ಪ್ರೇಕ್ಷಕರನ್ನು ಕಚಡಾ ನನ್ನ ಮಕ್ಕಳು ಎಂದ ಅನೂಪ್ ಭಂಡಾರಿ ಕ್ಷಮೆಯಾಚನೆ

news18
Updated:April 3, 2018, 3:48 PM IST
ಪ್ರೇಕ್ಷಕರನ್ನು ಕಚಡಾ ನನ್ನ ಮಕ್ಕಳು ಎಂದ ಅನೂಪ್ ಭಂಡಾರಿ ಕ್ಷಮೆಯಾಚನೆ
news18
Updated: April 3, 2018, 3:48 PM IST
ನ್ಯೂಸ್ 18 ಕನ್ನಡ,

ಬೆಂಗಳೂರು, (ಏ.3): ರಾಜರಥ ಚಿತ್ರ ನೋಡದವರು ಕಚಡಾ ನನ್ನ ಮಕ್ಕಳು ಎಂದು ಹೇಳಿರುವ ನಿರ್ದೇಶಕ ಅನೂಪ್​ ಭಂಡಾರಿ, ತಮ್ಮ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಯಾಚಿಸಿದ್ದಾರೆ.

ರೇಡಿಯೋ ಜಾಕಿದ ರ‍್ಯಾಪಿಡ್​ ರಶ್ಮಿ ನಡೆಸಿಕೊಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅನೂಪ್​ ಭಂಡಾರಿ ಹಾಗೂ ನಟ ನಿರೂಪ್​ ಭಂಡಾರಿ ಹಾಗೂ ಅವಂತಿಕಾ ಶೆಟ್ಟಿ, ರಾಜರಥ ಚಿತ್ರ ನೋಡದವರು ಕಚಡಾಗಳು ಎಂದು ಕರೆದಿದ್ದರು.

ಈ ವೀಡಿಯೋ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಇದೀಗ ತಮ್ಮ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೇಳಿರುವ ಅನೂಪ್ ರಾಜರಥ ಚಿತ್ರದ ಬಿಡುಗಡೆಗೆ ಮುನ್ನ ಭಾಗವಹಿಸಿದ ಒಂದು ಹಾಸ್ಯಮಯ ಕಾರ್ಯಕ್ರಮದ ಸಣ್ಣ ತುಣುಕು ನಿಮ್ಮೆಲ್ಲರಿಗು ನೋವುಂಟು ಮಾಡಿರುವುದಕ್ಕೆ ಕ್ಷಮೆ ಯಾಚಿಸುತ್ತೇವೆ.



ಸಂದರ್ಶನಕ್ಕೂ ಮುನ್ನ, ಹಲವರು ಕನ್ನಡ ಸಿನಿಮಾ ನೋಡುವುದಿಲ್ಲ, ಹಲವಾರು ಒಳ್ಳೆ ಚಿತ್ರಗಳು ಬರುತ್ತಿವೆ ಆದರು ಏಕೆ ಹೀಗೆ, ಎಂದು ಚರ್ಚಿಸಿದ್ದೆವು. ಹಾಗೆ ಸಂದರ್ಶನದಲ್ಲಿ ಬಂದ ಪ್ರಶ್ನೆಗೆ ಆ ಹಿನ್ನೆಲೆಯಲ್ಲಿ ಕೊಟ್ಟ ತಪ್ಪು ಉತ್ತರವದು. ಇದು ಖಂಡಿತವಾಗಿಯು ಕನ್ನಡ ಪ್ರೇಕ್ಷಕರನ್ನುದ್ದೇಶಿಸಿ ಹೇಳಿದ ಮಾತಲ್ಲ. ನಾವು ಏನೇ ಯಶಸ್ಸು ಕಂಡಿದ್ದರೂ ಅದಕ್ಕೆ ಪ್ರೇಕ್ಷಕರೇ ಕಾರಣ. ನಮ್ಮ ಯಾವುದೇ ಬೇರೆ ಸಂದರ್ಶನಗಳನ್ನು ನೋಡಿದರೂ ನಮ್ಮ ಗೆಲುವಿಗೆ ಪ್ರೇಕ್ಷಕರೆ ಕಾರಣ ಎಂದು ಹಲವು ಬಾರಿ ಹೇಳಿದ್ದೇವೆ.

ಕನ್ನಡ ಮತ್ತು ಕನ್ನಡ ಸಿನಿಮಾದ ಬಗ್ಗೆ ನಮಗೆ ಅಪಾರ ಅಭಿಮಾನ, ಅದಕ್ಕಾಗಿಯೇ ಪ್ರತಿ ಹಾಡಿನಲ್ಲೂ ಅಚ್ಚ ಕನ್ನಡವನ್ನೇ ಬಳಸುತ್ತೇವೆ. ಕಾರ್ಯಕ್ರಮದಲ್ಲಿ ತಪ್ಪಾಗಿ ಆಡಿದ ಮಾತುಗಳನ್ನು ದಯವಿಟ್ಟು ಮನ್ನಿಸಿ. ಯಾರಿಗೂ ನೋವುಂಟು ಮಾಡಬೇಕು ಅನ್ನುವ ಉದ್ದೇಶ ನಮ್ಮದಲ್ಲ. ನಿಮ್ಮ ಆಶಿರ್ವಾದ ನಮ್ಮ ಮೇಲೆ ಸದಾ ಇರಲಿ ಎಂದು ಫೇಸ್​ಬುಕ್​ನಲ್ಲಿ ಪೋಸ್ಟ್​ ಮಾಡಿದ್ದಾರೆ
First published:April 3, 2018
ಮತ್ತಷ್ಟು ಓದಿರಿ
ಮುಂದಿನ ಸುದ್ದಿ