• ಹೋಂ
  • »
  • ನ್ಯೂಸ್
  • »
  • ಟ್ರೆಂಡ್
  • »
  • Gold Price Today: ಸತತವಾಗಿ ಏರುತ್ತಲೇ ಇದೆ ಚಿನ್ನದ ಬೆಲೆ, ಮೊದಲೇ ಖರೀದಿಸಿಟ್ಟುಕೊಂಡವರಿಗೆ ಹೆಚ್ಚು ಲಾಭ !

Gold Price Today: ಸತತವಾಗಿ ಏರುತ್ತಲೇ ಇದೆ ಚಿನ್ನದ ಬೆಲೆ, ಮೊದಲೇ ಖರೀದಿಸಿಟ್ಟುಕೊಂಡವರಿಗೆ ಹೆಚ್ಚು ಲಾಭ !

ಚಿನ್ನ.

ಚಿನ್ನ.

Gold Price Today July 8: ಬೆಂಗಳೂರಿನಲ್ಲಿ 10 ಗ್ರಾಂನ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ 44,650 ರೂಪಾಯಿಗಳಿವೆ. ಪಾಟ್ನಾ, ವಿಜಯವಾಡ, ಭುಬನೇಶ್ವರ್, ಹೈದರಾಬಾದ್, ಕೇರಳ, ಪುಣೆ, ಮುಂಬೈ ಸೇರಿದಂತೆ ದೇಶದ ನಾನಾ ನಗರಗಳಲ್ಲಿ ಈ ಬೆಲೆ ಇದೆ. ಉಳಿದ ಕೆಲ ನಗರಗಳಲ್ಲಿ ಇದಕ್ಕಿಂತ ತುಸು ಹೆಚ್ಚಿದೆ.

ಮುಂದೆ ಓದಿ ...
  • Share this:



Gold Rate on July 7 2021: ಬಂಗಾದರ ಮೇಲೆ ಹೂಡಿಕೆ ಮಾಡೋದು ಒಂದು ರೀತಿ ಭದ್ರತೆಯ ಪ್ರತೀಕ. ಇಂದು ಕೊಂಡ ಒಂದಿಷ್ಟೇ ಬಂಗಾರ ಕೆಲ ಸಮಯದ ನಂತರ ಭಾರೀ ಲಾಭ ತಂದುಕೊಡುತ್ತದೆ. ಬಹುಶಃ ಹಣದುಬ್ಬರದ ಪ್ರತೀ ಏರಿಳಿಕೆಯಲ್ಲೂ ಉತ್ತಮ ಬೆಲೆ ಕಾಯ್ದಿರಿಸಿಕೊಂಡಿರುವ ಏಕೈಕ ವಸ್ತು ಚಿನ್ನವೇ. ಹಾಗಾಗಿ ಪ್ರತಿದಿನ ದಿನಕ್ಕೆರಡು ಬಾರಿ ಚಿನ್ನದ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರಿಳಿತವಾದರೂ ಜನರಿಗೆ ಅದರಲ್ಲಿ ಆಸಕ್ತಿ ಒಂಚೂರೂ ಕಡಿಮೆ ಆಗೋದೇ ಇಲ್ಲ. ಒಂದು ಕಡೆ ಹೂಡಿಕೆಯ ರೂಪದಲ್ಲಿ ಚಿನ್ನಕ್ಕೆ ಡಿಮ್ಯಾಂಡ್ ಇದ್ದರೆ ಮತ್ತೊಂದೆಡೆ ಆಭರಣ ಕೊಳ್ಳಲು ಭಾರತೀಯರೂ ಸೇರಿದಂತೆ ನಾನಾ ದೇಶಗಳ ಜನರಿಗೆ ಹೆಚ್ಚಿನ ಆಸಕ್ತಿ ಇರುತ್ತದೆ. ಇವೆಲ್ಲವೂ ಸೇರಿ ಪ್ರತಿದಿನದ ಚಿನ್ನದ ಬೆಲೆಯ ಮೇಲೆ ಎಲ್ಲರಿಗೂ ಒಂದು ಕಣ್ಣು ಇದ್ದೇ ಇರುತ್ತದೆ.


ನಿನ್ನೆ ಮಂಗಳವಾರ 22 ಕ್ಯಾರೆಟ್​ನ 1 ಗ್ರಾಂ ಚಿನ್ನದ ಬೆಲೆ 4675 ರೂ ಇತ್ತು. ಇವತ್ತು ಆ ಬೆಲೆ ಮತ್ತೆ 22 ರೂಪಾಯಿ ಹೆಚ್ಚಾಗಿದೆ ಅಂದರೆ 4697 ರೂ ಆಗಿದೆ. ಇನ್ನು 24 ಕ್ಯಾರೆಟ್​ ನ ಅಪರಂಜಿಯ ಬೆಲೆಯಲ್ಲೂ ಇದೇ ರೀತಿಯ ವ್ಯತ್ಯಾಸವಾಗಿದೆ. ಒಂದು ಗ್ರಾಂ ಅಪರಂಜಿಯ ಬೆಲೆ 4775 ರೂ ಇದ್ದಿದ್ದು ಇಂದು 4797 ರೂ ಆಗಿದೆ. ಬೆಂಗಳೂರಿನಲ್ಲಿ 10 ಗ್ರಾಂನ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ 44,650 ರೂಪಾಯಿಗಳಿವೆ. ಪಾಟ್ನಾ, ವಿಜಯವಾಡ, ಭುಬನೇಶ್ವರ್, ಹೈದರಾಬಾದ್, ಕೇರಳ, ಪುಣೆ, ಮುಂಬೈ ಸೇರಿದಂತೆ ದೇಶದ ನಾನಾ ನಗರಗಳಲ್ಲಿ ಈ ಬೆಲೆ ಇದೆ. ಉಳಿದ ಕೆಲ ನಗರಗಳಲ್ಲಿ ಇದಕ್ಕಿಂತ ತುಸು ಹೆಚ್ಚಿದೆ.


ಕೋಲ್ಕತ್ತಾ 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ 47,200 ರೂಪಾಯಿಗಳಿವೆ. ಇದು ಇಂದು ಇಡೀ ದೇಶದಲ್ಲೇ ಅತೀ ಹೆಚ್ಚಿನ ಬೆಲೆಯಾಗಿದೆ. ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.


ಇದನ್ನೂ ಓದಿ: Zodiac Personality: ನಿಮ್ಮ ವ್ಯಕ್ತಿತ್ವ ಏನು ಅನ್ನೋದನ್ನ ನಿಮ್ಮ ರಾಶಿಯೇ ಹೇಳುತ್ತದೆ; ಅಂದ್ಹಾಗೆ ನಿಮ್ಮ ರಾಶಿ ಯಾವ್ದು?


ಕೊರೋನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

top videos


    ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.






    ನ್ಯೂಸ್​​​18 ಕನ್ನಡ ಕಳಕಳಿಕೊರೋನಾ ಪಾಸಿಟಿವ್​ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದುಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದುಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕುತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕುಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.






    First published: