HOME » NEWS » Trend » GOLD PRICE TODAY GOLD RATE RISES BY 110 RUPEES IN 24 HOURS GOLD PRICE FORECAST ON JUNE 1 SILVER PRICE HIKE SCT

Gold Price Today: ಗಗನಕ್ಕೇರಿದ ಚಿನ್ನದ ಬೆಲೆ; ಒಂದೇ ದಿನ 110 ರೂ. ಏರಿಕೆ ಕಂಡ ಬಂಗಾರ!

Gold Price on June 1: ಭಾರತದಲ್ಲಿ ಚಿನ್ನದ ದರ ಮತ್ತೆ ಭಾರೀ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 110 ರೂ. ಹೆಚ್ಚಳವಾಗಿದೆ. ನಿನ್ನೆ 24 ಕ್ಯಾರೆಟ್ ಚಿನ್ನದ ಬೆಲೆ 47,590 ರೂ. ಇದ್ದುದು ಇಂದು 47,700 ರೂ. ಆಗಿದೆ.

news18-kannada
Updated:June 1, 2021, 8:09 AM IST
Gold Price Today: ಗಗನಕ್ಕೇರಿದ ಚಿನ್ನದ ಬೆಲೆ; ಒಂದೇ ದಿನ 110 ರೂ. ಏರಿಕೆ ಕಂಡ ಬಂಗಾರ!
ಚಿನ್ನ
  • Share this:
Gold Rate Today | ಪ್ರತಿಯೊಬ್ಬರಿಗೂ ಚಿನ್ನದ ಮೇಲೆ ವ್ಯಾಮೋಹ ಇದ್ದೇ ಇರುತ್ತದೆ. ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಕಡಿಮೆಯಾಗಿದ್ದ ಬಂಗಾರದ ಬೆಲೆ ಇಂದು ಮತ್ತೆ ಹೆಚ್ಚಳವಾಗಿದ್ದು, ನಿನ್ನೆಗಿಂತ ಇಂದು 110 ರೂ. ಏರಿಕೆಯಾಗುವ ಮೂಲಕ ಚಿನ್ನ ಖರೀದಿಸುವವರಿಗೆ ಶಾಕ್ ನೀಡಿದೆ. ನಿನ್ನೆಗಿಂತ ಇಂದು ಚಿನ್ನದ ಬೆಲೆ 10 ರೂ. ಹೆಚ್ಚಾಗಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ Gold Price ನಿನ್ನೆ 49,960 ಇದ್ದುದು, ಇಂದು 50,070 ರೂ.ಗೆ ಏರಿಕೆಯಾಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,810 ರೂ. ಇದ್ದುದು ಇಂದು 45,900 ರೂ.ಗೆ ಹೆಚ್ಚಳವಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ 50 ಸಾವಿರದ ಗಡಿ ದಾಟಿದೆ. ನಿನ್ನೆ 71,600 ರೂ. ಇದ್ದ Silver Price ಇಂದು 400 ರೂ. ಹೆಚ್ಚಳವಾಗಿದ್ದು, 72,000ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಚಿನ್ನದ ದರ ಮತ್ತೆ ಭಾರೀ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 110 ರೂ. ಹೆಚ್ಚಳವಾಗಿದೆ. ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,590 ರೂ. ಇದ್ದುದು ಒಂದೇ ದಿನದಲ್ಲಿ 46,700 ರೂ.ಗೆ ಏರಿಕೆಯಾಗಿದೆ. ನಿನ್ನೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 47,590 ರೂ. ಇದ್ದುದು ಇಂದು 47,700 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 50,070 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 45,900 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ಇದನ್ನೂ ಓದಿ: Explained: ಮೇ ತಿಂಗಳಲ್ಲಿ ನಿಮ್ಮ ಬ್ಯಾಂಕ್ ಉಳಿತಾಯ ಖಾತೆಯಿಂದ 330 ರೂ. ಕಡಿತಗೊಂಡಿದೆಯೇ? ಇಲ್ಲಿದೆ ಕಾರಣ

ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 50,000 ರೂ. ದಾಟಿದೆ.

ಭಾರತದಲ್ಲಿ ಬೆಳ್ಳಿ ಬೆಲೆ ಭಾರೀ ಏರಿಕೆಯಾಗಿದ್ದು, ನಿನ್ನೆ 71,600 ರೂ. ಇದ್ದುದು ಇಂದು 72 ಸಾವಿರ ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 72,000 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 76,800 ರೂ. ಆಸುಪಾಸಿನಲ್ಲಿದೆ.

ಇದನ್ನೂ ಓದಿ: Mehul Choksi: ಮೆಹುಲ್ ಚೋಕ್ಸಿಯಿಂದ ಲಾಭ ಪಡೆದು ಪೌರತ್ವ ಕೊಟ್ಟವರೇ ನಮ್ಮ ಮೇಲೆ ಆರೋಪಿಸುತ್ತಿದ್ದಾರೆ; ಆ್ಯಂಟಿಗುವಾ ಪ್ರಧಾನಿ ವಿರುದ್ಧ ವಿಪಕ್ಷ ಟೀಕೆ

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್​ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.
Youtube Video

ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
Published by: Sushma Chakre
First published: June 1, 2021, 8:09 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories