27 ಪ್ರೋ ಎರಡು ಸ್ಮಾರ್ಟ್​​ಫೋನ್​ಗಳು ಬಿಡುಗಡೆಯಾಗಲು ಸಜ್ಜಾಗಿ ನಿಂತಿದೆ. ಇನ್ನು ಇವೆರಡೂ 5ಜಿ ಫೋನ್​ಗಳಾಗಿದ್ದು, ಉತ್ತಮ ಗುಣಮಟ್ಟದ ಫೀಚರ್ಸ್​​ಗಳೊಂದಿಗೆ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸೋದು ಗ್ಯಾರಂಟಿ ಎಂದು ವರದಿಗಳು ಹೇಳಿವೆ.

ಮುಂದೆ ಓದಿ ...
  • Share this:

    ವಿವೋ ಕಂಪೆನಿ (Vivo Company) ಇದುವರೆಗೆ ಬಹಳಷ್ಟು ಸ್ಮಾರ್ಟ್​​ಫೋನ್​ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಡಿವೈಸ್​ಗಳಿಗೆ ಈಗಲೂ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ.ವಿವೋ ಸ್ಮಾರ್ಟ್​​ಫೋನ್​ಗಳು ಎಂದಾಗ ಮೊದಲು ನೆನಪಾಗೋದೇ ಈ ಮೊಬೈಲ್​ಗಳು ಹೊಂದಿರುವಂತಹ ಕ್ಯಾಮೆರಾ ಫೀಚರ್ಸ್ (Camera Features)​, ವಿವೋ ಕಂಪೆನಿಯ ಸ್ಮಾರ್ಟ್​​ಫೋನ್​ಗಳು ಹೆಚ್ಚಾಗಿ ಜನಪ್ರಿಯತೆಯನ್ನು ಪಡೆದದ್ದು ಇದರ ಕ್ಯಾಮೆರಾ ಫೀಚರ್ಸ್​​​​ಗಳಿಗೆ. ಸದ್ಯ ಇದೀಗ ವಿವೋ ಕಂಪೆನಿ ಶೀಘ್ರದಲ್ಲೇ ವಿವೋ ವಿ27 ಸೀರಿಸ್​​ನ (Vivo V27 Series) ಸ್ಮಾರ್ಟ್​​​ಫೋನ್​ಗಳನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸರಣಿಯಲ್ಲಿ ಎರಡು ಸ್ಮಾರ್ಟ್​​ಫೋನ್​ಗಳು ಮಾರುಕಟ್ಟೆಯನ್ನು ಪ್ರವೇಶಿಸಲಿದ್ದು, ವಿಭಿನ್ನ ರೀತಿಯ ಫೀಚರ್ಸ್​ಗಳನ್ನು ಒಳಗೊಂಡಿದೆ.


    ಹೌದು, ವಿವೋ ವಿ27 ಸೀರಿಸ್​ನಲ್ಲಿ ವಿವೋ 27 ಮತ್ತು ವಿವೋ 27 ಪ್ರೋ ಎರಡು ಸ್ಮಾರ್ಟ್​​ಫೋನ್​ಗಳು ಬಿಡುಗಡೆಯಾಗಲು ಸಜ್ಜಾಗಿ ನಿಂತಿದೆ. ಇನ್ನು ಇವೆರಡೂ 5ಜಿ ಫೋನ್​ಗಳಾಗಿದ್ದು, ಉತ್ತಮ ಗುಣಮಟ್ಟದ ಫೀಚರ್ಸ್​​ಗಳೊಂದಿಗೆ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸೋದು ಗ್ಯಾರಂಟಿ ಎಂದು ವರದಿಗಳು ಹೇಳಿವೆ.


    ವಿವೋ ವಿ27 5ಜಿ ಸ್ಮಾರ್ಟ್​​​ಫೋನ್ ಫೀಚರ್ಸ್


    ವಿವೋ ವಿ27 5ಜಿ ಸ್ಮಾರ್ಟ್‌ಫೋನ್‌ 6.56  ಇಂಚಿನ ಅಮೋಲ್ಡ್​ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400  ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿರಲಿದ್ದು, ಹೆಚ್​​ಡಿಆರ್​ 10+ ಅನ್ನು ಬೆಂಬಲಿಸಲಿದೆ. ಇದಲ್ಲದೆ ಮೀಡಿಯಾಟೆಕ್‌ ಡೈಮೆನ್ಸಿಟಿ 7200 ಎಸ್​​ಓಸಿ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿರಲಿದೆ.


    ಇದನ್ನೂ ಓದಿ: ಮಲಯಾಳಂ ಚಿತ್ರರಂಗದ ಮೊದಲ ಮಹಿಳಾ ನಟಿಗೆ ಗೂಗಲ್ ಡೂಡಲ್​​ನಿಂದ ಗೌರವ!


    ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಬಹುದು ಎನ್ನಲಾಗಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುವ ನಿರೀಕ್ಷೆಯಿದೆ. ಜೊತೆಗೆ 4700 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿರಬಹುದು. 67W ಫಾಸ್ಟ್ ಚಾರ್ಜಿಂಗ್ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ.


    ವಿವೋ ವಿ27 ಪ್ರೋ ಸ್ಮಾರ್ಟ್​​ಫೋನ್ ಫೀಚರ್ಸ್


    ವಿವೋ ವಿ27 ಪ್ರೋ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರಬಹುದು ಎನ್ನಲಾಗಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 8200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.


    ವಿವೋ ವ27 ಸೀರಿಸ್​ ಸ್ಮಾರ್ಟ್​​ಫೋನ್​


    ಇನ್ನು ವಿವೋ ವಿ27 ಪ್ರೋ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌ ಹಾಗೂ ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಒಳಗೊಂಡಿದೆ. ಇದಲ್ಲದೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಬ್ಯಾಕಪ್ ಅನ್ನು ಹೊಂದಿರುವ ಸಾಧ್ಯತೆಯಿದೆ.


    ವಿವೋ ವಿ27 ಸೀರಿಸ್​ ಸ್ಮಾರ್ಟ್​​ಫೋನ್​ಗಳ ಬೆಲೆ ನಿರೀಕ್ಷೆ


    ವಿವೋ ವಿ27 5ಜಿ ಸ್ಮಾರ್ಟ್‌ಫೋನ್‌ ಭಾರತದಲ್ಲಿ 35,000 ರೂಪಾಯಿ ಬೆಲೆಯಲ್ಲಿ ಬಿಡುಗಡೆಯಾಗಲಿದೆ. ಹಾಗೆಯೇ ವಿವೋ ವಿ27 ಪ್ರೋ ಸ್ಮಾರ್ಟ್‌ಫೋನ್‌ ಭಾರತದಲ್ಲಿ 40,000 ರೂಪಾಯಿಗಳ ಆರಂಭಿಕ ಬೆಲೆಯಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ.




    ಇನ್ನು ಈ ಸ್ಮಾರ್ಟ್‌ಫೋನ್‌ ಬ್ಲ್ಯಾಕ್‌ ಮತ್ತು ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರುವ ನಿರೀಕ್ಷೆಯಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್, ವಿವೋ ಇ-ಸ್ಟೋರ್ ಮತ್ತು ಆಫ್‌ಲೈನ್ ಸ್ಟೋರ್‌ಗಳ ಮೂಲಕ ಪ್ರತ್ಯೇಕವಾಗಿ ಖರೀದಿಸಲು ಲಭ್ಯವಾಗಲಿದೆ ಎಂದು ಹೇಳಲಾಗಿದೆ. ಆದರೆ ಇದರ ಬಿಡುಗಡೆ ದಿನಾಂಕ ಅಧಿಕೃತವಾದ ನಂತರ ಸೇಲ್‌ ಡೇಟ್‌ ಅಧಿಕೃತವಾಗಲಿದೆ.

    Published by:Prajwal B
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು