Gold Price Today: ಒಂದೇ ದಿನದಲ್ಲಿ ಚಿನ್ನದ ಬೆಲೆ 800 ರೂ. ಕುಸಿತ; ಬೆಳ್ಳಿ ದರದಲ್ಲೂ ಭಾರೀ ಇಳಿಕೆ

Gold and Silver Price on June 8: ಭಾರತದಲ್ಲಿ ಚಿನ್ನದ ದರ ಭಾರೀ ಕುಸಿತ ಕಂಡಿದೆ. ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,310 ರೂ. ಇದ್ದುದು ಇಂದು 47,510 ರೂ.ಗೆ ಇಳಿಕೆಯಾಗಿದೆ.

ಚಿನ್ನ

ಚಿನ್ನ

  • Share this:
    Gold Rate Today | ದಾಖಲೆಯ ಮೊತ್ತಕ್ಕೇರಿದ್ದ ಚಿನ್ನದ ಬೆಲೆ ಇದೀಗ ಕುಸಿತ ಕಂಡಿದೆ. ಹೀಗಾಗಿ, ನೀವೇನಾದರೂ ಚಿನ್ನ ಕೊಳ್ಳಲು ಯೋಚಿಸುತ್ತಿದ್ದರೆ ವಿವಿಧ ನಗರಗಳಲ್ಲಿ ಯಾವ ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ Gold Price ನಿನ್ನೆ 50,080 ರೂ. ಇದ್ದುದು, ಇಂದು 110 ರೂ. ಕುಸಿತ ಕಾಣುವ ಮೂಲಕ 49,970 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,910 ರೂ. ಇದ್ದುದು ಇಂದು 45,800 ರೂ.ಗೆ ಕುಸಿದಿದೆ. 2 ದಿನಗಳ ಹಿಂದೆ 71,600 ರೂ.ಇದ್ದ Silver Price ಇಂದು 71,000ಕ್ಕೆ ಕುಸಿದಿದೆ.

    ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಹೆಚ್ಚಾಗಿದ್ದ ಬಂಗಾರದ ಬೆಲೆ ಇಂದು ಮತ್ತೆ ಕುಸಿದಿದ್ದು, ನಿನ್ನೆಗಿಂತ ಇಂದು ಬರೋಬ್ಬರಿ 800 ರೂ. ಕುಸಿತ ಕಾಣುವ ಮೂಲಕ ಚಿನ್ನ ಖರೀದಿಸುವವರು ನಿಟ್ಟುಸಿರು ಬಿಡುವಂತೆ ಮಾಡಿದೆ.

    ಇದನ್ನೂ ಓದಿ: Explained: 18 ವರ್ಷ ಮೇಲ್ಪಟ್ಟವರಿಗೆ ಉಚಿತ ಕೊರೋನಾ ಲಸಿಕೆ; ಭಾರತದ ಹೊಸ ಲಸಿಕಾ ನೀತಿಯ ಹೈಲೈಟ್ಸ್​ ಇಲ್ಲಿದೆ

    ಭಾರತದಲ್ಲಿ ಚಿನ್ನದ ದರ ಭಾರೀ ಕುಸಿತ ಕಂಡಿದೆ. ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,310 ರೂ. ಇದ್ದುದು ಇಂದು 47,510 ರೂ.ಗೆ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 49,310 ರೂ. ಇತ್ತು. ಇಂದು ಆ ಬೆಲೆ 48,510ಕ್ಕೆ ಕುಸಿದಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 49,970 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 45,800 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 50,000 ರೂ. ದಾಟಿದೆ.

    ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿಯೂ ಇಂದು ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 71,600 ರೂ. ಇದ್ದುದು ಇಂದು 71,000 ರೂ. ಗೆ ಕುಸಿದಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 71,000 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 75,800 ರೂ. ಆಸುಪಾಸಿನಲ್ಲಿದೆ.

    ಇದನ್ನೂ ಓದಿ: Karnataka Weather Today: ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದಿನಿಂದ ಜೂನ್ 11ರವರೆಗೆ ಮಳೆಯ ಆರ್ಭಟ

    ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

    ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್​ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

    ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
    Published by:Sushma Chakre
    First published: