HOME » NEWS » Trend » GOLD PRICE TODAY GOLD RATE AND SILVER PRICES DOWN IN BENGALURU AND OTHER CITIES ON JUNE 11 SCT

Gold Price Today June 11: ಚಿನ್ನ ಖರೀದಿಸಲು ಯೋಚಿಸುತ್ತಿದ್ದೀರಾ?; ಹಾಗಿದ್ದರೆ ಇಲ್ಲಿದೆ ಗುಡ್ ನ್ಯೂಸ್

Bangalore Gold Price Today: ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ನಿನ್ನೆ 50,070 ರೂ. ಇದ್ದುದು, ಇಂದು 49,970 ರೂ.ಗೆ ಕುಸಿದಿದೆ.

news18-kannada
Updated:June 11, 2021, 8:08 AM IST
Gold Price Today June 11: ಚಿನ್ನ ಖರೀದಿಸಲು ಯೋಚಿಸುತ್ತಿದ್ದೀರಾ?; ಹಾಗಿದ್ದರೆ ಇಲ್ಲಿದೆ ಗುಡ್ ನ್ಯೂಸ್
ಚಿನ್ನ
  • Share this:
Gold Rate Today | ಭಾರತದಲ್ಲಿ 2 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆ ಇಂದು ಕೊಂಚ ಏರಿಕೆಯಾಗಿದೆ. ಭಾರತದಲ್ಲಿ ಚಿನ್ನದ ದರ ಒಂದೇ ದಿನ 200 ರೂ. ಏರಿಕೆ ಕಂಡಿದೆ. ನೀವೇನಾದರೂ ಚಿನ್ನ ಕೊಳ್ಳಲು ಯೋಚಿಸುತ್ತಿದ್ದರೆ ದೇಶದ ವಿವಿಧ ನಗರಗಳಲ್ಲಿ ಚಿನ್ನಕ್ಕೆ ಯಾವ ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ನಿನ್ನೆ 50,070 ರೂ. ಇದ್ದುದು, ಇಂದು 49,970 ರೂ.ಗೆ ಕುಸಿದಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,900 ರೂ. ಇದ್ದುದು ಇಂದು 45,800 ರೂ.ಗೆ ಕುಸಿದಿದೆ. ಬೆಂಗಳೂರಿನಲ್ಲಿ ಕುಸಿದಿರುವ ಚಿನ್ನದ ಬೆಲೆ ಭಾರತದ ಬೇರೆ ನಗರಗಳಲ್ಲಿ ಏರಿಕೆಯಾಗಿದೆ. ನಿನ್ನೆ 71,900 ರೂ.ಇದ್ದ ಬೆಳ್ಳಿ ಬೆಲೆ (Silver Price) ಇಂದು 71,400ಕ್ಕೆ ಕುಸಿದಿದೆ.

ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಭಾರತದಲ್ಲಿ ಚಿನ್ನದ ದರ ಭಾರೀ ಏರಿಕೆಯಾಗಿದೆ. ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,6810 ರೂ. ಇದ್ದುದು ಇಂದು 47,880 ರೂ.ಗೆ ಏರಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 48,680 ರೂ. ಇತ್ತು. ಇಂದು ಆ ಬೆಲೆ 48,880ಕ್ಕೆ ಏರಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 49,970 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 45,800 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 52,000 ರೂ. ದಾಟಿದೆ.

ಇದನ್ನೂ ಓದಿ: Chikmagalur: ಕಾಫಿನಾಡಿಗೆ ಬೆಂಗಳೂರೇ ಕಂಟಕ; ಗ್ರೀನ್​ ಜೋನ್​ನಲ್ಲಿದ್ದ ಚಿಕ್ಕಮಗಳೂರಿನಲ್ಲಿ ಕೊರೋನಾ ಹೆಚ್ಚಲು ಇದೇ ಕಾರಣ?

ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಇಂದು ಕುಸಿತ ಕಂಡಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 71,900 ರೂ. ಇದ್ದುದು ಇಂದು 71,400 ರೂ. ಗೆ ಕುಸಿದಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 71,400 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 76,300 ರೂ. ಆಸುಪಾಸಿನಲ್ಲಿದೆ.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

ಇದನ್ನೂ ಓದಿ: Karnataka Weather Today: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದಿನಿಂದ 1 ವಾರ ಭಾರೀ ಮಳೆ

ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್​ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.
Youtube Video

ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
Published by: Sushma Chakre
First published: June 11, 2021, 8:08 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories