Gold Price Today: ಚಿನ್ನದ ಬೆಲೆಯಲ್ಲಿ ಅಲ್ವಸ್ವಲ್ಪ ಏರಿಳಿತ ಸಹಜ, ಸದ್ಯಕ್ಕೆ ಹೆಚ್ಚೇನೂ ಜಾಸ್ತಿಯಾಗಲ್ವಂತೆ ಬಂಗಾರದ ರೇಟ್; ಇಂದಿನ ಬೆಲೆ ಹೀಗಿದೆ..

Gold Price Today: ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ.

ಚಿನ್ನಾಭರಣ

ಚಿನ್ನಾಭರಣ

  • Share this:
Gold Rate on July 21 2021: ಬಂಗಾದರ ಮೇಲೆ ಹೂಡಿಕೆ ಮಾಡೋದು ಒಂದು ರೀತಿ ಭದ್ರತೆಯ ಪ್ರತೀಕ. ಇಂದು ಕೊಂಡ ಒಂದಿಷ್ಟೇ ಬಂಗಾರ ಕೆಲ ಸಮಯದ ನಂತರ ಭಾರೀ ಲಾಭ ತಂದುಕೊಡುತ್ತದೆ. ಬಹುಶಃ ಹಣದುಬ್ಬರದ ಪ್ರತೀ ಏರಿಳಿಕೆಯಲ್ಲೂ ಉತ್ತಮ ಬೆಲೆ ಕಾಯ್ದಿರಿಸಿಕೊಂಡಿರುವ ಏಕೈಕ ವಸ್ತು ಚಿನ್ನವೇ. ಹಾಗಾಗಿ ಪ್ರತಿದಿನ ದಿನಕ್ಕೆರಡು ಬಾರಿ ಚಿನ್ನದ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರಿಳಿತವಾದರೂ ಜನರಿಗೆ ಅದರಲ್ಲಿ ಆಸಕ್ತಿ ಒಂಚೂರೂ ಕಡಿಮೆ ಆಗೋದೇ ಇಲ್ಲ. ಒಂದು ಕಡೆ ಹೂಡಿಕೆಯ ರೂಪದಲ್ಲಿ ಚಿನ್ನಕ್ಕೆ ಡಿಮ್ಯಾಂಡ್ ಇದ್ದರೆ ಮತ್ತೊಂದೆಡೆ ಆಭರಣ ಕೊಳ್ಳಲು ಭಾರತೀಯರೂ ಸೇರಿದಂತೆ ನಾನಾ ದೇಶಗಳ ಜನರಿಗೆ ಹೆಚ್ಚಿನ ಆಸಕ್ತಿ ಇರುತ್ತದೆ. ಇವೆಲ್ಲವೂ ಸೇರಿ ಪ್ರತಿದಿನದ ಚಿನ್ನದ ಬೆಲೆಯ ಮೇಲೆ ಎಲ್ಲರಿಗೂ ಒಂದು ಕಣ್ಣು ಇದ್ದೇ ಇರುತ್ತದೆ.

ನಿನ್ನೆ ಮಂಗಳವಾರ 22 ಕ್ಯಾರೆಟ್​ನ 1 ಗ್ರಾಂ ಚಿನ್ನದ ಬೆಲೆ 4704 ರೂ ಇತ್ತು. ಇವತ್ತು ಆ ಬೆಲೆ 26 ರೂಪಾಯಿಗಳಷ್ಟು ಏರಿಕೆಯಾಗಿ 4730 ರೂ ಆಗಿದೆ. ಇನ್ನು 24 ಕ್ಯಾರೆಟ್​ ನ ಅಪರಂಜಿಯ ಬೆಲೆಯಲ್ಲೂ ಇದೇ ರೀತಿಯ ವ್ಯತ್ಯಾಸವಾಗಿದೆ. ಒಂದು ಗ್ರಾಂ ಅಪರಂಜಿಯ ಬೆಲೆ 4804 ರೂ ಇದ್ದಿದ್ದು ಇಂದು 4830 ರೂ ಆಗಿದೆ. ಒಂದು ಗ್ರಾಂ ಬಂಗಾರಕ್ಕೆ ರೂ 4831 ಆಗಿದ್ದು ಈ ತಿಂಗಳ ಅತ್ಯಂತ ಹೆಚ್ಚಿನ ದರ ಎಂದು ಅಂದಾಜಿಸಲಾಗಿದೆ. ಸದ್ಯದ ಅಂತಾರಾಷ್ಟ್ರೀಯ ಪರಿಸ್ಥಿತಿ ನೋಡಿದರೆ ಈ ಬೆಲೆಗಳ ಏರಿಳಿತ ಮತ್ತಷ್ಟು ಕಾಲ ಮುಂದುವರೆಯುವ ಎಲ್ಲಾ ಸೂಚನೆಗಳಿವೆ.

ಇದನ್ನೂ ಓದಿ: Viral News: ರಾತ್ರೋರಾತ್ರಿ ವಿಶ್ವದ ಮೊದಲ ಟ್ರಿಲಿಯನೇರ್ ಆದ ವ್ಯಕ್ತಿ, ಇವನ ಅದೃಷ್ಟ ನೋಡಿ ಎಲ್ರಿಗೂ ಹೊಟ್ಟೆಕಿಚ್ಚು !

ಮುಂಬೈನಲ್ಲಿ 10 ಗ್ರಾಂನ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ 48,000 ರೂಪಾಯಿಗಳಿವೆ. ಪಾಟ್ನಾ, ವಿಜಯವಾಡ, ಭುಬನೇಶ್ವರ್, ಹೈದರಾಬಾದ್, ಕೇರಳ, ಪುಣೆ, ಬೆಂಗಳೂರು ಸೇರಿದಂತೆ ದೇಶದ ನಾನಾ ನಗರಗಳಲ್ಲಿ ಈ ಬೆಲೆ ಇದೆ. ಉಳಿದ ಕೆಲ ನಗರಗಳಲ್ಲಿ ಇದಕ್ಕಿಂತ ತುಸು ಹೆಚ್ಚಿದೆ. ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

ಕೊರೋನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.
Published by:Soumya KN
First published: