• Home
  • »
  • News
  • »
  • trend
  • »
  • Gold Price Today: ಆಭರಣ ಪ್ರಿಯರಿಗೆ ಗುಡ್​ನ್ಯೂಸ್​; ಇಳಿಕೆ ಕಂಡ ಚಿನ್ನದ ಬೆಲೆ

Gold Price Today: ಆಭರಣ ಪ್ರಿಯರಿಗೆ ಗುಡ್​ನ್ಯೂಸ್​; ಇಳಿಕೆ ಕಂಡ ಚಿನ್ನದ ಬೆಲೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Bengaluru Gold Price Today: ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 48,720 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಇಂದು 44,650 ರೂ. ಆಗಿದೆ.

  • Share this:

    Gold Rate on July 13 2021 | ಬಂಗಾದರ ಮೇಲೆ ಹೂಡಿಕೆ ಮಾಡೋದು ಒಂದು ರೀತಿ ಭದ್ರತೆಯ ಪ್ರತೀಕ. ಇಂದು ಕೊಂಡ ಒಂದಿಷ್ಟೇ ಬಂಗಾರ ಕೆಲ ಸಮಯದ ನಂತರ ಭಾರೀ ಲಾಭ ತಂದುಕೊಡುತ್ತದೆ. ಬಹುಶಃ ಹಣದುಬ್ಬರದ ಪ್ರತೀ ಏರಿಳಿಕೆಯಲ್ಲೂ ಉತ್ತಮ ಬೆಲೆ ಕಾಯ್ದಿರಿಸಿಕೊಂಡಿರುವ ಏಕೈಕ ವಸ್ತು ಚಿನ್ನವೇ. ಹಾಗಾಗಿ ಪ್ರತಿದಿನ ದಿನಕ್ಕೆರಡು ಬಾರಿ ಚಿನ್ನದ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರಿಳಿತವಾದರೂ ಜನರಿಗೆ ಅದರಲ್ಲಿ ಆಸಕ್ತಿ ಒಂಚೂರೂ ಕಡಿಮೆ ಆಗೋದೇ ಇಲ್ಲ. ಒಂದು ಕಡೆ ಹೂಡಿಕೆಯ ರೂಪದಲ್ಲಿ ಚಿನ್ನಕ್ಕೆ ಡಿಮ್ಯಾಂಡ್ ಇದ್ದರೆ ಮತ್ತೊಂದೆಡೆ ಆಭರಣ ಕೊಳ್ಳಲು ಭಾರತೀಯರೂ ಸೇರಿದಂತೆ ನಾನಾ ದೇಶಗಳ ಜನರಿಗೆ ಹೆಚ್ಚಿನ ಆಸಕ್ತಿ ಇರುತ್ತದೆ. ಇವೆಲ್ಲವೂ ಸೇರಿ ಪ್ರತಿದಿನದ ಚಿನ್ನದ ಬೆಲೆಯ ಮೇಲೆ ಎಲ್ಲರಿಗೂ ಒಂದು ಕಣ್ಣು ಇದ್ದೇ ಇರುತ್ತದೆ.


    ಕಳೆದ ಕೆಲವು ದಿನಗಳಿಂದ ಏರಿಳಿಕೆ ಕಂಡಿದ್ದ ಚಿನ್ನದ ಬೆಲೆ ನಿನ್ನೆ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಇಂದು ಚಿನ್ನದ ದರದಲ್ಲಿ ಇಳಿಕೆಯಾಗಿದೆ. 10 ಗ್ರಾಂಗೆ 100 ರೂಪಾಯಿ ಇಳಿಕೆಯಾಗಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ನಿನ್ನೆ 48,820 ರೂ. ಇದ್ದದ್ದು 48,720 ರೂ. ಆಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ನಿನ್ನೆ ಬೆಂಗಳೂರಿನಲ್ಲಿ 44,750 ರೂ. ಇದ್ದದ್ದು, 44,650 ರೂ. ಆಗಿದೆ. ಭಾರತದಲ್ಲಿ ಇಂದು ಬೆಳ್ಳಿ ಬೆಲೆ ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 69,100 ರೂ. ಇತ್ತು. ಇಂದು 1 ಕೆ.ಜಿ ಬೆಳ್ಳಿಗೆ 69,400 ರೂ. ಆಗಿದೆ.


    ಇದನ್ನೂ ಓದಿ:National Education Policy: ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಸಂಪೂರ್ಣ ಜಾರಿ; ಡಿಸಿಎಂ ಅಶ್ವತ್ಥ ನಾರಾಯಣ


    ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,810 ರೂ. ಇದ್ದುದು, ಇಂದು 46,710 ರೂ.ಗೆ ಇಳಿದಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 47,810 ರೂ. ಇದ್ದದ್ದು, ಇಂದು 47,710 ರೂ. ಆಗಿದೆ.
    ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.


    ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 48,720 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಇಂದು 44,650 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 48,720 ರೂ.ಇದೆ.


    ಭಾರತದಲ್ಲಿ ಬೆಳ್ಳಿ ದರದಲ್ಲಿ ಇಂದು ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ, 69,100 ರೂ. ಇತ್ತು. ಇಂದು 69,400 ರೂ.ಗೆ ಏರಿಕೆಯಾಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 69,400 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 73,800 ರೂ. ಆಸುಪಾಸಿನಲ್ಲಿದೆ.


    ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.


    ಇದನ್ನೂ ಓದಿ:Corona 3rd Wave: ರಾಜ್ಯಕ್ಕೆ 3ನೇ ಕೊರೋನಾ ಅಲೆ ಭೀತಿ; ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಸೂಚಿಸಿದ ಗೃಹ ಸಚಿವ


    ಕೊರೋನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.


    ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.

    Published by:Latha CG
    First published: