Gold Price Today: ಗೌರಿ ಹಬ್ಬಕ್ಕೆ ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ; ಬೆಲೆ ಇಳಿಕೆಯಾಗಿದೆ ನೋಡಿ..!

ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,440 ರೂ.ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,400 ರೂ.ಗೆ ಏರಿಕೆಯಾಗಿದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಚಿನ್ನಾಭರಣ

ಚಿನ್ನಾಭರಣ

  • Share this:
    Gold Rate on September 08 2021 | ಬಂಗಾರದ(Gold) ಮೇಲೆ ಹೂಡಿಕೆ ಮಾಡೋದು ಒಂದು ರೀತಿ ಭದ್ರತೆಯ ಪ್ರತೀಕ. ಇಂದು ಕೊಂಡ ಒಂದಿಷ್ಟೇ ಬಂಗಾರ ಕೆಲ ಸಮಯದ ನಂತರ ಭಾರೀ ಲಾಭ ತಂದುಕೊಡುತ್ತದೆ. ಬಹುಶಃ ಹಣದುಬ್ಬರದ ಪ್ರತೀ ಏರಿಳಿಕೆಯಲ್ಲೂ ಉತ್ತಮ ಬೆಲೆ ಕಾಯ್ದಿರಿಸಿಕೊಂಡಿರುವ ಏಕೈಕ ವಸ್ತು ಚಿನ್ನವೇ. ಹಾಗಾಗಿ ಪ್ರತಿದಿನ ದಿನಕ್ಕೆರಡು ಬಾರಿ ಚಿನ್ನದ ಮಾರುಕಟ್ಟೆಯಲ್ಲಿ ಹಳದಿ ಲೋಹದ(Yellow Metal) ಬೆಲೆ ಏರಿಳಿತವಾದರೂ ಜನರಿಗೆ ಅದರಲ್ಲಿ ಆಸಕ್ತಿ ಒಂಚೂರೂ ಕಡಿಮೆ ಆಗೋದೇ ಇಲ್ಲ. ಒಂದು ಕಡೆ ಹೂಡಿಕೆಯ ರೂಪದಲ್ಲಿ ಚಿನ್ನಕ್ಕೆ ಡಿಮ್ಯಾಂಡ್ ಇದ್ದರೆ, ಮತ್ತೊಂದೆಡೆ ಆಭರಣ ಕೊಳ್ಳಲು ಭಾರತೀಯರೂ ಸೇರಿದಂತೆ ನಾನಾ ದೇಶಗಳ ಜನರಿಗೆ ಹೆಚ್ಚಿನ ಆಸಕ್ತಿ ಇರುತ್ತದೆ. ಇವೆಲ್ಲವೂ ಸೇರಿ ಪ್ರತಿದಿನದ ಚಿನ್ನದ ಬೆಲೆಯ(Gold Price) ಮೇಲೆ ಎಲ್ಲರಿಗೂ ಒಂದು ಕಣ್ಣು ಇದ್ದೇ ಇರುತ್ತದೆ.

    ಕಳೆದ ಮೂರು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಭಾರೀ ಇಳಿಕೆ ಕಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,530 ರೂ. ಇತ್ತು. ಇಂದು ಅದೇ ಚಿನ್ನ 46,410 ರೂ.ಗೆ ಇಳಿಕೆಯಾಗಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಳಿಕೆಯಾಗಿದೆ. ನಿನ್ನೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 47,530 ರೂ. ಇತ್ತು. ಇಂದು 10 ಗ್ರಾಂ ಚಿನ್ನಕ್ಕೆ 47,410 ರೂ. ಆಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 120 ರೂಪಾಯಿ ಕಡಿಮೆಯಾಗಿದೆ.

    ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,440 ರೂ.ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,400 ರೂ.ಗೆ ಏರಿಕೆಯಾಗಿದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

    ಇದನ್ನೂ ಓದಿ:Gold Price Today: ಮತ್ತೆ ಹೆಚ್ಚಾದ ಚಿನ್ನದ ಬೆಲೆ; ಇಂದು ಬೆಂಗಳೂರಿನಲ್ಲಿ ಎಷ್ಟಿದೆ ಗೊತ್ತಾ ರೇಟ್?

    ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 50,790 ರೂ.ಇದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.

    ನಿನ್ನೆ ಏರಿಕೆ ಕಂಡಿದ್ದ ಬೆಳ್ಳಿ ಬೆಲೆ(Silver Rate) ಇಂದು ಇಳಿಕೆಯಾಗಿದೆ. ನಿನ್ನೆ 1 ಕೆ.ಜಿ ಬೆಳ್ಳಿಗೆ 100 ರೂಪಾಯಿ ಏರಿಕೆಯಾಗಿತ್ತು. ಇಂದು 1 ಕೆ.ಜಿ ಬೆಳ್ಳಿಗೆ 300 ರೂಪಾಯಿ ಇಳಿಕೆ ಕಂಡಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 65,300 ರೂ. ಇತ್ತು. ಇಂದು ಅದೇ ಬೆಳ್ಳಿಗೆ 65,000 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 65,000 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 69,600 ರೂ. ಆಸುಪಾಸಿನಲ್ಲಿದೆ.

    ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

    ಕೊರೋನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

    ಇದನ್ನೂ ಓದಿ:Karnataka Weather Today: ರಾಜ್ಯದಲ್ಲಿ ಮುಂದುವರೆಯಲಿದೆ ವರುಣನ ಆರ್ಭಟ. ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?

    ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
    Published by:Latha CG
    First published: