Gold Price Today: ಚಿನ್ನ ಕೊಳ್ಳುವವರಿಗೆ ಗುಡ್ ನ್ಯೂಸ್ ! ಬಂಗಾರದ ಬೆಲೆ ಇವತ್ತು ಜಾಸ್ತಿ ಆಗಿಲ್ಲ

ಭಾರತದಲ್ಲಿ ಬೆಳ್ಳಿ ಬೆಲೆ ಏರಿಕೆಯಾಗಿದ್ದು, ನಿನ್ನೆ 71,900 ರೂ. ಇದ್ದುದು ಇಂದು 72,000 ರೂ. ಗೆ ಏರಿಕೆ ಆಗಿದೆ.

ಚಿನ್ನ

ಚಿನ್ನ

  • Share this:
    Gold Rate Today | ಭಾರತದಲ್ಲಿ ನಿನ್ನೆ ಚಿನ್ನದ ಬೆಲೆ ಗಗನಕ್ಕೇರಿದ್ದು, 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ 1330 ರೂಪಾಯಿ ಹೆಚ್ಚಾಗಿತ್ತು. ಇಂದು ಈ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಯಥಾಸ್ಥಿತಿ ಕಾಯ್ದುಕೊಂಡಿದೆ. ಹೀಗಾಗಿ ನೀವೇನಾದರೂ ಚಿನ್ನ ಕೊಳ್ಳಲು ಯೋಚಿಸುತ್ತಿದ್ದರೆ ವಿವಿಧ ನಗರಗಳಲ್ಲಿ ಯಾವ ಬೆಲೆ ಇದೆ ಎಂಬುದನ್ನು ನೋಡಬೇಕಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ Gold Price ನಿನ್ನೆ 50,300 ರೂ. ಇದ್ದುದು, ಇಂದು ಯಥಾಸ್ಥಿತಿಯಲ್ಲಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,900 ರೂ. ಇದ್ದುದು ಕೂಡ ಬದಲಾಗಿಲ್ಲ. ನಿನ್ನೆ 71,900 ರೂ.ಇದ್ದ Silver Price ಇಂದು 72,000ಕ್ಕೆ ಏರಿಕೆಯಾಗಿದೆ.

    ಭಾರತೀಯ ಹೆಣ್ಣುಮಕ್ಕಳಿಗೆ ಚಿನ್ನದ ಮೇಲೆ ಎಲ್ಲಿಲ್ಲದ ವ್ಯಾಮೋಹ. ಎಷ್ಟಿದ್ದರೂ ಕಡಿಮೆಯೇ ಎನ್ನುತ್ತಿರುತ್ತಾರೆ. ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಕಡಿಮೆಯಾಗಿದ್ದ ಬಂಗಾರದ ಬೆಲೆ ಇಂದು ಮತ್ತೆ ಹೆಚ್ಚಳವಾಗಿದ್ದು, ನಿನ್ನೆಗಿಂತ ಇಂದು ಬರೋಬ್ಬರಿ 200 ರೂ. ಏರಿಕೆಯಾಗುವ ಮೂಲಕ ಚಿನ್ನ ಖರೀದಿಸುವವರಿಗೆ ಬೆಲೆಯೇರಿಕೆಯ ಶಾಕ್ ನೀಡಿದೆ.

    ಇದನ್ನೂ ಓದಿ:Karnataka Monsoon 2021: ಕರ್ನಾಟಕದಲ್ಲಿ ಮುಂಗಾರು ಮಳೆ ಯಾವಾಗ ಶುರು? ಎಲ್ಲೆಲ್ಲಿ ಯಾವತ್ತು ಮಳೆಯಾಗುತ್ತೆ?

    ಭಾರತದಲ್ಲಿ ನಿನ್ನೆ ಚಿನ್ನದ ದರ ಮತ್ತೆ ಭಾರೀ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 1,330 ರೂ. ಹೆಚ್ಚಳವಾಗಿದೆ. ಇಂದು ಈ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ. ಬದಲಾಗಿ ಯಥಾಸ್ಥಿತಿ ಕಾಯ್ದುಕೊಂಡಿದೆ. ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,230 ರೂ. ಇತ್ತು. ಇಂದೂ ಸಹ 48,230 ರೂ.ಇದ್ದು, ಯಾವುದೇ ಏರಿಕೆಯಾಗಿಲ್ಲ. ನಿನ್ನೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 49,230 ರೂ. ಇತ್ತು. ಇಂದೂ ಸಹ ಅದೇ ಬೆಲೆ ಇದ್ದು, ಯಾವುದೇ ವ್ಯತ್ಯಾಸವಾಗಿಲ್ಲ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 50,400 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 46,200 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

    ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 50,000 ರೂ. ದಾಟಿದೆ.

    ಭಾರತದಲ್ಲಿ ಬೆಳ್ಳಿ ಬೆಲೆ ಏರಿಕೆಯಾಗಿದ್ದು, ನಿನ್ನೆ 71,900 ರೂ. ಇದ್ದುದು ಇಂದು 72,000 ರೂ. ಗೆ ಏರಿಕೆ ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 72,000 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 76,300 ರೂ. ಆಸುಪಾಸಿನಲ್ಲಿದೆ.

    ಇದನ್ನೂ ಓದಿ:Morning Digest: ಬಿಎಸ್​ವೈ ಕುರ್ಚಿ ಸದ್ಯಕ್ಕೆ ಸೇಫ್?, SSLC, PUC ಪರೀಕ್ಷೆ ಬಗ್ಗೆ ಇಂದು ನಿರ್ಧಾರ; ಪ್ರಮುಖ ಸುದ್ದಿಗಳತ್ತ ಒಂದು ನೋಟ

    ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

    ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್​ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

    ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
    Published by:Latha CG
    First published: