Gold Price Today: ಏರಿಕೆ ಕಂಡ ಚಿನ್ನದ ಬೆಲೆ; ಯಥಾಸ್ಥಿತಿ ಕಾಯ್ದುಕೊಂಡ ಬೆಳ್ಳಿ ದರ

Gold Price in Bangalore: ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 48,110 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಇಂದು 44,110 ರೂ. ಆಗಿದೆ.

ಚಿನ್ನ

ಚಿನ್ನ

  • Share this:
    Gold Rate Today: ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ನಿನ್ನೆ 48,000 ರೂ. ಇದ್ದುದ್ದು, ಇಂದು 48110 ಆಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ ಇಂದು 44,110 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ವ್ಯತ್ಯಾಸವಾಗಿಲ್ಲ. ನಿನ್ನೆ 1 ಕೆಜಿಗೆ 67,900 ರೂ. ಇತ್ತು. ಇಂದು ಕೂಡ ಬೆಳ್ಳಿ ಬೆಲೆ (Silver Price) ಅದೇ ಬೆಲೆಯನ್ನು ಕಾಯ್ದುಕೊಂಡಿದೆ.

    ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಭಾರತದಲ್ಲಿ ಚಿನ್ನದ ದರ 10 ಗ್ರಾಂಗೆ 10 ರೂ. ಏರಿಕೆಯಾಗಿದೆ. ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,150 ರೂ. ಇದ್ದುದು, ಇಂದು 46,160 ರೂ. ಆಗಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 47,150 ರೂ. ಇದ್ದುದು ಇಂದು 47,160 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.

    ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 48,110 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಇಂದು 44,110 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 51,000 ರೂ.ಗೆ ಸಮೀಪದಲ್ಲಿದೆ.

    ಇದನ್ನೂ ಓದಿ:Horoscope Today: ಇಂದು ಸಂಕಷ್ಟಹರ ಚತುರ್ಥಿ; ಈ ವಾರ ಯಾವ ರಾಶಿಗಳಿಗೆ ಯಾವ ಫಲ? ಇಲ್ಲಿದೆ ಸಂಪೂರ್ಣ ಮಾಹಿತಿ

    ಭಾರತದಲ್ಲಿ ಬೆಳ್ಳಿ ಬೆಲೆಯೂ ಸತತವಾಗಿ ಏರಿಕೆ ಕಂಡಿತ್ತು. ಆದರೆ, ಇಂದು ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ನಿನ್ನೆ ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿಗೆ 200 ರೂ. ಇಳಿಕೆಯಾಗಿತ್ತು. ನಿನ್ನೆ 1 ಕೆಜಿಗೆ 67,900 ರೂ. ಇತ್ತು. ಇಂದು ಅದೇ ಬೆಲೆ ಕಾಯ್ದುಕೊಂಡಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 67,900 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 73,400 ರೂ. ಆಸುಪಾಸಿನಲ್ಲಿದೆ.

    ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

    ಇದನ್ನೂ ಓದಿ:Karnataka Weather Today: ಕರಾವಳಿಯಲ್ಲಿ ಇಂದಿನಿಂದ 3 ದಿನ ಯಲ್ಲೋ ಅಲರ್ಟ್​; ಉ.ಕ.ದಲ್ಲಿ ಮಳೆಯ ಅಬ್ಬರ, ಮನೆಗಳಿಗೆ ನುಗ್ಗಿದ ನೀರು

    ಕೊರೋನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

    ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
    Published by:Latha CG
    First published: