Gold Price Today: ಏರಿಕೆಯಾದ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಇಂದಿನ ದರ ಎಷ್ಟು ಗೊತ್ತೇ?

Bengaluru Gold Price: ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 47,680ರೂ ಗೆ ಇಳಿದಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ ಇಂದು 43,700 ರೂ ಆಗಿದೆ.

ಚಿನ್ನಾಭರಣ

ಚಿನ್ನಾಭರಣ

  • Share this:
    Gold Rate on August 14 2021 | ಬಂಗಾರದ ಮೇಲೆ ಹೂಡಿಕೆ ಮಾಡೋದು ಒಂದು ರೀತಿ ಭದ್ರತೆಯ ಪ್ರತೀಕ. ಇಂದು ಕೊಂಡ ಒಂದಿಷ್ಟೇ ಬಂಗಾರ ಕೆಲ ಸಮಯದ ನಂತರ ಭಾರೀ ಲಾಭ ತಂದುಕೊಡುತ್ತದೆ. ಬಹುಶಃ ಹಣದುಬ್ಬರದ ಪ್ರತೀ ಏರಿಳಿಕೆಯಲ್ಲೂ ಉತ್ತಮ ಬೆಲೆ ಕಾಯ್ದಿರಿಸಿಕೊಂಡಿರುವ ಏಕೈಕ ವಸ್ತು ಚಿನ್ನವೇ. ಹಾಗಾಗಿ ಪ್ರತಿದಿನ ದಿನಕ್ಕೆರಡು ಬಾರಿ ಚಿನ್ನದ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರಿಳಿತವಾದರೂ ಜನರಿಗೆ ಅದರಲ್ಲಿ ಆಸಕ್ತಿ ಒಂಚೂರೂ ಕಡಿಮೆ ಆಗೋದೇ ಇಲ್ಲ. ಒಂದು ಕಡೆ ಹೂಡಿಕೆಯ ರೂಪದಲ್ಲಿ ಚಿನ್ನಕ್ಕೆ ಡಿಮ್ಯಾಂಡ್ ಇದ್ದರೆ, ಮತ್ತೊಂದೆಡೆ ಆಭರಣ ಕೊಳ್ಳಲು ಭಾರತೀಯರೂ ಸೇರಿದಂತೆ ನಾನಾ ದೇಶಗಳ ಜನರಿಗೆ ಹೆಚ್ಚಿನ ಆಸಕ್ತಿ ಇರುತ್ತದೆ. ಇವೆಲ್ಲವೂ ಸೇರಿ ಪ್ರತಿದಿನದ ಚಿನ್ನದ ಬೆಲೆಯ ಮೇಲೆ ಎಲ್ಲರಿಗೂ ಒಂದು ಕಣ್ಣು ಇದ್ದೇ ಇರುತ್ತದೆ.

    ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಏರಿಕೆಯಾಗಿದ್ದು, ಆಭರಣ ಪ್ರಿಯರಿಗೆ ಶಾಕ್ ಕೊಟ್ಟಿದೆ. ಕೆಲವು ದಿನ ಸ್ಥಿರತೆ ಕಾಯ್ದುಕೊಂಡಿದ್ದ ಬಂಗಾರದ ಬೆಲೆ, ಇನ್ನೂ ಕೆಲವು ದಿನ ಗಣನೀಯವಾಗಿ ಇಳಿಕೆ ಕಂಡಿತ್ತು. ಈಗ ಚಿನ್ನದ ದರ ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 320 ರೂಪಾಯಿ ಏರಿಕೆ ಕಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,540 ರೂ. ಇತ್ತು. ಇಂದು 45,860 ರೂ. ಆಗಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯೂ ಕಡಿಮೆಯಾಗಿದೆ. ನಿನ್ನೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 46,540 ರೂ. ಇತ್ತು. ಇಂದು 46,860 ರೂಪಾಯಿ ಆಗಿದೆ.

    ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 47,680ರೂ ಗೆ ಇಳಿದಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ ಇಂದು 43,700 ರೂ ಆಗಿದೆ.

    ಇದನ್ನೂ ಓದಿ:Karnataka Weather Today: ರಾಜ್ಯದಲ್ಲಿ ಮುಂದುವರೆದ ಮಳೆ; ಇಂದು ಬೆಂಗಳೂರಿನ ವಾತಾವರಣ ಹೇಗಿರಲಿದೆ?

    ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 47,950ರೂ.ಇದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.

    ಭಾರತದಲ್ಲಿ ಇಂದು ಬೆಳ್ಳಿ ಬೆಲೆಯೂ ಏರಿಕೆ ಕಂಡಿದೆ. ಇಂದು 1 ಕೆ.ಜಿ ಬೆಳ್ಳಿಗೆ 200 ರೂಪಾಯಿ ಹೆಚ್ಚಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 62,300 ರೂ. ಇತ್ತು. ಇಂದು 1 ಕೆ.ಜಿ ಬೆಳ್ಳಿಗೆ 62,500 ರೂಪಾಯಿ ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 62,500 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 67,300 ರೂ. ಆಸುಪಾಸಿನಲ್ಲಿದೆ.

    ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

    ಇದನ್ನೂ ಓದಿ:Breakfast Tips:ಬೆಳಗಿನ ತಿಂಡಿ ಬಗ್ಗೆ ಗೊಂದಲವಿದ್ದಲ್ಲಿ ಇಲ್ಲಿದೆ ಪರಿಹಾರ..

    ಕೊರೋನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

    ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
    Published by:Latha CG
    First published: